ಆಗ ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಪ್ರೀತಿಮಾಡಿ ನೀನು ಬದು ಕುವ ಹಾಗೆ ಆತನು ನಿನ್ನ ಹೃದಯವನ್ನೂ ನಿನ್ನ ಸಂತತಿಯ ಹೃದಯವನ್ನೂ ಪರಿಛೇದಿಸುವನು.
Cross references
ನನ್ನನ್ನು ಪ್ರೀತಿಮಾಡಿ ನನ್ನ ಆಜ್ಞೆ ಗಳನ್ನು ಕೈಕೊಳ್ಳುವವರಿಗೆ ಸಾವಿರ ತಲೆಗಳ ವರೆಗೆ ದಯೆತೋರಿಸುವೆನು.
ಆದದರಿಂದ ನೀವು ನನ್ನ ನಿಯಮಗಳನ್ನೂ ನಿರ್ಣಯಗಳನ್ನೂ ಕೈಕೊಳ್ಳಿರಿ. ಒಬ್ಬನು ಅವುಗಳನ್ನು ಮಾಡಿದರೆ ಅವನು ಅವುಗಳಲ್ಲಿ ಜೀವಿಸುವನು; ನಾನೇ ಕರ್ತನು.
ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ಪೂರ್ಣ ಪ್ರಾಣದಿಂದಲೂ ಪೂರ್ಣಬಲದಿಂದಲೂ ಪ್ರೀತಿ ಮಾಡಬೇಕು.
ಹೀಗಿರುವದರಿಂದ ನಿಮ್ಮ ಹೃದಯದಲ್ಲೇ ಸುನ್ನತಿ ಮಾಡಿಕೊಳ್ಳಿರಿ. ಇನ್ನು ಮೇಲೆ ಬಗ್ಗದ ಕುತ್ತಿಗೆಯುಳ್ಳವ ರಾಗಿರಬೇಡಿರಿ.
ಹೀಗಿರುವದರಿಂದ ನಿನ್ನ ದೇವರಾದ ಕರ್ತನನ್ನು ಪ್ರೀತಿಮಾಡಿ ಆತನ ಅಪ್ಪಣೆ ನಿಯಮ ನ್ಯಾಯ ಆಜ್ಞೆಗಳನ್ನು ಯಾವಾಗಲೂ ಕೈಕೊಳ್ಳಬೇಕು.
ಕರ್ತನಿಗೋಸ್ಕರ ಸುನ್ನತಿ ಮಾಡಿಕೊಳ್ಳಿರಿ, ನಿಮ್ಮ ಹೃದಯಗಳ ಮುಂದೊಗಲನ್ನು ತೆಗೆದುಹಾಕಿರಿ; ಇಲ್ಲದಿದ್ದರೆ ನನ್ನ ಕೋಪವು ಬೆಂಕಿಯ ಹಾಗೆ ಹೊರಟು ನಿಮ್ಮ ಕ್ರಿಯೆಗಳ ಕೆಟ್ಟತನದ ನಿಮಿತ್ತ ಯಾರೂ ಆರಿಸ ಕೂಡದ ಹಾಗೆ ಉರಿಯುವದು.
ಆದಾಗ್ಯೂ ನೀವು ನನಗೆ ಕಿವಿಗೊಡದೆ ನಿಮಗೆ ಕೇಡು ಬರುವ ಹಾಗೆ ನಿಮ್ಮ ಕೈ ಕೆಲಸಗಳಿಂದ ನನಗೆ ಕೋಪವನ್ನೆಬ್ಬಿಸಿದ್ದೀರಿ ಎಂದು ಕರ್ತನು ಅನ್ನುತ್ತಾನೆ.
ಅವರಿಗೆ ಒಂದು ಹೃದಯವನ್ನು ಕೊಡು ವೆನು. ನಿಮ್ಮಲ್ಲಿ ಒಂದು ಹೊಸ ಆತ್ಮವನ್ನು ಇಡುವೆನು; ಅವರೊಳಗಿಂದ ಕಠಿಣ ಹೃದಯವನ್ನು ಹೊರಗೆ ತೆಗೆದು ಮೃದು ಹೃದಯವನ್ನು ಕೊಡುವೆನು.
ಆಗ ಅವರು ನನ್ನ ನಿಯಮಗಳಲ್ಲಿ ನಡೆದುಕೊಂಡು ನನ್ನ ನಿಯಮಗ ಳನ್ನು ಕೈಕೊಂಡು ನಡೆಯುವರು. ಅವರು ನನ್ನ ಜನರಾಗು ವರು, ನಾನು ಅವರ ದೇವರಾಗುವೆನು.
ನಿನಗೆ ಹೊಸ ಹೃದಯವನ್ನು ಕೊಟ್ಟು ಹೊಸ ಆತ್ಮ ವನ್ನು ನಿಮ್ಮೊಳಗೆ ಇಡುವೆನು; ನಿಮ್ಮ ದೇಹದಿಂದ ಕಲ್ಲಿನ ಹೃದಯವನ್ನು ಹೊರಗೆ ತೆಗೆದು ನಿಮಗೆ ಮಾಂಸದ ಹೃದಯವನ್ನು ಕೊಡುತ್ತೇನೆ.
ಯೇಸು ಅವ ನಿಗೆ--ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣ ದಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ಪ್ರೀತಿಸಬೇಕು.