Home Bibles ದ್ವಿತೀಯೋಪದೇಶಕಾಂಡ 31:12 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 31:12 · ಕನ್ನಡ ಬೈಬಲ್

ಜನರನ್ನೂ ಅಂದರೆ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ನಿನ್ನ ಬಾಗಲುಗಳಲ್ಲಿರುವ ಪರವಾಸಿಗಳನ್ನೂ ಅವರು ಕೇಳಿ ಕಲಿತು ನಿಮ್ಮ ದೇವರಾದ ಕರ್ತನಿಗೆ ಭಯಪಟ್ಟು ಈ ನ್ಯಾಯಪ್ರಮಾಣದ ವಾಕ್ಯಗಳನ್ನೆಲ್ಲಾ ಕಾಪಾಡಿ ಮಾಡುವ ಹಾಗೆ ಕೂಡಿಸು.

Cross references

ಲೇವ್ಯಕಾಂಡ 9:5

ಮೋಶೆಯು ಆಜ್ಞಾಪಿಸಿದವುಗಳನ್ನು ಅವರು ಸಭೆಯ ಗುಡಾರದ ಮುಂದೆ ತಂದರು; ಸಭೆಯೆಲ್ಲವೂ ಹತ್ತಿರ ಬಂದು ಕರ್ತನ ಮುಂದೆ ನಿಂತಿತು.

ದ್ವಿತೀಯೋಪದೇಶಕಾಂಡ 4:10

ನೀನು ಹೋರೇಬಿನಲ್ಲಿ ಕರ್ತನ ಮುಂದೆ ನಿಂತ ದಿವಸ ಉಂಟಲ್ಲವೇ? ಆಗ ಕರ್ತನು ನನಗೆ--ಜನರನ್ನು ನನಗಾಗಿ ಕೂಡಿಸು; ಅವರು ಭೂಮಿಯ ಮೇಲೆ ಬದುಕುವ ದಿವಸಗಳೆಲ್ಲಾ ನನಗೆ ಭಯಭಕ್ತಿಯಿಂದಿ ರುವದನ್ನು ಕಲಿತು ತಮ್ಮ ಮಕ್ಕಳಿಗೂ ಬೋಧಿಸುವ ಹಾಗೆ ಅವರಿಗೆ ನನ್ನ ವಾಕ್ಯಗಳನ್ನು ಹೇಳಿಕೊಡು ವೆನು ಅಂದನು

ದ್ವಿತೀಯೋಪದೇಶಕಾಂಡ 6:6

ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಈ ಮಾತುಗಳು ನಿನ್ನ ಹೃದಯದಲ್ಲಿ ಇರಬೇಕು.

ದ್ವಿತೀಯೋಪದೇಶಕಾಂಡ 29:9

ಹೀಗಿರುವ ದರಿಂದ ನೀವು ಮಾಡುವದೆಲ್ಲಾದರಲ್ಲಿ ಸಫಲವಾಗುವ ಹಾಗೆ ಈ ಒಡಂಬಡಿಕೆಯ ಮಾತುಗಳನ್ನು ಕೇಳಿ ನಡೆಯಬೇಕು.

ದ್ವಿತೀಯೋಪದೇಶಕಾಂಡ 29:29

ರಹಸ್ಯಗಳು ನಮ್ಮ ದೇವರಾದ ಕರ್ತನಿಗೆ ಸೇರಿದ್ದು; ಆದರೆ ಪ್ರಕಟವಾದ ಈ ನ್ಯಾಯಪ್ರಮಾಣದ ಮಾತು ಗಳನ್ನೆಲ್ಲಾ ನಾವು ಮಾಡುವಹಾಗೆ ನಮಗೂ ನಮ್ಮ ಮಕ್ಕಳಿಗೂ ನಿತ್ಯವಾಗಿ ಇರುತ್ತವೆ.

ಯೆಹೋಶುವ 8:33

ಇಸ್ರಾಯೇಲ್ಯರೆಲ್ಲರೂ ಅವರ ಹಿರಿ ಯರೂ ಅಧಿಕಾರಿಗಳೂ ನ್ಯಾಯಾಧಿಪತಿಗಳೂ ಪರ ದೇಶಸ್ಥರೂ ದೇಶಸ್ಥರೂ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವ ಲೇವಿಯರಾದ ಯಾಜಕರ ಮುಂದೆ ಒಡಂಬಡಿಕೆಯ ಮಂಜೂಷಕ್ಕೆ ಈ ಕಡೆಯೂ ಆ ಕಡೆಯೂ ಅರ್ಧ ಗೆರಿಜ್ಜೀಮ್‌ ಪರ್ವತದ ಕಡೆಗೂ ಅರ್ಧ ಏಬಾಲ್‌ ಪರ್ವತದ ಕಡೆಗೂ ಜನರನ್ನು ಆಶೀರ್ವದಿಸುವದಕ್ಕೆ ಕರ್ತನ ಸೇವಕನಾದ ಮೋಶೆ ಮೊದಲು ಆಜ್ಞಾಪಿಸಿದ ಹಾಗೆ ನಿಂತರು.

ಯೆಹೋಶುವ 8:35

ಮೋಶೆಯು ಆಜ್ಞಾಪಿಸಿದ್ದರಲ್ಲಿ ಒಂದನ್ನೂ ಬಿಡದೆ ಇಸ್ರಾಯೇಲಿನ ಸಭೆಗೆಲ್ಲಾ ಅಂದರೆ ಸ್ತ್ರೀಯ ರಿಗೂ ಚಿಕ್ಕವರಿಗೂ ಅವರಲ್ಲಿ ಪರಿಚಯವಿರುವ ಅವರ ಪರಕೀಯರಿಗೂ ಓದಿದನು.

ಎಜ್ರಾ 10:1

ಎಜ್ರನು ಪ್ರಾರ್ಥಿಸಿ ಅರಿಕೆಮಾಡಿ ಅಳುತ್ತಾ ದೇವರ ಆಲಯದ ಮುಂದೆ ಬಿದ್ದಿರಲು ಇಸ್ರಾಯೇಲ್ಯರಲ್ಲಿ ಸ್ತ್ರೀಯರೂ ಪುರುಷರೂ ಮಕ್ಕಳೂ ಮಹಾ ದೊಡ್ಡ ಕೂಟವಾಗಿ ಅವನ ಬಳಿಯಲ್ಲಿ ಕೂಡಿಕೊಂಡರು. ಜನರು ಬಹಳವಾಗಿ ಅತ್ತರು.

ಕೀರ್ತನೆಗಳು 19:7

ಕರ್ತನ ನ್ಯಾಯಪ್ರಮಾಣವು ಸಂಪೂರ್ಣವಾಗಿದ್ದು ಪ್ರಾಣಕ್ಕೆ ಜೀವಕರವಾಗಿದೆ: ಕರ್ತನ ಸಾಕ್ಷಿಯು ಮೂರ್ಖರನ್ನು ಜ್ಞಾನಿಗಳನ್ನಾಗಿ ಮಾಡುತ್ತದೆ.

ಕೀರ್ತನೆಗಳು 34:11

ಮಕ್ಕಳೇ, ನೀವು ಬಂದು ನನ್ನ ಮಾತನ್ನು ಕೇಳಿರಿ; ನಾನು ಕರ್ತನ ಭಯವನ್ನು ನಿಮಗೆ ಕಲಿಸುವೆನು.

ಯೋಹಾನ 5:39

ಬರಹಗಳನ್ನು ಪರಿಶೋಧಿಸಿರಿ; ಅವುಗಳಲ್ಲಿ ನಿಮಗೆ ನಿತ್ಯಜೀವ ಉಂಟೆಂದು ನೀವು ನೆನಸುತ್ತೀರಲ್ಲಾ; ಅವುಗಳೇ ನನ್ನ ವಿಷಯವಾಗಿ ಸಾಕ್ಷಿಕೊಡುವವುಗಳಾ ಗಿವೆ.

2 ತಿಮೋಥೆಯ 3:15

ಚಿಕ್ಕಂದಿನಿಂದಲೂ ನೀನು ಪರಿಶುದ ಬರಹಗಳನ್ನು ತಿಳಿದವನಾಗಿದ್ದೀಯಲ್ಲಾ; ಆ ಬರಹಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆ ಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ.

Interlinear

Choose Theme