Home Bibles ದ್ವಿತೀಯೋಪದೇಶಕಾಂಡ 33:14 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 33:14 · ಕನ್ನಡ ಬೈಬಲ್

ಸೂರ್ಯನ ಆದಾಯದ ಅಮೂಲ್ಯವಾದ ಫಲಗಳಿಂದಲೂ ಚಂದ್ರನ ಆದಾಯದ ಅಮೂಲ್ಯವಾದ ವುಗಳಿಂದಲೂ

Cross references

ಲೇವ್ಯಕಾಂಡ 26:4

ನಿಮಗೆ ಮಳೆಯನ್ನು ತಕ್ಕಕಾಲದಲ್ಲಿ ಸುರಿಸುವೆನು. ಆಗ ಭೂಮಿಯು ಅದರ ಬೆಳೆಯನ್ನು ಕೊಡುವದು. ಹೊಲದ ಮರಗಳು ಅವುಗಳ ಫಲವನ್ನು ಕೊಡುವವು.

ದ್ವಿತೀಯೋಪದೇಶಕಾಂಡ 28:8

ನಿನ್ನ ಕಣಜಗಳಲ್ಲಿಯೂ ನೀನು ಕೈಹಾಕುವ ಎಲ್ಲಾದರಲ್ಲಿಯೂ ನಿನಗೆ ಆಶೀರ್ವಾದ ಬರುವ ಹಾಗೆ ಕರ್ತನು ಅಪ್ಪಣೆಕೊಡುವನು; ನಿನ್ನ ದೇವರಾದ ಕರ್ತನು ನಿನಗೆ ಕೊಡುವ ಭೂಮಿಯಲ್ಲಿ ಆಶೀರ್ವಾದ ಕೊಡುವನು.

2 ಸಮುವೇಲ 23:4

ಸೂರ್ಯನು ಮೂಡಿರುವಂಥ, ಪ್ರಕಾಶದಿಂದ ಮೋಡಗಳಿಲ್ಲದೆ ಇರುವಂಥ, ಉದಯ ಕಾಲದ ಬೆಳಕಿನ ಹಾಗೆಯೂ ಮಳೆ ಬಂದ ಮೇಲೆ ಭೂಮಿಯಿಂದಾಗುವ ಹುಲ್ಲಿನ ಹಾಗೆಯೂ ಇರು ವನು.

ಕೀರ್ತನೆಗಳು 8:3

ನಿನ್ನ ಕೈಕೆಲಸವಾದ ಆಕಾಶಗಳನ್ನೂ ನೀನು ಸಿದ್ಧ ಮಾಡಿದ ಚಂದ್ರ ನಕ್ಷತ್ರಗಳನ್ನೂ ನಾನು ಆಲೋ ಚಿಸುವಾಗ

ಕೀರ್ತನೆಗಳು 65:9

ನೀನು ಭೂಮಿಯನ್ನು ಕಟಾಕ್ಷಿಸಿ ಅದನ್ನು ತೋಯಿಸಿ ನೀರಿನಿಂದ ತುಂಬಿರುವಂತೆ ದೇವರ ನದಿ ಯಿಂದ ಅದನ್ನು ಚೆನ್ನಾಗಿ ಹದಗೊಳಿಸುತ್ತೀ; ಹೀಗೆ ಭೂಮಿಯನ್ನು ಸಿದ್ಧಮಾಡಿ ಮನುಷ್ಯರಿಗೆ ಧಾನ್ಯವನ್ನು ಒದಗಿಸುತ್ತೀ.

ಕೀರ್ತನೆಗಳು 74:16

ಹಗಲು ನಿನ್ನದು; ರಾತ್ರಿಯು ಸಹ ನಿನ್ನದು; ನೀನು ಬೆಳಕನ್ನೂ ಸೂರ್ಯ ನನ್ನೂ ಸಿದ್ಧಮಾಡಿದ್ದೀ.

ಕೀರ್ತನೆಗಳು 84:11

ದೇವರಾದ ಕರ್ತನು ಸೂರ್ಯ ನೂ ಗುರಾಣಿಯೂ ಆಗಿದ್ದಾನೆ; ಕರ್ತನು ಕೃಪೆಯನ್ನೂ ಮಹಿಮೆಯನ್ನೂ ಕೊಡುತ್ತಾನೆ; ಸಂಪೂರ್ಣವಾಗಿ ನಡೆದುಕೊಳ್ಳುವವರಿಗೆ ಆತನು ಯಾವ ಒಳ್ಳೇದನ್ನು ಹಿಂದೆಗೆಯುವದಿಲ್ಲ.ಸೈನ್ಯಗಳ ಓ ಕರ್ತನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು.

ಕೀರ್ತನೆಗಳು 104:19

ನೇಮಿಸಿದ ಕಾಲಗಳಿಗೋಸ್ಕರ ಚಂದ್ರನನ್ನು ಉಂಟು ಮಾಡಿದ್ದಾನೆ; ಸೂರ್ಯನು ತನ್ನ ಅಸ್ತಮಾನ ವನ್ನು ತಿಳಿದಿದ್ದಾನೆ.

ಮಲಾಕಿ 4:2

ಆದರೆ ನನ್ನ ಹೆಸರಿಗೆ ಭಯಪಡುವವರಾದ ನಿಮಗೆ ನೀತಿಯ ಸೂರ್ಯನು ತನ್ನ ರೆಕ್ಕೆಗಳಲ್ಲಿ ಸ್ವಸ್ಥತೆಯನ್ನುಂಟು ಮಾಡುವವನಾಗಿ ಉದಯಿಸುವನು; ನೀವು ಹೊರಟು ಕೊಟ್ಟಿಗೆಯಿಂದ ಬಿಟ್ಟ ಕರುಗಳ ಹಾಗೆ ಕುಣಿದಾಡುವಿರಿ.

ಮತ್ತಾಯ 5:45

ಇದರಿಂದ ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾ ಗುವಿರಿ; ಯಾಕಂದರೆ ಆತನು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತನ್ನ ಸೂರ್ಯನು ಉದಯಿಸುವಂತೆ ಮಾಡುತ್ತಾನೆ; ಮತ್ತು ನೀತಿವಂತರ ಮೇಲೆಯೂ ಅನೀತಿವಂತರ ಮೇಲೆಯೂ ಮಳೆ ಸುರಿಸುತ್ತಾನೆ.

ಅಪೋಸ್ತಲರ ಕೃತ್ಯಗಳು 14:17

ಆದರೂ ಆತನು ತನ್ನ ವಿಷಯದಲ್ಲಿ ಸಾಕ್ಷಿಕೊಡದೆ ಇರಲಿಲ್ಲ; ಆಕಾಶದಿಂದ ಮಳೆಯನ್ನೂ ಸುಗ್ಗೀಕಾಲ ಗಳನ್ನೂ ದಯಪಾಲಿಸಿ ನಮಗೆ ಆಹಾರ ಕೊಟ್ಟು ನಮ್ಮ ಹೃದಯಗಳನ್ನು ಆನಂದದಿಂದ ತುಂಬಿಸಿ ಒಳ್ಳೇದನ್ನು ಮಾಡುತ್ತಾ ಬಂದನು ಎಂದು ಹೇಳಿದರು.

1 ತಿಮೋಥೆಯ 6:17

ಈ ಲೋಕದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿ ಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ಭರವಸ ವನ್ನಿಡದೆ ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲ ವನ್ನೂ ಹೇರಳವಾಗಿ ದಯಪಾಲಿಸುವ ಜೀವವುಳ್ಳ ದೇವರ ಮೇಲೆ ಭರವಸವನ್ನಿಡಬೇಕೆಂತಲೂ

ಪ್ರಕಟನೆ 22:2

ಅದರ ಬೀದಿಯ ಮಧ್ಯದಲ್ಲಿಯೂ ಆ ನದಿಯ ಉಭಯ ಪಾರ್ಶ್ವಗಳಲ್ಲಿಯೂ ಜೀವವೃಕ್ಷವಿತ್ತು; ಅದು ತಿಂಗಳು ತಿಂಗಳಿಗೆ ಫಲವನ್ನು ಫಲಿಸುತ್ತಾ ಹನ್ನೆರಡು ತರದ ಫಲಗಳನ್ನು ಕೊಡುತ್ತದೆ. ಆ ಮರದ ಎಲೆಗಳು ಜನಾಂಗದವರನ್ನು ವಾಸಿಮಾಡುವದಕ್ಕೆ ಇದ್ದವು.

Interlinear

Choose Theme