Home Bibles ದ್ವಿತೀಯೋಪದೇಶಕಾಂಡ 3:12 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 3:12 · ಕನ್ನಡ ಬೈಬಲ್

ಆ ಕಾಲದಲ್ಲಿ ನಾವು ಸ್ವತಂತ್ರಿಸಿಕೊಂಡ ದೇಶವನ್ನು ಅರ್ನೋನ್‌ ನದಿಯ ಸವಿಾಪದಲ್ಲಿರುವ ಅರೋಯೇರಿನಿಂದ ಮೊದಲ್ಗೊಂಡು ಅರ್ಧ ಗಿಲ್ಯಾದ್‌ ಬೆಟ್ಟವನ್ನೂ ಅದರ ಪಟ್ಟಣಗಳನ್ನೂ ರೂಬೇನನ ಮನೆಯವರಿಗೂ ಗಾದನ ಮನೆಯವರಿಗೂ ಕೊಟ್ಟೆನು.

Cross references

ಅಂಕೆಗಳ ಪುಸ್ತಕ 32:32

ನಾವು ಯುದ್ಧಕ್ಕೆ ಸಿದ್ಧವಾಗಿ ಕರ್ತನ ಮುಂದೆ ಕಾನಾನ್‌ ದೇಶಕ್ಕೆ ದಾಟಿ ಹೋಗುವೆವು; ಆದರೆ ಯೊರ್ದನ್‌ ನದಿಯ ಈಚೆ ಯಲ್ಲಿರುವ ನಮ್ಮ ಸ್ವಾಸ್ತ್ಯದ ಭಾಗವೇ ನಮಗಿರಲಿ ಎಂದು ಹೇಳಿದರು.

ಅಂಕೆಗಳ ಪುಸ್ತಕ 32:33

ಹಾಗೆಯೇ ಮೋಶೆಯು ಗಾದನ ಮಕ್ಕಳಿಗೂ ರೂಬೇನನ ಮಕ್ಕಳಿಗೂ ಯೋಸೇಫನ ಮಗನಾದ ಮನಸ್ಸೆಯ ಅರ್ಧ ಗೋತ್ರಕ್ಕೂ ಅಮೋರಿಯರ ಅರಸ ನಾದ ಸೀಹೋನನ ರಾಜ್ಯವನ್ನೂ ಬಾಷಾನಿನ ಅರಸ ನಾದ ಓಗನ ರಾಜ್ಯವನ್ನೂ ಅದರ ಭೂಮಿಯನ್ನೂ ಅದರ ಮೇರೆಗಳಲ್ಲಿ ಸುತ್ತಮುತ್ತಲಿನ ಪಟ್ಟಣಗಳನ್ನೂ ಕೊಟ್ಟನು.

ದ್ವಿತೀಯೋಪದೇಶಕಾಂಡ 2:36

ಅರ್ನೋನಿನ ತೀರದಲ್ಲಿರುವ ಅರೋ ಯೇರ್‌ ಮತ್ತು ಆ ಹಳ್ಳದ ಪಟ್ಟಣವು ಮೊದಲ್ಗೊಂಡು ಗಿಲ್ಯಾದಿನ ವರೆಗೂ ಒಂದು ಪಟ್ಟಣವಾದರೂ ನಮಗೆ ಅಸಾಧ್ಯವಾಗಿರಲಿಲ್ಲ; ನಮ್ಮ ದೇವರಾದ ಕರ್ತನು ಅವುಗಳನ್ನೆಲ್ಲಾ ನಮ್ಮ ಕೈಗೆ ಒಪ್ಪಿಸಿದನು.ಅಮ್ಮೋನಿಯರ ಮಕ್ಕಳ ದೇಶಕ್ಕೂ ಯಬ್ಬೋಕ್‌ ನದಿಯ ಯಾವ ದೊಂದು ಸ್ಥಳಕ್ಕೂ ಪರ್ವತ ಪಟ್ಟಣಗಳಿಗೂ ನಮ್ಮ ದೇವರಾದ ಕರ್ತನು ನಮಗೆ ಬೇಡವೆಂದ ಯಾವ ಸ್ಥಳಕ್ಕೂ ನೀನು ಮಾತ್ರ ಬರಲಿಲ್ಲ.

ದ್ವಿತೀಯೋಪದೇಶಕಾಂಡ 4:48

ಅರ್ನೋನ್‌ ನದಿಯ ತೀರದಲ್ಲಿರುವ ಅರೋ ಯೇರ್‌ ಮೊದಲುಗೊಂಡು ಹೆರ್ಮೋನೆಂಬ ಸೀಯೋನ್‌ ಪರ್ವತದ ವರೆಗೆಯೊರ್ದನಿನ ಈಚೆಯಲ್ಲಿರುವ ಮೂಡಣ ದಿಕ್ಕಿನಲ್ಲಿ ಇರುವ ಎಲ್ಲಾ ಬೈಲುಗಳನ್ನು ಸಹ ಪಿಸ್ಗಾದ ಊಟೆಗಳಲ್ಲಿರುವ ಬೈಲಿನ ಸಮುದ್ರದ ವರೆಗೆ ಸ್ವಾಧೀನಮಾಡಿಕೊಂಡರು.

ದ್ವಿತೀಯೋಪದೇಶಕಾಂಡ 29:7

ನೀವು ಈ ಸ್ಥಳಕ್ಕೆ ಬಂದಾಗ ಹೆಷ್ಬೋನಿನ ಅರಸನಾದ ಸೀಹೋನನೂ ಬಾಷಾನಿನ ಅರಸನಾದ ಓಗನೂ ನಮ್ಮೆದುರಿಗೆ ಯುದ್ಧಕ್ಕೆ ಬರಲಾಗಿ ನಾವು ಅವರನ್ನು ಹೊಡೆದು

ಯೆಹೋಶುವ 12:2

ಅರ್ನೋನ್‌ ನದಿಯ ಮಧ್ಯಭಾಗ, ದಡದ ಬಳಿಯಲ್ಲಿ ಇರುವ ಅರೋಯೇರಿ ನಿಂದಲೂ ಅರ್ಧ ಗಿಲ್ಯಾದಿನಿಂದಲೂ ಅಮ್ಮೋನನ ಮಕ್ಕಳ ಮೇರೆಯಾದ ಯಬ್ಬೋಕ್‌ ನದಿಯ ವರೆಗೆ

ಯೆಹೋಶುವ 13:8

ಅವರ ಸಂಗಡ ರೂಬೇನ್ಯರೂ ಗಾದ್ಯರೂ ತಮ್ಮ ಬಾಧ್ಯತೆಯನ್ನು ಹೊಂದಿದರು. ಏನಂದರೆ ಕರ್ತನ ಸೇವಕನಾದ ಮೋಶೆಯು ಯೊರ್ದನಿಗೆ ಆಚೆ ಸೂರ್ಯೋದಯದ ದಿಕ್ಕಿನಲ್ಲಿ ಅವರಿಗೆ ಕೊಡಲ್ಪಟ್ಟಿತು. ಅವುಗಳು ಯಾವವೆಂದರೆ:

2 ಅರಸುಗಳು 10:33

ಮೂಡಣದಲ್ಲಿ ಯೊರ್ದನ್‌ ಮೊದಲುಗೊಂಡು ಗಾದ್ಯರೂ ರೂಬೆನ್ಯರೂ ವಾಸ ವಾಗಿದ್ದ ಗಿಲ್ಯಾದಿನ ಎಲ್ಲಾ ದೇಶವನ್ನೂ ಅರ್ನೋನ್‌ ನದಿಯ ಬಳಿಯಲ್ಲಿರುವ ಅರೋಯೇರ್‌ ಮೊದಲು ಗೊಂಡು ಮನಸ್ಸೆಯವರು ನಿವಾಸವಾಗಿದ್ದ ಗಿಲ್ಯಾದ್‌ ಬಾಶಾನ್‌ ಸಂಹರಿಸಿದನು.

Interlinear

Choose Theme