Home Bibles ದ್ವಿತೀಯೋಪದೇಶಕಾಂಡ 29:25 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 29:25 · ಕನ್ನಡ ಬೈಬಲ್

ಆಗ ಜನರು--ಅವರು ತಮ್ಮನ್ನು ಐಗುಪ್ತ ದೇಶದೊಳಗಿಂದ ಹೊರಗೆ ತರುವಾಗ ತಮ್ಮ ಪಿತೃಗಳ ದೇವರಾದ ಕರ್ತನು ತಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆತುಬಿಟ್ಟು,

Cross references

1 ಅರಸುಗಳು 9:8

ಇಸ್ರಾಯೇಲು ಸಮಸ್ತ ಜನಗಳಲ್ಲಿ ಗಾದೆ ಯಾಗಿಯೂ ಅಪಹಾಸ್ಯವಾಗಿಯೂ ಇರುವದು. ಇದ ಲ್ಲದೆ ಈ ಎತ್ತರವಾಗಿರುವ ಮನೆಯನ್ನು ಹಾದುಹೋಗು ವವರೆಲ್ಲರೂ ಅದಕ್ಕೆ ಆಶ್ಚರ್ಯಪಟ್ಟು--ಛೀ ಅಂದುಕರ್ತನು ಈ ದೇಶಕ್ಕೂ ಈ ಮಂದಿರಕ್ಕೂ ಹೀಗೆ ಯಾಕೆ ಮಾಡಿದನು ಎಂದು ಅನ್ನುವರು.

1 ಅರಸುಗಳು 19:10

ಅದಕ್ಕವನು--ಸೈನ್ಯಗಳ ದೇವ ರಾದ ಕರ್ತನಿಗೋಸ್ಕರ ನಾನು ಬಹು ರೋಷವುಳ್ಳವ ನಾಗಿದ್ದೇನೆ; ಯಾಕಂದರೆ ಇಸ್ರಾಯೇಲಿನ ಮಕ್ಕಳು ನಿನ್ನ ಒಡಂಬಡಿಕೆಯನ್ನು ಬಿಟ್ಟು ನಿನ್ನ ಬಲಿ ಪೀಠಗಳನ್ನು ಕೆಡವಿ ನಿನ್ನ ಪ್ರವಾದಿಗಳನ್ನು ಕತ್ತಿಯಿಂದ ಕೊಂದು ಹಾಕಿದ್ದಾರೆ; ನಾನು ಹೌದು, ನಾನೊಬ್ಬನೇ ಉಳಿದಿ ದ್ದೇನೆ; ಆದರೆ ಅವರು ನನ್ನ ಪ್ರಾಣವನ್ನು ತೆಗೆದುಬಿಡಲು ಹುಡುಕುತ್ತಾರೆ ಅಂದನು.

ಕೀರ್ತನೆಗಳು 106:36

ಅವರ ವಿಗ್ರಹಗಳಿಗೆ ಸೇವೆ ಮಾಡಿದರು ಅವು ಅವರಿಗೆ ನೇಣು ಆದವು.

ಯೆಶಾಯ 24:1

ಇಗೋ, ಕರ್ತನು ಭೂಮಿಯನ್ನು (ಲೋಕವನ್ನು) ಬರಿದುಮಾಡಿ ನಿರ್ಜನ ಪ್ರದೇಶ ವನ್ನಾಗಿ ಮಾಡಿ ತಲೆಕೆಳಕಾಗಿ ತಿರುಗಿಸಿ ಅದರ ನಿವಾಸಿ ಗಳನ್ನು ಚದರಿಸಿಬಿಡುವವನಾಗಿದ್ದಾನೆ.

ಯೆಶಾಯ 47:6

ನಾನು ನಿನ್ನ ಜನರ ಮೇಲೆ ರೋಷಗೊಂಡು, ನನ್ನ ಸ್ವಾಸ್ಥ್ಯವನ್ನು ಅಪವಿತ್ರ ಮಾಡಿ, ನಿನ್ನ ಕೈಯಲ್ಲಿ ಅವರನ್ನು ಒಪ್ಪಿಸಿಬಿಟ್ಟೆನು; ನೀನು ಅವರಿಗೆ ಕರುಣೆಯನ್ನು ತೋರಿಸದೆ ಮುದುಕರ ಮೇಲೆಯೂ ಬಹು ಭಾರವಾದ ನೊಗವನ್ನು ಹೊರಿ ಸಿದಿ.

ಯೆರೆಮಿಯ 22:8

ಆದರೆ ಕರ್ತನ ಜೀವದಾಣೆ, ಇಸ್ರಾಯೇಲಿನ ಮನೆತನದವರ ಸಂತಾನವನ್ನು ಉತ್ತರ ದೇಶದಿಂದಲೂ ತಾನು ಅವರನ್ನು ಹೊರಡಿಸಿ ಬಿಟ್ಟಿದ್ದ ಎಲ್ಲಾ ದೇಶ ಗಳಿಂದಲೂ ಬರಮಾಡಿದನು ಎಂದು ಹೇಳುವರು; ಅವರು ತಮ್ಮ ದೇಶದಲ್ಲಿ ವಾಸಮಾಡುವರು.

ಯೆರೆಮಿಯ 22:9

ಪ್ರವಾದಿಗಳ ನಿಮಿತ್ತ ನನ್ನ ಹೃದಯವು ನನ್ನಲ್ಲಿ ಮುರಿದಿದೆ; ನನ್ನ ಎಲುಬುಗಳೆಲ್ಲಾ ಕದಲುತ್ತವೆ; ಕರ್ತನ ನಿಮಿತ್ತವೂ ಆತನ ಪರಿಶುದ್ಧ ವಾಕ್ಯಗಳ ನಿಮಿತ್ತವೂ ಮತ್ತನಾದ ಮನುಷ್ಯನ ಹಾಗೆಯೂ ದ್ರಾಕ್ಷಾರಸಕ್ಕೆ ಒಳಗಾದ ಪುರುಷನ ಹಾಗೆಯೂ ಇದ್ದೇನೆ.

ಯೆರೆಮಿಯ 31:32

ಇಸ್ರಾಯೇಲಿನ ಮಕ್ಕಳೂ ಯೆಹೂದನ ಮಕ್ಕಳೂ ಅವರ ಅರಸರೂ ಪ್ರಧಾನರೂ ಯಾಜಕರೂ ಪ್ರವಾದಿ ಗಳೂ ಯೆಹೂದದ ಜನರೂ ಯೆರೂಸಲೇಮಿನ ನಿವಾಸಿಗಳೂ ಸಹಿತವಾಗಿ ನನಗೆ ಕೋಪೋದ್ರೇಕ ಎಬ್ಬಿಸುವ ಹಾಗೆ ಮಾಡಿದ ಎಲ್ಲಾ ಕೆಟ್ಟತನದ ನಿಮಿತ್ತ ನಾನು ಆ ಪಟ್ಟಣವನ್ನು ನನ್ನ ಸನ್ನಿಧಿಯಿಂದ ತೆಗೆದುಹಾಕಬೇಕು.

ಯೆರೆಮಿಯ 40:2

ಆಗ ನೆತನ್ಯನ ಮಗನಾದ ಇಷ್ಮಾಯೇಲನು ತನ್ನ ಸಂಗಡ ಇದ್ದ ಹತ್ತು ಮಂದಿ ಮನುಷ್ಯರ ಸಹಿತವಾಗಿ ಎದ್ದು ಬಾಬೆಲಿನ ಅರಸನು ದೇಶದ ಮೇಲೆ ನೇಮಿಸಿದ್ದ ಶಾಫಾನನ ಮಗನಾದ ಅಹೀಕಾಮನ ಮಗನಾದ ಗೆದಲ್ಯನನ್ನು ಕತ್ತಿಯಿಂದ ಹೊಡೆದು ಕೊಂದುಹಾಕಿ ದರು.

ಯೆರೆಮಿಯ 44:3

ಕರ್ತನು ನನ್ನ ವ್ಯಥೆಗೆ ದುಃಖವನ್ನು ಕೂಡಿಸಿದ್ದಾನೆ; ನಿಟ್ಟುಸುರು ಬಿಡುವದರಿಂದ ದಣಿದಿ ದ್ದೇನೆ; ವಿಶ್ರಾಂತಿಯನ್ನು ಕಾಣೆನೆಂದು ನೀನು ಹೇಳಿದಿ ಯಲ್ಲಾ.

ಯೆರೆಮಿಯ 50:7

ಬಾಬೆಲ್‌ ಕರ್ತನ ಕೈಯಲ್ಲಿ ಭೂಮಿಗೆಲ್ಲಾ ಅಮಲೇರಿ ಸಿದ ಚಿನ್ನದ ಪಾತ್ರೆಯಾಗಿತ್ತು; ಜನಾಂಗಗಳು ಅದರ ದ್ರಾಕ್ಷಾರಸವನ್ನು ಕುಡಿದವು; ಆದದರಿಂದ ಜನಾಂಗ ಗಳು ಹುಚ್ಚರಾದರು.

ಹೆಬ್ರಿಯರಿಗೆ 8:9

ಈ ಒಡಂಬಡಿಕೆಯು ನಾನು ಇವರ ಪಿತೃಗಳನ್ನು ಕೈಹಿಡಿದು ಐಗುಪ್ತದೇಶ ದೊಳಗಿಂದ ಕರಕೊಂಡು ಬಂದ ದಿನದಲ್ಲಿ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲವಾ ದದರಿಂದ ನಾನು ಅವರನ್ನು ಲಕ್ಷ್ಯಕ್ಕೆ ತರಲಿಲ್ಲ ಎಂದು ಕರ್ತನು ಹೇಳುತ್ತಾನೆ.

Interlinear

Choose Theme