ಅಲ್ಲಿ ನೀವು ಮನುಷ್ಯರ ಕೈಕೆಲಸವಾದ ಅಂದರೆ ನೋಡದೆಯೂ ಕೇಳದೆಯೂ ಉಣ್ಣದೆಯೂ ಮೂಸಿ ನೋಡದೆಯೂ ಇರುವಂಥ ಮರ ಕಲ್ಲುಗಳಾದ ದೇವರುಗಳನ್ನು ಸೇವಿಸುವಿರಿ.
Cross references
ಕರ್ತನು ನಿನ್ನನ್ನೂ ನೀನು ನಿನ್ನ ಮೇಲೆ ಇರಿಸಿಕೊಳ್ಳುವ ಅರಸನನ್ನೂ ನೀನೂ ನಿನ್ನ ಪಿತೃಗಳೂ ಅರಿಯದ ಜನಾಂಗದ ಬಳಿಗೆ ಹೋಗ ಮಾಡುವನು; ಅಲ್ಲಿ ಮರವೂ ಕಲ್ಲೂ ಆಗಿರುವ ಬೇರೆ ದೇವರುಗಳನ್ನು ನೀನು ಸೇವಿಸುವಿ.
ಇದ ಲ್ಲದೆ ಕರ್ತನು ನಿನ್ನನ್ನು ಭೂಮಿಯ ಈ ಮೇರೆಯಿಂದ ಆ ಮೇರೆಯ ವರೆಗೂ ಎಲ್ಲಾ ಜನಗಳಲ್ಲಿ ಚದರಿಸು ವನು; ಅಲ್ಲಿ ನೀನೂ ನಿನ್ನ ಪಿತೃಗಳೂ ತಿಳಿಯದಂಥ ಮರವೂ ಕಲ್ಲೂ ಆಗಿರುವಂಥ ಬೇರೆ ದೇವರುಗಳನ್ನು ಸೇವಿಸುವಿ.
ಈಗ ಅರಸನಾದ ನನ್ನ ಒಡೆಯನು ದಯಮಾಡಿ ತನ್ನ ಸೇವಕನ ಮಾತುಗಳನ್ನು ಕೇಳಲಿ. ಕರ್ತನು ನಿನ್ನನ್ನು ನನಗೆ ವಿರೋಧವಾಗಿ ಪ್ರೇರೇಪಿಸಿದರೆ ಕಾಣಿಕೆಯನ್ನು ಅಂಗೀಕರಿಸಲಿ; ಆದರೆ ಮನುಷ್ಯರ ಮಕ್ಕಳು ಇದನ್ನು ಮಾಡಿದರೆ ಅವರು ಕರ್ತನ ಮುಂದೆ ಶಪಿಸಲ್ಪಡಲಿ. ಯಾಕಂದರೆ ನೀನು ಹೋಗಿ ಅನ್ಯದೇವರುಗಳನ್ನು ಸೇವಿಸು ಎಂದು ಹೇಳಿ ಅವರು ಈ ಹೊತ್ತು ನನ್ನನ್ನು ಕರ್ತನ ಬಾಧ್ಯತೆಯಲ್ಲಿ ಇರದ ಹಾಗೆ ಓಡಿಸಿಬಿಟ್ಟರು.
ಆದರೆ ಅವರು ಕೇಳದೆ ತಮ್ಮ ಪೂರ್ವದ ಪದ್ಧತಿ ಹಾಗೆ ಮಾಡಿದರು.ಹೀಗೆಯೇ ಈ ಜನಾಂಗಗಳು ಕರ್ತನಿಗೆ ಭಯಪಡದೆ ತಮ್ಮ ಕೆತ್ತಿದ ವಿಗ್ರಹಗಳನ್ನು ಸೇವಿಸಿದರು; ಅವರ ಪಿತೃಗಳು ಮಾಡಿದ ಹಾಗೆ ಅವರೂ ಅವರ ಮಕ್ಕಳೂ ಮೊಮ್ಮಕ್ಕಳೂ ಇಂದಿನ ವರೆಗೂ ಮಾಡುತ್ತಿರುತ್ತಾರೆ.
ಅವರ ವಿಗ್ರಹಗಳು ಬೆಳ್ಳಿಯೂ ಬಂಗಾರವೂ ಮನುಷ್ಯನ ಕೈಕೆಲಸವೂ ಆಗಿವೆ.
ಕಿವಿಗಳುಂಟು; ಕೇಳುವದಿಲ್ಲ. ಮೂಗು ಉಂಟು; ಮೂಸುವದಿಲ್ಲ.
ಅನ್ಯಜನಾಂಗಗಳ ವಿಗ್ರಹಗಳು ಬೆಳ್ಳಿ ಬಂಗಾರ ದಿಂದ ಮಾಡಿದ ಮನುಷ್ಯನ ಕೈ ಕೆಲಸವಾಗಿವೆ.
ಕೆತ್ತಿದ ವಿಗ್ರಹವನ್ನು ಮಾಡುವವರೆಲ್ಲರೂ ವ್ಯರ್ಥ ರೇ; ಅವರ ಮನೋರಂಜಕ ವಸ್ತುಗಳು ಯಾತಕ್ಕೂ ಬಾರವು; ಅವರು ನೋಡದೆ ಇಲ್ಲವೆ ತಿಳಿಯದೆ, ನಾಚಿಕೆಗೆ ಗುರಿಯಾಗುವಂತೆ ಅವುಗಳೇ ಅವರಿಗೆ ಸ್ವಂತ ಸಾಕ್ಷಿಗಳಾಗಿರುವವು.
ಇಗೋ, ಅವನ ಸಂಗಡಿಗರೆಲ್ಲಾ ನಾಚಿಕೆಗೊಳಗಾಗುವರು; ಆ ಕೆಲಸ ದವರು ಮನುಷ್ಯ ಮಾತ್ರದವರೇ; ಅವರೆಲ್ಲರೂ ಒಟ್ಟುಗೂಡಿಕೊಂಡು ನಿಂತುಕೊಳ್ಳಲಿ, ಆದರೂ ಅವರು ಭಯಪಟ್ಟು ಒಟ್ಟಿಗೆ ಲಜ್ಜೆಪಡುವರು.
ಜನಾಂಗಗಳಲ್ಲಿ ತಪ್ಪಿಸಿಕೊಂಡವರಾದ ನೀವು ಒಟ್ಟಾಗಿ ಕೂಡಿಕೊಂಡು ಸವಿಾಪಕ್ಕೆ ಬನ್ನಿರಿ. ಮರದಿಂದ ಕೆತ್ತಿದ ತಮ್ಮ ವಿಗ್ರಹವನ್ನು ಹೊತ್ತು ಕೊಂಡು, ರಕ್ಷಿಸಲಾರದ ಆ ದೇವರಿಗೆ ಬಿನ್ನಹಿಸುವವರು ಏನೂ ತಿಳಿಯದವರಾಗಿದ್ದಾರೆ.
ಅವರು ಅದನ್ನು ತಮ್ಮ ಹೆಗಲಿನ ಮೇಲೆ ಹೊತ್ತುಕೊಂಡು ಅದರ ಸ್ಥಳದಲ್ಲಿ ಇಳಿಸಿ ನಿಲ್ಲಿಸುವರು. ಅದು ಅದರ ಸ್ಥಳದಿಂದ ಜರುಗದು. ಹೌದು, ಒಬ್ಬನು ಕೂಗಿ ಕೊಂಡರೂ ಅದು ಅವನಿಗೆ ಉತ್ತರಕೊಡಲಾರದು ಇಲ್ಲವೆ ಅವನನ್ನು ಕಷ್ಟದಿಂದ ರಕ್ಷಿಸಲಾರದು.
ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಈ ಒಡಂಬಡಿಕೆಯ ಮಾತುಗಳಿಗೆ ವಿಧೇಯನಾಗದ ಮನುಷ್ಯನಿಗೆ ಶಾಪವಿರಲಿ.
ಈ ದಿನ ಇರುವ ಹಾಗೆ ಹಾಲೂ ಜೇನೂ ಹರಿಯುವ ದೇಶವನ್ನು ಅವರಿಗೆ ಕೊಡುವದಕ್ಕೆ ನಿಮ್ಮ ತಂದೆಗಳಿಗೆ ಆಣೆ ಇಟ್ಟ ಪ್ರಮಾಣವನ್ನು ಈಡೇರಿಸುವೆನು ಎಂಬದೇ ಆಗ ನಾನು ಉತ್ತರಕೊಟ್ಟು--ಓ ಕರ್ತನೇ, ಹಾಗೆಯೇ ಆಗಲಿ ಅಂದೆನು.
ಇದಲ್ಲದೆ, ಕರ್ತನು ನನಗೆ ಹೇಳಿದ್ದೇನಂದರೆ-- ಯೆಹೂದದ ಮನುಷ್ಯರಲ್ಲಿಯೂ ಯೆರೂಸಲೇಮಿನ ನಿವಾಸಿಗಳಲ್ಲಿಯೂ ಒಳಸಂಚು ಕಂಡು ಬಂದಿದೆ.
ಇಸ್ರಾಯೇಲಿನ ನಿರೀಕ್ಷೆಯಾದ ಓ ಕರ್ತನೇ, ನಿನ್ನನ್ನು ತೊರೆದು ಬಿಟ್ಟವರೆಲ್ಲರು ನಾಚಿಕೆಗೆ ಒಳಗಾಗುವರು, ಜೀವವುಳ್ಳ ನೀರಿನ ಬುಗ್ಗೆಯಾದ ಕರ್ತನಿಂದ ತೊಲಗಿ ಹೋದವರು ದೂಳಿನಲ್ಲಿ ಬರೆಯಲ್ಪಡುವರು.
ನಾವು ಅನ್ಯಜನಾಂಗಗಳ ಹಾಗೆಯೂ ದೇಶದಲ್ಲಿ ರುವ ಕುಟುಂಬಗಳ ಹಾಗೆಯೂ ಇದ್ದು ಮರಕ್ಕೂ ಕಲ್ಲಿಗೂ ಸೇವೆ ಮಾಡುತ್ತೇವೆಂದು ನಿಮ್ಮ ಮನಸ್ಸಿನಲ್ಲಿ ಹುಟ್ಟುವ ಯೋಚನೆಯು ಎಷ್ಟು ಮಾತ್ರಕ್ಕೂ ಆಗದು.
ನಿಮ್ಮ ವಿಷಯ ವಾಗಿ ಓ ಇಸ್ರಾಯೇಲಿನ ಮನೆತನದವರೇ, ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನೀವು ನನಗೆ ಕಿವಿಗೊಡದಿದ್ದರೆ ಹೋಗಿ ಇನ್ನು ಮೇಲೆಯೂ ನಿಮ್ಮ ನಿಮ್ಮ ವಿಗ್ರಹಗಳನ್ನು ಸೇವಿಸಿರಿ; ಆದರೆ ನಿಮ್ಮ ದಾನಗ ಳಿಂದಲೂ ವಿಗ್ರಹಗಳಿಂದಲೂ ಇನ್ನು ಮೇಲೆ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಪಡಿಸಬೇಡಿರಿ.
ಆದರೆ ದೇವರು ಅವರಿಗೆ ವಿಮುಖನಾಗಿ ಆಕಾಶದ ನಕ್ಷತ್ರಗಣ ವನ್ನು ಪೂಜಿಸುವದಕ್ಕೆ ಅವರನ್ನು ಒಪ್ಪಿಸಿಬಿಟ್ಟನು. ಪ್ರವಾದಿಗಳ ಗ್ರಂಥದಲ್ಲಿ ಬರೆದಿರುವದೇನಂದರೆ-- ಓ ಇಸ್ರಾಯೇಲ್ ಮನೆತನದವರೇ, ನೀವು ಅರಣ್ಯದಲ್ಲಿ ನಾಲ್ವತ್ತು ವರುಷ ಪ್ರಾಣಿಗಳನ್ನು ಕೊಂದು ಬಲಿಗಳನ್ನು ನನಗೆ ಅರ್ಪಿಸುತ್ತಿದ್ದಿರೆ