ನಿಮ್ಮನ್ನೇ ಕರ್ತನು ತಕ್ಕೊಂಡು ನೀವು ಈ ದಿನ ಇರುವ ಪ್ರಕಾರ ತನಗೆ ಸ್ವಾಸ್ತ್ಯವಾದ ಜನವಾಗುವ ಹಾಗೆ ಕಬ್ಬಿಣದ ಕುಲುಮೆಯೊಳಗಿಂದ ಅಂದರೆ ಐಗುಪ್ತದಿಂದ ಹೊರಗೆ ಬರಮಾಡಿದ್ದಾನೆ.
Cross references
ಮಣ್ಣಿನ ಕೆಲಸದಲ್ಲಿಯೂ ಇಟ್ಟಿಗೆಯನ್ನು ಮಾಡುವ ಕೆಲಸದ ಲ್ಲಿಯೂ ವ್ಯವಸಾಯದ ಎಲ್ಲಾ ವಿಧವಾದ ಕೆಲಸಗಳ ಲ್ಲಿಯೂ ಕಠಿಣವಾಗಿ ದುಡಿಸಿಕೊಂಡು ಅವರ ಜೀವನ ವನ್ನು ಬೇಸರಪಡಿಸಿದರು. ಅವರು ಅವರಿಂದ ಮಾಡಿ ಸಿದ ಎಲ್ಲಾ ಸೇವೆಯೂ ಕಠಿಣವಾಗಿತ್ತು.
ಆದದರಿಂದ ಈಗ ನೀವು ನನ್ನ ಮಾತನ್ನು ಕೇಳಿ ನನ್ನ ಒಡಂಬಡಿಕೆಯನ್ನು ಕಾಪಾಡಿ ದರೆ, ಸಮಸ್ತ ಜನರಲ್ಲಿ ನೀವು ನನ್ನ ಅಸಮಾನ್ಯವಾದ ಸಂಪತ್ತಾಗಿರುವಿರಿ; ಭೂಮಿಯೆಲ್ಲಾ ನನ್ನದೇ.
ನಾನು ಕರ್ತನಿಗೆ ಪ್ರಾರ್ಥನೆ ಮಾಡಿ--ಓ ಕರ್ತನಾದ ದೇವರೇ, ನೀನು ನಿನ್ನ ಮಹತ್ವದಿಂದ ವಿಮೋಚಿಸಿ, ಬಲವಾದ ಕೈಯಿಂದ ಐಗುಪ್ತದೊಳಗಿಂದ ಹೊರಗೆ ಬರಮಾಡಿದ ನಿನ್ನ ಜನ ವನ್ನೂ ನಿನ್ನ ಸ್ವಾಸ್ತ್ಯವನ್ನೂ ನಾಶಮಾಡಬೇಡ.
ಆದಾಗ್ಯೂ ನೀನು ನಿನ್ನ ದೊಡ್ಡ ಶಕ್ತಿಯಿಂದಲೂ ಚಾಚಿದ ನಿನ್ನ ಕೈಯಿಂದಲೂ ಹೊರಗೆ ಬರಮಾಡಿದ ನಿನ್ನ ಜನವೂ ಸ್ವಾಸ್ತ್ಯವೂ ಇವರೇ ಎಂದು ಹೇಳಿದೆನು.
ಕರ್ತನ ಪಾಲು ಆತನ ಜನವೇ; ಯಾಕೋಬು ಆತನ ಸ್ವಾಸ್ತ್ಯದ ಪಾಲು.
ಅವರು ಐಗುಪ್ತದಿಂದಲೂ ಕಬ್ಬಿಣ ಕರಗಿಸುವ ಕುಲಿಮೆಯ ಮಧ್ಯದಿಂದಲೂ ನೀನು ಬರಮಾಡಿದ ನಿನ್ನ ಜನವಾ ಗಿಯೂ ನಿನ್ನ ಬಾಧ್ಯತೆಯಾಗಿಯೂ ಆಗಿದ್ದಾರೆ.
ನಿನ್ನ ಜನ ರನ್ನು ರಕ್ಷಿಸು; ನಿನ್ನ ಸ್ವಾಸ್ಥ್ಯವನ್ನು ಆಶೀರ್ವದಿಸು; ಅವರನ್ನು ಪರಿಪಾಲಿಸುತ್ತಾ ಯುಗಯುಗಕ್ಕೂ ಅವ ರನ್ನು ಮೇಲಕ್ಕೆ ಎತ್ತು.
ಕರ್ತನು ಯಾರ ದೇವರಾಗಿರು ವನೋ ಯಾವ ಜನಾಂಗವನ್ನು ತನ್ನ ಸ್ವಾಸ್ಥ್ಯವನ್ನಾಗಿ ಆದುಕೊಂಡಿದ್ದಾನೋ ಆ ಜನರೇ ಧನ್ಯರು.
ಕರ್ತನು ಯಾಕೋಬನನ್ನು ತನಗೋ ಸ್ಕರವೂ ಇಸ್ರಾಯೇಲನ್ನು ತನ್ನ ಅಸಾಮಾನ್ಯವಾದ ಸಂಪತ್ತಾಗಿಯೂ ಆದುಕೊಂಡಿದ್ದಾನೆ.
ಓ ಕರ್ತನೇ, ಏಕೆ ನಮ್ಮನ್ನು ನಿನ್ನ ಮಾರ್ಗಗ ಳಿಂದ ತಪ್ಪಿಹೋಗುವಂತೆ ಮಾಡಿದ್ದೀ. ಏಕೆ ನಮ್ಮ ಹೃದಯವನ್ನು ನಿನಗೆ ಭಯಪಡದ ಹಾಗೆ ಕಠಿಣ ಮಾಡಿದ್ದೀ. ನಿನ್ನ ಸೇವಕರಿಗೋಸ್ಕರವೂ ನಿನ್ನ ಬಾಧ್ಯತೆಯ ಗೋತ್ರಗಳಿಗೋಸ್ಕರವೂ ಹಿಂತಿರುಗು.
ದೇಶವು ಅದರ ನಿವಾಸಿಗಳ ಕೆಟ್ಟತನ ಕ್ಕಾಗಿ ದುಃಖಿಸುವದೂ ಎಲ್ಲಾ ಹೊಲಗಳ ಹುಲ್ಲು ಒಣಗುವದೂ ಎಷ್ಟರ ಮಟ್ಟಿಗೆ? ಮೃಗಗಳೂ ಪಕ್ಷಿಗಳೂ ನಾಶವಾಗುತ್ತವೆ; ಅವರು--ಒಬ್ಬರೂ ನಮ್ಮ ಅಂತ್ಯವನ್ನು ನೋಡುವದಿಲ್ಲ ಎಂದು ಅಂದುಕೊಂಡಿದ್ದಾರೆ.
ಆತನು ನಿಮ್ಮ ಮನೋನೇತ್ರಗಳನ್ನು ಬೆಳಗಿಸಿ ಆತನ ಕರೆಯು ವಿಕೆಯ ನಿರೀಕ್ಷೆಯು ಎಂಥದೆಂಬದನ್ನೂ ಪರಿಶುದ್ಧ ರಲ್ಲಿರುವ ಆತನ ಸ್ವಾಸ್ಥ್ಯದ ಮಹಿಮಾತಿಶಯವು ಎಂಥದೆಂಬದನ್ನೂ
ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.