Home Bibles ☰ Books ದ್ವಿತೀಯೋಪದೇಶಕಾಂಡ 4:24 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 4:24 · ಕನ್ನಡ ಬೈಬಲ್

ನಿನ್ನ ದೇವರಾದ ಕರ್ತನು ದಹಿಸುವ ಅಗ್ನಿಯೂ ರೋಷವುಳ್ಳ ದೇವರೂ ಆಗಿದ್ದಾನೆ.

Cross references

ನಿರ್ಗಮಕಾಂಡ 20:5

ನೀನು ಅವುಗಳಿಗೆ ಅಡ್ಡಬೀಳಬಾರದು, ಸೇವಿಸಲೂ ಬಾರದು. ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆಗಳ ಅಪರಾಧವನ್ನು ಮಕ್ಕಳ ಮೇಲೆ ಯೂ ಮೂರನೆಯ ನಾಲ್ಕನೆಯ ತಲೆಗಳ ವರೆಗೂ ಬರಮಾಡುವೆನು.

ನಿರ್ಗಮಕಾಂಡ 24:17

ಇದಲ್ಲದೆ ಇಸ್ರಾಯೇಲ್‌ ಮಕ್ಕಳ ಕಣ್ಣುಗಳ ಮುಂದೆ ಬೆಟ್ಟದ ತುದಿಯಲ್ಲಿ ಕರ್ತನ ಮಹಿಮೆಯ ದೃಶ್ಯವು ದಹಿಸುವ ಅಗ್ನಿಯಂತೆ ಇತ್ತು.ಆಗ ಮೋಶೆಯು ಮೇಘದ ಮಧ್ಯಕ್ಕೆ ಹೋಗಿ ಬೆಟ್ಟವನ್ನೇರಿದನು. ಅವನು ನಾಲ್ವತ್ತು ಹಗಲೂ ನಾಲ್ವತ್ತು ರಾತ್ರಿಯೂ ಪರ್ವತದಲ್ಲಿದ್ದನು.

ನಿರ್ಗಮಕಾಂಡ 33:3

ಹಾಲೂ ಜೇನೂ ಹರಿಯುವ ದೇಶಕ್ಕೆ ಹೋಗು, ನಾನು ನಿಮ್ಮ ಮಧ್ಯದಲ್ಲಿ ಹೋಗು ವದಿಲ್ಲ. ನೀವು ಬಗ್ಗದ ಕುತ್ತಿಗೆಯುಳ್ಳ ಜನವಾಗಿದ್ದೀರಿ; ಮಾರ್ಗದಲ್ಲಿ ನಿಮ್ಮನ್ನು ನಾನು ಸಂಹರಿಸೇನು ಅಂದನು.

ನಿರ್ಗಮಕಾಂಡ 34:14

ರೋಷವುಳ್ಳವನೆಂದು ಹೆಸರುಳ್ಳ ಕರ್ತನು ರೋಷ ವುಳ್ಳ ದೇವರಾಗಿರುವದರಿಂದ ನೀನು ಬೇರೆ ದೇವರು ಗಳನ್ನು ಆರಾಧಿಸಬಾರದು.

ಅಂಕೆಗಳ ಪುಸ್ತಕ 25:11

ಆರೋನನ ಮೊಮ್ಮಗನೂ ಎಲ್ಲಾಜಾರನ ಮಗನಾದ ಯಾಜಕ ನಾಗಿರುವ ಫೀನೆಹಾಸನು ಇಸ್ರಾಯೇಲಿನ ಮಕ್ಕಳಲ್ಲಿ ನನಗೋಸ್ಕರ ಆಸಕ್ತನಾಗಿದ್ದು ನಾನು ನನ್ನ ರೋಷದಿಂದ ಅವರನ್ನು ನಾಶಮಾಡದ ಹಾಗೆ ನನ್ನ ಕೋಪವನ್ನು ಅವರ ಮೇಲಿನಿಂದ ತಿರುಗಿಸಿ ಬಿಟ್ಟಿದ್ದಾನೆ.

ದ್ವಿತೀಯೋಪದೇಶಕಾಂಡ 5:9

ಅವುಗಳಿಗೆ ಅಡ್ಡಬೀಳಲೂಬಾರದು, ಸೇವಿಸಲೂಬಾರದು. ಯಾಕಂದರೆ ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆಮಾಡುವವರಲ್ಲಿ ಪಿತೃಗಳ ಅಕ್ರಮವನ್ನು ಮಕ್ಕಳ ಮೇಲೆ ಮೂರನೆಯ ನಾಲ್ಕನೆಯ ತಲಾಂತರದ ವರೆಗೆ ನ್ಯಾಯತೀರಿಸುತ್ತೇನೆ.

ದ್ವಿತೀಯೋಪದೇಶಕಾಂಡ 6:15

(ನಿನ್ನ ದೇವರಾದ ಕರ್ತನು ನಿನ್ನ ಮಧ್ಯದಲ್ಲಿ ರೋಷವುಳ್ಳ ದೇವರೇ; ನಿನ್ನ ದೇವ ರಾದ ಕರ್ತನ ಕೋಪವು ನಿನ್ನ ಮೇಲೆ ಉರಿಯಲು ಆತನು ನಿನ್ನನ್ನು ಭೂಮಿಯ ಮೇಲಿಂದ ನಾಶ ಮಾಡುವನು.)

ದ್ವಿತೀಯೋಪದೇಶಕಾಂಡ 9:3

ಹೀಗಿರುವದರಿಂದ ನೀನು ಈಹೊತ್ತು ತಿಳಿದುಕೊಳ್ಳತಕ್ಕದ್ದೇನಂದರೆ--ನಿನ್ನ ದೇವ ರಾದ ಕರ್ತನೇ ನಿನ್ನ ಮುಂದೆ ದಾಟಿಹೋಗುತ್ತಾನೆ; ಆತನು ದಹಿಸುವ ಅಗ್ನಿಯಾಗಿ ಅವರನ್ನು ನಾಶಮಾಡು ವನು; ಆತನು ಅವರನ್ನು ನಿನ್ನ ಮುಂದೆ ತಗ್ಗಿಸುವನು; ಈ ಪ್ರಕಾರ ಅವರನ್ನು ಸ್ವಾಧೀನಪಡಿಸಿಕೊಂಡು ಕರ್ತನು ನಿನಗೆ ಹೇಳಿದ ಹಾಗೆ ಅವರನ್ನು ಬೇಗ ನಾಶಮಾಡುವಿ.

ದ್ವಿತೀಯೋಪದೇಶಕಾಂಡ 29:20

ಅಂಥವನನ್ನು ಕರ್ತನು ಉಳಿಸುವದಿಲ್ಲ; ಆಗಲೇ ಕರ್ತನ ಕೋಪವೂ ರೋಷವೂ ಆ ಮನುಷ್ಯನ ಮೇಲೆ ಹೊಗೆ ಹಾಯುವವು. ಈ ಪುಸ್ತಕದಲ್ಲಿ ಬರೆದಿ ರುವ ಶಾಪವೆಲ್ಲಾ ಅವನ ಮೇಲೆ ನೆಲೆಯಾಗುವದು; ಕರ್ತನು ಅವನ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಡುವನು.

ದ್ವಿತೀಯೋಪದೇಶಕಾಂಡ 32:16

ಅನ್ಯದೇವತೆಗಳಿಂದ ಆತನಿಗೆ ಅವರು ರೋಷ ಹುಟ್ಟಿಸಿದರು. ಅಸಹ್ಯವಾದವುಗಳಿಂದ ಆತನಿಗೆ ಕೋಪ ವನ್ನು ಎಬ್ಬಿಸಿದರು.

ದ್ವಿತೀಯೋಪದೇಶಕಾಂಡ 32:21

ದೇವರಲ್ಲದ್ದರಿಂದ ಅವರು ನನಗೆ ರೋಷ ಹುಟ್ಟಿಸಿ ದರು; ತಮ್ಮ ವ್ಯರ್ಥವಾದವುಗಳಿಂದ ನನಗೆ ಕೋಪ ವನ್ನು ಎಬ್ಬಿಸಿದರು. ಜನವಲ್ಲದ್ದರಿಂದ ನಾನು ಅವರಿಗೆ ರೋಷ ಹುಟ್ಟಿಸುವೆನು; ಮೂಢ ಜನಾಂಗದಿಂದ ಅವರಿಗೆ ಕೋಪವನ್ನೆಬ್ಬಿಸುವೆನು.

ಕೀರ್ತನೆಗಳು 21:9

ನೀನು ಕೋಪಿಸುವ ಕಾಲದಲ್ಲಿ ಅವರನ್ನು ಬೆಂಕಿಯ ಒಲೆಯ ಹಾಗೆ ಮಾಡುವಿ; ಕರ್ತನು ತನ್ನ ಕೋಪದಿಂದ ಅವರನ್ನು ನುಂಗಿಬಿಡುವನು; ಬೆಂಕಿಯು ಅವರನ್ನು ದಹಿಸಿ ಬಿಡು ವದು.

ಕೀರ್ತನೆಗಳು 78:58

ತಮ್ಮ ಉನ್ನತ ಸ್ಥಳಗಳಿಂದ ಆತನಿಗೆ ಕೋಪವನ್ನೆಬ್ಬಿಸಿ ಕೆತ್ತಿದ ತಮ್ಮ ವಿಗ್ರಹಗಳಿಂದ ಆತನಿಗೆ ರೋಷವನ್ನೆಬ್ಬಿಸಿದರು.

Interlinear

Choose Theme