ನಾನು ಜೀವವನ್ನೂ ಮರಣವನ್ನೂ, ಆಶೀರ್ವಾದವನ್ನೂ ಶಾಪ ವನ್ನೂ ನಿನ್ನ ಮುಂದೆ ಇಟ್ಟಿದ್ದೇನೆಂಬದಕ್ಕೆ ಆಕಾಶವನ್ನೂ ಭೂಮಿಯನ್ನೂ ಈಹೊತ್ತು ನಿಮ್ಮ ಮೇಲೆ ಸಾಕ್ಷಿಗಳಾಗಿ ಕರೆಯುತ್ತೇನೆ.
Cross references
ಆದದರಿಂದ ನೀವು ನನ್ನ ನಿಯಮಗಳನ್ನೂ ನಿರ್ಣಯಗಳನ್ನೂ ಕೈಕೊಳ್ಳಿರಿ. ಒಬ್ಬನು ಅವುಗಳನ್ನು ಮಾಡಿದರೆ ಅವನು ಅವುಗಳಲ್ಲಿ ಜೀವಿಸುವನು; ನಾನೇ ಕರ್ತನು.
ಇಗೋ, ಆ ದೇಶವನ್ನು ನಿಮ್ಮ ಮುಂದೆ ಇಟ್ಟಿದ್ದೇನೆ; ಹೋಗಿ ಕರ್ತನು ನಿಮ್ಮ ಪಿತೃಗಳಾದ ಅಬ್ರಹಾಮ ಇಸಾಕ ಯಾಕೋಬರಿಗೂ ಅವರ ತರುವಾಯ ಹುಟ್ಟುವ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣಮಾಡಿದ ದೇಶವನ್ನು ಸ್ವತಂತ್ರಿಸಿಕೊಳ್ಳಿರಿ ಎಂದು ಹೇಳಿದನು.
ಆದರೆ ನಿಮ್ಮ ದೇವರಾದ ಕರ್ತನಿಗೆ ಅಂಟಿಕೊಂಡವರಾದ ನೀವೆಲ್ಲರು ಇಂದು ಬದುಕುತ್ತೀರಿ.
ನಿನಗೂ ನಿನ್ನ ತರುವಾಯ ನಿನ್ನ ಮಕ್ಕಳಿಗೂ ಒಳ್ಳೇದಾಗುವ ಹಾಗೆಯೂ ನಿನ್ನ ದೇವರಾದ ಕರ್ತನು ನಿನಗೆ ಸದಾಕಾಲಕ್ಕೆ ಕೊಡುವ ಭೂಮಿಯ ಮೇಲೆ ನೀನು ಬಹಳ ದಿವಸವಿರುವ ಹಾಗೆಯೂ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಆತನ ನಿಯಮ ಗಳನ್ನೂ ಆಜ್ಞೆಗಳನ್ನೂ ಕಾಪಾಡು ಎಂದು ಹೇಳಿದನು.
ನಿನ್ನ ದಿವಸಗಳು ಹೆಚ್ಚಾಗುವ ಹಾಗೆಯೂ ನಿನ್ನ ದೇವರಾದ ಕರ್ತನು ನಿನಗೆ ಕೊಡುವ ಭೂಮಿಯಲ್ಲಿ ನಿನಗೆ ಒಳ್ಳೇದಾಗುವ ಹಾಗೆಯೂ ನಿನ್ನ ದೇವರಾದ ಕರ್ತನು ಆಜ್ಞಾಪಿಸಿದಂತೆ ನಿನ್ನ ತಂದೆಯನ್ನೂ ನಿನ್ನ ತಾಯಿಯನ್ನೂ ಸನ್ಮಾನಿಸು.
ನೀನು ನಿನ್ನ ದೇವರಾದ ಕರ್ತನಿಗೆ ಭಯಪಟ್ಟು ನಾನು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ನಿಯಮಗಳನ್ನು ಮತ್ತು ಆಜ್ಞೆಗಳನ್ನು ನೀನೂ ನಿನ್ನ ಮಗನೂ ನಿನ್ನ ಮೊಮ್ಮ ಗನೂ ನಿನ್ನ ಜೀವಿತದ ದಿವಸಗಳಲ್ಲೆಲ್ಲಾ ಕೈಕೊ ಳ್ಳುವ ಹಾಗೆಯೂ ನಿನ್ನ ದಿವಸಗಳು ಬಹಳವಾಗುವ ಹಾಗೆಯೂ ನಿಮಗೆ ಬೋಧಿಸಬೇಕೆಂದು ನಿಮ್ಮ ದೇವ ರಾದ ಕರ್ತನು ಆಜ್ಞಾಪಿಸಿದ ಆಜ್ಞೆ ವಿಧಿ ನ್ಯಾಯ ಗಳು ಇವೇ.
ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ಪೂರ್ಣ ಪ್ರಾಣದಿಂದಲೂ ಪೂರ್ಣಬಲದಿಂದಲೂ ಪ್ರೀತಿ ಮಾಡಬೇಕು.
ಈಗ ಇಸ್ರಾಯೇಲೇ, ನಿನ್ನ ಕರ್ತನಾದ ದೇವರಿಗೆ ಭಯಪಟ್ಟು ಆತನ ಎಲ್ಲಾ ಮಾರ್ಗಗಳಲ್ಲಿ ನಡೆದು ಕೊಂಡು ಆತನನ್ನು ಪ್ರೀತಿಮಾಡಿ ನಿನ್ನ ಕರ್ತನಾದ ದೇವರಿಗೆ ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಸೇವೆಮಾಡಿ
ನಿನ್ನ ಕರ್ತನಾದ ದೇವರಿಗೆ ನೀನು ಭಯಪಡಬೇಕು; ಆತನ ಸೇವೆಮಾಡಿ ಆತನಿಗೆ ಅಂಟಿಕೊಂಡು ಆತನ ಹೆಸರಿನಲ್ಲಿ ಪ್ರಮಾಣಮಾಡಬೇಕು.
ಕರ್ತನು ನಿಮ್ಮ ಪಿತೃಗಳಿಗೂ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣ ಮಾಡಿದ ಭೂಮಿಯಾಗಿರುವ ಆ ಹಾಲೂ ಜೇನೂ ಹರಿಯುವ ದೇಶದಲ್ಲಿ ನಿಮ್ಮ ದಿನಗಳು ಬಹಳವಾಗುವ ಹಾಗೆಯೂ ನಾನು ಈಹೊತ್ತು ನಿಮಗೆ ಆಜ್ಞಾಪಿಸುವ ಆಜ್ಞೆಯನ್ನೆಲ್ಲಾ ಕೈಕೊಳ್ಳಬೇಕು.
ನಾನು ನಿಮಗೆ ಆಜ್ಞಾಪಿಸುವ ಈ ಆಜ್ಞೆಗಳನ್ನೆಲ್ಲಾ ನೀವು ಎಚ್ಚರಿಕೆಯಿಂದ ಕೈಕೊಂಡು ಅವುಗಳಂತೆ ಮಾಡಿರಿ. ನಿಮ್ಮ ದೇವರಾದ ಕರ್ತನನ್ನು ಪ್ರೀತಿಮಾಡಿ ಆತನ ಎಲ್ಲಾ ಮಾರ್ಗಗಳಲ್ಲಿ ನಡೆದು ಆತನನ್ನು ಅಂಟಿಕೊಂಡರೆ
ಆದರೆ ನೀವು ಯೊರ್ದನನ್ನು ದಾಟಿದ ಮೇಲೆ ನಿಮ್ಮ ದೇವರಾದ ಕರ್ತನು ನಿಮಗೆ ಸ್ವಾಸ್ತ್ಯವಾಗಿ ಕೊಡುವ ದೇಶದಲ್ಲಿ ವಾಸಮಾಡುವಾಗ ಆತನು ಸುತ್ತಲಿ ರುವ ಎಲ್ಲಾ ಶತ್ರುಗಳಿಂದ ನಿಮ್ಮನ್ನು ತಪ್ಪಿಸಿ ನಿಮಗೆ ವಿಶ್ರಾಂತಿ ಕೊಟ್ಟ ಮೇಲೆ
ಆಗ ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಪ್ರೀತಿಮಾಡಿ ನೀನು ಬದು ಕುವ ಹಾಗೆ ಆತನು ನಿನ್ನ ಹೃದಯವನ್ನೂ ನಿನ್ನ ಸಂತತಿಯ ಹೃದಯವನ್ನೂ ಪರಿಛೇದಿಸುವನು.
ನಿನ್ನ ದೇವರಾದ ಕರ್ತನನ್ನು ಪ್ರೀತಿಮಾಡಿ ಆತನ ಮಾರ್ಗಗಳಲ್ಲಿ ನಡೆದುಕೊಂಡು ಆತನ ಆಜ್ಞೆ, ನಿಯಮ, ನ್ಯಾಯಗಳನ್ನು ಕಾಪಾಡಬೇಕೆಂದು ಈ ಹೊತ್ತು ನಿಮಗೆ ಆಜ್ಞಾಪಿಸಿದ್ದೇನೆ; ಹಾಗೆ ಮಾಡಿದರೆ ನೀನು ಬದುಕಿ ಹೆಚ್ಚುವಿ; ನೀನು ಸ್ವಾಧೀನಮಾಡಿ ಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ಆಶೀರ್ವದಿಸುವನು.
ಇದು ನಿಮಗೆ ವ್ಯರ್ಥವಾದದ್ದಲ್ಲ, ಇದು ನಿಮ್ಮ ಜೀವವೇ. ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಯೊರ್ದನನ್ನು ದಾಟುವ ಭೂಮಿಯಲ್ಲಿ ಇದರಿಂದಲೇ ನಿಮ್ಮ ದಿವಸಗಳನ್ನು ಹೆಚ್ಚಿಸಿಕೊಳ್ಳುವಿರಿ ಎಂದು ಹೇಳಿದನು.
ಈ ದಿನದ ವರೆಗೂ ಮಾಡಿದ ಹಾಗೆಯೇ ನಿಮ್ಮ ದೇವರಾದ ಕರ್ತನನ್ನು ಅಂಟಿಕೊಂಡಿರ್ರಿ.
ಆದದರಿಂದ ನೀವು ನಿಮ್ಮ ದೇವರಾದ ಕರ್ತನನ್ನು ಪ್ರೀತಿಮಾಡುವ ಹಾಗೆ ನೀವು ಬಹಳ ಎಚ್ಚರಿಕೆಯಾಗಿರ್ರಿ.
ಕರ್ತನು ನನ್ನ ಬೆಳಕೂ ರಕ್ಷಣೆಯೂ ಆಗಿದ್ದಾನೆ; ನಾನು ಯಾರಿಗೆ ಭಯಪಡು ವೆನು? ಕರ್ತನು ನನ್ನ ಜೀವದ ಬಲವಾಗಿದ್ದಾನೆ; ನಾನು ಯಾರಿಗೆ ಹೆದರುವೆನು?
ಆತನ ಕೋಪವು ಕ್ಷಣಮಾತ್ರ. ಆತನ ಕಟಾಕ್ಷವು ಜೀವವೇ; ರಾತ್ರಿಯಲ್ಲಿ ದುಃಖವು ತಂಗಬಹುದಾದರೂ ಬೆಳಿಗ್ಗೆ ಆನಂದವು ಬರುವದು.
ನಿನ್ನ ಬಳಿಯಲ್ಲಿ ಜೀವದ ಬುಗ್ಗೆ ಉಂಟು. ನಿನ್ನ ತೇಜಸ್ಸಿನ ಬೆಳಕನ್ನು ನೋಡುವೆವು.
ಆತನು ನಮ್ಮ ಪ್ರಾಣವನ್ನು ಜೀವದಲ್ಲಿಟ್ಟು ನಮ್ಮ ಪಾದಗಳನ್ನು ಕದಲುವಂತೆ ಬಿಡಲಿಲ್ಲ.
ಯೇಸು ಆಕೆಗೆ--ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ; ನನ್ನಲ್ಲಿ ನಂಬಿಕೆ ಇಡುವವನು ಸತ್ತರೂ ಬದುಕುವನು;
ಯೇಸು ಅವನಿಗೆ--ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.
ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನೂ ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ಅವರು ಅರಿತು ಕೊಳ್ಳುವದೇ ನಿತ್ಯಜೀವ.
ಅವನು ಬಂದು ದೇವರ ಕೃಪೆಯನ್ನು ನೋಡಿ ಸಂತೋಷಪಟ್ಟು ದೃಢಮನಸ್ಸಿನಿಂದ ಕರ್ತನನ್ನು ಅಂಟಿ ಕೊಂಡಿರಬೇಕೆಂದು ಅವರೆಲ್ಲರನ್ನು ಪ್ರೇರೇಪಿಸಿದನು.
ಇಲ್ಲವೆ ತಾನೇ ಎಲ್ಲರಿಗೆ ಜೀವವನ್ನು ಶ್ವಾಸವನ್ನು ಎಲ್ಲವನ್ನು ಕೊಡುವಾತ ನಾಗಿರಲಾಗಿ ಕೊರತೆಯಿದ್ದವನಂತೆ ಮನುಷ್ಯರ ಕೈಗಳಿಂದ ಆರಾಧನೆ ಹೊಂದುವಾತನಲ್ಲ;
ಆತನಲ್ಲಿಯೇ ನಾವು ಜೀವಿಸುತ್ತೇವೆ ಚಲಿಸುತ್ತೇವೆ ಇರುತ್ತೇವೆ. ನಿಮ್ಮ ಸ್ವಂತ ಕವಿಗಳಲ್ಲಿಯೂ ಕೆಲವರು--ನಾವೂ ಆತನ ಸಂತಾನದವರೇ ಎಂಬ ದಾಗಿ ಹೇಳಿದ್ದಾರೆ.
ಪ್ರೀತಿಯು ನಿಷ್ಕಪಟವಾಗಿರಲಿ ಕೆಟ್ಟತನವನ್ನು ಹೇಸಿ ಕೊಂಡು ಒಳ್ಳೆಯದಕ್ಕೆ ಅಂಟಿಕೊಳ್ಳಿರಿ.
ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ; ಆದಾಗ್ಯೂ ನಾನು ಜೀವಿ ಸುತ್ತೇನೆ; ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ; ಈಗ ಶರೀರದಲ್ಲಿರುವ ನಾನು ಜೀವಿಸುವದು ದೇವಕುಮಾರನ ಮೇಲಣ ನಂಬಿಕೆ ಯಲ್ಲಿಯೇ, ಆತನು ನನ್ನನ್ನು ಪ್ರೀತಿಸಿ ನನಗೋಸ್ಕರ ತನ್ನನ್ನೇನಾನು ದೇವರ ಕೃಪೆಯನ್ನು ನಿರರ್ಥಕ ಮಾಡುವದಿಲ್ಲ. ನ್ಯಾಯಪ್ರಮಾಣದಿಂದ ನೀತಿಯುಂಟಾಗುವದಾದರೆ ಕ್ರಿಸ್ತನು ಮರಣವನ್ನು ಹೊಂದಿದ್ದು ವ್ಯರ್ಥವಾಯಿತು.
ಯಾಕಂದರೆ ನೀವು ಸತ್ತಿರಲ್ಲಾ, ನಿಮ್ಮ ಜೀವವು ಕ್ರಿಸ್ತನೊಂದಿಗೆ ದೇವರಲ್ಲಿ ಮರೆಯಾಗಿಟ್ಟದೆ.
ಇದಲ್ಲದೆ ಆತನು ನನಗೆ--ಎಲ್ಲಾ ಮುಗಿಯಿತು. ನಾನು ಅಲ್ಫಾವೂ ಓಮೆಗವೂ ಆದಿಯೂ ಅಂತ್ಯವೂ ಆಗಿದ್ದೇನೆ. ದಾಹವುಳ್ಳವನಿಗೆ ಜೀವದ ನೀರಿನ ಬುಗ್ಗೆಯಿಂದ ನಾನು ನೀರನ್ನು ಉಚಿತವಾಗಿ ಕೊಡುವೆನು.
ಆಮೇಲೆ ಅವನು ಸ್ಫಟಿಕದಂತೆ ಸ್ವಚ್ಛವಾದ ಮತ್ತು ಶುದ್ಧವಾದ ಜೀವಜಲದ ನದಿ ಯನ್ನು ನನಗೆ ತೋರಿಸಿದನು; ಅದು ದೇವರ ಮತ್ತು ಕುರಿಮರಿಯಾದಾತನ ಸಿಂಹಾಸನದಿಂದ ಹೊರಡುವ ದಾಗಿತ್ತು.
ಆತ್ಮನೂ ಮದಲಗಿತ್ತಿಯೂ--ಬಾ, ಅನ್ನುತ್ತಾರೆ. ಕೇಳುವವನು--ಬಾ, ಅನ್ನಲಿ. ಬಾಯಾರಿದವನು ಬರಲಿ. ಇಷ್ಟವುಳ್ಳವನು ಜೀವಜಲವನ್ನು ಉಚಿತವಾಗಿ ತೆಗೆದುಕೊಳ್ಳಲಿ.