ಹಸುಗಳ ಬೆಣ್ಣೆಯನ್ನೂ ಕುರಿಗಳ ಹಾಲನ್ನೂ ಕುರಿಮರಿಗಳ ಕೊಬ್ಬಿನೊಂದಿಗೆ ಬಾಷಾನಿನ ಟಗರು ಗಳನ್ನೂ ಹೋತಗಳನ್ನೂ ಉತ್ತಮ ಗೋಧಿಯ ಸಂಗಡ ಕೊಟ್ಟನು. ನೀನು ಶುದ್ಧ ದ್ರಾಕ್ಷಾರಸವನ್ನು ಕುಡಿದಿ.
Cross references
ತರುವಾಯ ಬೆಣ್ಣೆಯನ್ನೂ ಹಾಲನ್ನೂ ಪಕ್ವಮಾಡಿದ ಕರುವನ್ನೂ ತೆಗೆದುಕೊಂಡು ಅವರ ಮುಂದೆ ಇಟ್ಟನು; ಅವನು ಮರದ ಕೆಳಗೆ ಅವರ ಬಳಿಯಲ್ಲಿ ನಿಂತುಕೊಂಡನು; ಅವರು ಊಟಮಾಡಿದರು.
ದ್ರಾಕ್ಷೇಗಿಡಕ್ಕೆ ತನ್ನ ಕತ್ತೆಯನ್ನೂ ಶ್ರೇಷ್ಠ ದ್ರಾಕ್ಷೇಗಿಡಕ್ಕೆ ತನ್ನ ಕತ್ತೆಮರಿಯನ್ನೂ ಕಟ್ಟುತ್ತಾನೆ. ದ್ರಾಕ್ಷಾರಸದಲ್ಲಿ ತನ್ನ ವಸ್ತ್ರಗಳನ್ನೂ ದ್ರಾಕ್ಷೇ ಹಣ್ಣುಗಳ ರಕ್ತದಲ್ಲಿ ತನ್ನ ಬಟ್ಟೆಗಳನ್ನೂ ತೊಳೆಯುತ್ತಾನೆ.
ನೀನು ಎಲ್ಲವುಗಳ ಸಮೃದ್ಧಿಯಲ್ಲಿ ನಿನ್ನ ದೇವರಾದ ಕರ್ತನಿಗೆ ಸಂತೋಷದಿಂದಲೂ ಮನಸ್ಸಿನ ಸೌಖ್ಯ ದಿಂದಲೂ ಸೇವಿಸದೆ ಇದದ್ದರಿಂದ
ಅವನು ನೀರನ್ನು ಕೇಳಿ ದನು; ಅವಳು ಹಾಲು ಕೊಟ್ಟಳು; ಅಮೂಲ್ಯವಾದ ಬಟ್ಟಲಿನಲ್ಲಿ ಬೆಣ್ಣೆಯನ್ನು ತಂದಿಟ್ಟಳು.
ಅವರೆಯನ್ನೂ ಹೆಸರನ್ನೂ ಹುರಿದ ಕಡಲೆಯನ್ನೂ ಜೇನು ತುಪ್ಪವನ್ನೂ ಬೆಣ್ಣೆಯನ್ನೂ ಕುರಿಗಳನ್ನೂ ಹಸುವಿನ ಗಿಣ್ಣದ ಗಡ್ಡೆಗಳನ್ನೂ ದಾವೀದನಿಗೂ ಅವನ ಸಂಗಡ ಲಿದ್ದ ಜನರಿಗೂ ತಿನ್ನುವದಕ್ಕೆ ತಂದರು. ಯಾಕಂದರೆ ಅರಣ್ಯದಲ್ಲಿ ಜನರು ಹಸಿದು ದಣಿದು ದಾಹವಾಗಿರು ವರೆಂದು ಅಂದುಕೊಂಡರು.
ಅವರು ಬಲವಾದ ಪಟ್ಟಣ ಗಳನ್ನೂ ರಸವತ್ತಾದ ಭೂಮಿಯನ್ನೂ ತೆಗೆದುಕೊಂಡು ಸಮಸ್ತ ಉತ್ತಮವಾದವುಗಳಿಂದ ತುಂಬಿದ ಮನೆ ಗಳನ್ನೂ ತೋಡಿದ ಬಾವಿಗಳನ್ನೂ ದ್ರಾಕ್ಷೇ ತೋಟ ಗಳನ್ನೂ ಇಪ್ಪೇತೋಪುಗಳನ್ನೂ ಸಮೃದ್ಧಿಯಾದ ಹಣ್ಣಿನ ಮರಗಳನ್ನೂ ಬಹಳವಾಗಿ ಸ್ವಾಧೀನಮಾಡಿಕೊಂಡರು. ಹೀಗೆ ಅವರು ತಿಂದು ತೃಪ್ತಿಪಟ್ಟು ಪುಷ್ಟಿಯಾಗಿ ನಿನ್ನ ದೊಡ್ಡ ಉಪಕಾರದಲ್ಲಿ ಆನಂದಪಟ್ಟರು.
ಆದಾಗ್ಯೂ ಅವರು ನಿನಗೆ ಅವಿಧೇಯರಾಗಿ, ವಿರೋಧವಾಗಿ, ನಿಂತು ತಿರುಗಿಬಿದ್ದು, ನಿನ್ನ ನ್ಯಾಯ ಪ್ರಮಾಣವನ್ನು ತಮ್ಮ ಬೆನ್ನಿನ ಹಿಂದಕ್ಕೆ ಬಿಸಾಡಿ, ಅವರು ನಿನ್ನ ಕಡೆಗೆ ತಿರುಗಬೇಕೆಂದು ಸಾಕ್ಷಿ ಹೇಳಿದ ನಿನ್ನ ಪ್ರವಾದಿಗಳನ್ನು ಕೊಂದು ಬಹು ಕೋಪೋದ್ರೇಕ ಗೊಳಿಸಿದರು.
ಅವನು ಜೇನೂ ಬೆಣ್ಣೆ ಹರಿಯುವ ಹಳ್ಳ ಗಳನ್ನೂ ನದಿಯನ್ನೂ ಕಾಲಿವೆಗಳನ್ನೂ ನೋಡನು.
ಬಹಳ ಹೋರಿಗಳು ನನ್ನನ್ನು ಸುತ್ತಿಕೊಂಡಿವೆ; ಬಾಷಾನಿನ ಬಲವಾದ ಹೋರಿಗಳು ನನ್ನನ್ನು ಮುತ್ತಿ ಕೊಂಡಿವೆ.
ಇದಲ್ಲದೆ ಆತನು ಉತ್ತಮವಾದ ಗೋಧಿ ಯಿಂದ ಅವರಿಗೆ ಊಟಕ್ಕೆ ಕೊಟ್ಟು ಬಂಡೆಯೊಳಗಿನ ಜೇನಿನಿಂದ ತೃಪ್ತಿಪಡಿಸುವನು.
ಆತನು ನಿನ್ನ ಮೇರೆಗಳನ್ನು ಸಮಾಧಾನಪಡಿಸುತ್ತಾನೆ. ಶ್ರೇಷ್ಠವಾದ ಗೋಧಿಯಿಂದ ನಿನ್ನನ್ನು ತೃಪ್ತಿಪಡಿಸುತ್ತಾನೆ.
ಆತನು ಕೆಟ್ಟದ್ದನ್ನು ನಿರಾಕರಿಸಿ ಒಳ್ಳೆಯದನ್ನು ಆರಿಸಿಕೊಳ್ಳುವಷ್ಟು ತಿಳುವ ಳಿಕೆಯು ಬರುವ ತನಕ ಬೆಣ್ಣೆ ಮತ್ತು ಜೇನನ್ನು ತಿನ್ನುವನು.
ಆಗ ಅವು ಸಮೃದ್ಧಿಯಾಗಿ ಹಾಲನ್ನು ಕೊಡುವದರಿಂದ ಅವನು ಬೆಣ್ಣೆಯನ್ನು ತಿನ್ನುವನು; ಆ ದೇಶದಲ್ಲಿ ಉಳಿದಿರುವ ವರೆಲ್ಲರೂ ಬೆಣ್ಣೆಯನ್ನು ಮತ್ತು ಜೇನು ತುಪ್ಪವನ್ನು ತಿನ್ನುವರು.
ನೀವು ಶೂರರ ಮಾಂಸವನ್ನು ತಿನ್ನುವಿರಿ ಮತ್ತು ಭೂಮಿಯ ಪ್ರಭುಗಳ ಟಗರು ಕುರಿಮರಿ ಹೋತ ಮತ್ತು ಹೋರಿಗಳ ಬಾಷಾನಿನ ಕೊಬ್ಬಿದ ಪಶು ಇವೆಲ್ಲವುಗಳ ರಕ್ತವನ್ನು ಕುಡಿಯುವಿರಿ.