Home Bibles ದ್ವಿತೀಯೋಪದೇಶಕಾಂಡ 29:18 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 29:18 · ಕನ್ನಡ ಬೈಬಲ್

ಈಹೊತ್ತು ನಮ್ಮ ದೇವರಾದ ಕರ್ತನನ್ನು ಬಿಟ್ಟು ಆ ಜನಾಂಗಗಳ ದೇವರುಗಳಿಗೆ ಸೇವೆಮಾಡುವದಕ್ಕೆ ತಿರುಗಿಕೊಳ್ಳುವ ಹೃದಯವುಳ್ಳ ಪುರುಷನಾದರೂ ಸ್ತ್ರೀಯಾದರೂ ಕುಟುಂಬವಾದರೂ ಗೋತ್ರವಾದರೂ ಇರಬಾರದು. ವಿಷವನ್ನೂ ಮಾಚಿಪತ್ರೆಯನ್ನೂ ಬೆಳೆ ಸುವ ಬೇರು ನಿಮ್ಮಲ್ಲಿ ಇರಬಾರದು.

Cross references

ದ್ವಿತೀಯೋಪದೇಶಕಾಂಡ 11:16

ನಿಮ್ಮ ಹೃದಯವು ಮರುಳುಗೊಳ್ಳದ ಹಾಗೆಯೂ ನೀವು ಓರೆಯಾಗಿ ಹೋಗಿ ಬೇರೆ ದೇವರುಗಳನ್ನು ಸೇವಿಸಿ ಅಡ್ಡಬೀಳದ ಹಾಗೆಯೂ

ದ್ವಿತೀಯೋಪದೇಶಕಾಂಡ 13:1

ಪ್ರವಾದಿಯಾಗಲಿ ಕನಸುಗಳನ್ನು ಕಾಣುವವನಾಗಲಿ ನಿಮ್ಮ ಮಧ್ಯದಲ್ಲಿ ಎದ್ದು ನಿನಗೆ ಸೂಚನೆಯನ್ನಾದರೂ ಅದ್ಭುತವನ್ನಾದರೂ ತೋರಿಸಿ ದರೆ

ದ್ವಿತೀಯೋಪದೇಶಕಾಂಡ 17:2

ನಿನ್ನ ದೇವರಾದ ಕರ್ತನ ಮುಂದೆ ಕೆಟ್ಟದ್ದನ್ನು ಮಾಡಿ ಆತನ ಒಡಂಬಡಿಕೆಯನ್ನು ವಿಾರಿ ಬಿಟ್ಟು

ಕೀರ್ತನೆಗಳು 10:13

ದುಷ್ಟನು ದೇವರನ್ನು ಅಲಕ್ಷ್ಯಮಾಡುವದು ಯಾಕೆ? --ನೀನು ಅದನ್ನು ವಿಚಾರಿಸುವದಿಲ್ಲವೆಂದು ಅವನು ತನ್ನ ಹೃದಯದಲ್ಲಿ ಹೇಳಿಕೊಂಡಿದ್ದಾನೆ.

ಯೆರೆಮಿಯ 9:15

ಅವು ವ್ಯರ್ಥವೇ, ತಪ್ಪಾದ ಕೆಲಸವೇ; ಅವು ವಿಚಾ ರಿಸಲ್ಪಡುವ ಕಾಲದಲ್ಲಿ ನಾಶವಾಗುವವು.

ಹೊಶೇಯ 10:4

ಅವರು ಮಾತುಗಳನ್ನಾಡಿ ಒಡಂಬಡಿಕೆಯನ್ನು ಮಾಡು ವದಕ್ಕೆ ಸುಳ್ಳು ಪ್ರಮಾಣ ವನ್ನು ಮಾಡುತ್ತಾರೆ. ಆದದ ರಿಂದ ನ್ಯಾಯತೀರ್ಪು ವಿಷದ ಕಳೆಯ ಹಾಗೆ ಹೊಲದ ಸಾಲುಗಳಲ್ಲಿ ಮೊಳೆಯುತ್ತದೆ.

ಆಮೋಸ 6:12

ಕುದುರೆಗಳು ಬಂಡೆಯ ಮೇಲೆ ಓಡುವದುಂಟೇ? ಎತ್ತುಗಳಿಂದ ಅಲ್ಲಿ ಉಳುವನೋ? ನಿಮ್ಮ ನ್ಯಾಯವನ್ನು ವಿಷಕ್ಕೂ ನೀತಿ ಫಲವನ್ನು ಮಾಚಿಪತ್ರೆಗೂ ಬದಲಾಯಿ ಸಿದ್ದೀರಿ.

ಅಪೋಸ್ತಲರ ಕೃತ್ಯಗಳು 8:23

ಯಾಕಂದರೆ ನೀನು ಹಾನಿಕರ ವಾದ ವಿಷದಲ್ಲಿಯೂ ದುಷ್ಟತ್ವದ ಬಂಧನದಲ್ಲಿಯೂ ಇರುತ್ತೀಯೆಂದು ನನಗೆ ಕಾಣುತ್ತದೆ ಅಂದನು.

ಹೆಬ್ರಿಯರಿಗೆ 3:12

ಸಹೋದರರೇ, ಎಚ್ಚರಿಕೆಯಿಂದ ನೋಡಿಕೊ ಳ್ಳಿರಿ; ಜೀವಸ್ವರೂಪನಾದ ದೇವರನ್ನು ಬಿಟ್ಟು ಹೋಗುವ ಅಪನಂಬಿಕೆಯುಳ್ಳ ಕೆಟ್ಟ ಹೃದಯವು ನಿಮ್ಮೊಳಗೆ ಯಾವನಲ್ಲಿಯೂ ಇರಬಾರದು.

ಹೆಬ್ರಿಯರಿಗೆ 12:15

ನಿಮ್ಮಲ್ಲಿ ಯಾವನಾದರೂ ದೇವರ ಕೃಪೆಗೆ ತಪ್ಪಿ ಹೋಗ ದಂತೆಯೂ ಯಾವ ವಿಷವುಳ್ಳ ಬೇರೂ ನಿಮ್ಮಲ್ಲಿ ಚಿಗುರಿ ಕಳವಳ ಹುಟ್ಟಿಸಿ ಅದರಿಂದ ಅನೇಕರು ಅಶುದ್ಧರಾಗ ದಂತೆಯೂ

Interlinear

Choose Theme