Home Bibles ದ್ವಿತೀಯೋಪದೇಶಕಾಂಡ 4:34 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 4:34 · ಕನ್ನಡ ಬೈಬಲ್

ಇಲ್ಲವೆ ನಿಮ್ಮ ದೇವರಾದ ಕರ್ತನು ಐಗುಪ್ತದಲ್ಲಿ ನಿಮ್ಮ ಕಣ್ಣುಗಳ ಮುಂದೆ ನಿಮಗೆ ಮಾಡಿದ್ದೆಲ್ಲಾದರ ಹಾಗೆ ಬೇರೆ ದೇವರು ಹೋಗಿ ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಮಧ್ಯ ದಿಂದ ಶೋಧನೆಗಳು ಗುರುತುಗಳು ಅದ್ಭುತಗಳು ಇವುಗಳ ಮೂಲಕವಾಗಿಯೂ ಯುದ್ಧದಿಂದಲೂ ಬಲವಾದ ಕೈಯಿಂದಲೂ ಚಾಚಿದ ತೋಳಿನಿಂದಲೂ ಮಹಾಭೀತಿಯಿಂದಲೂ ತಕ್ಕೊಳ್ಳುವದಕ್ಕೆ ಪ್ರಯತ್ನ ಮಾಡಿದನೋ?

Cross references

ನಿರ್ಗಮಕಾಂಡ 1:9

ಅವನು ತನ್ನ ಜನರಿಗೆ--ಇಗೋ, ಇಸ್ರಾಯೇಲ್‌ ಮಕ್ಕಳಾದ ಈ ಜನರು ನಮಗಿಂತ ಹೆಚ್ಚಿ ಬಲವುಳ್ಳವರಾಗಿದ್ದಾರೆ;

ನಿರ್ಗಮಕಾಂಡ 3:10

ಆದದರಿಂದ ಈಗ ಬಾ, ನಾನು ನಿನ್ನನ್ನು ಫರೋಹನ ಬಳಿಗೆ ಕಳುಹಿಸುತ್ತೇನೆ. ಇಸ್ರಾಯೇಲ್‌ ಮಕ್ಕಳಾದ ನನ್ನ ಜನರನ್ನು ನೀನು ಐಗುಪ್ತದೊಳಗಿಂದ ಹೊರಗೆ ಬರಮಾಡಬೇಕು ಅಂದನು.

ನಿರ್ಗಮಕಾಂಡ 3:17

ಐಗುಪ್ತದಲ್ಲಿ ನಿಮಗುಂಟಾಗಿರುವ ಸಂಕಟದಿಂದ ಬಿಡಿಸಿ ನಿಮ್ಮನ್ನು ಕಾನಾನ್ಯರೂ ಹಿತ್ತಿಯರೂ ಅಮೋರಿಯರೂ ಪೆರಿಜೀಯರೂ ಹಿವ್ವಿಯರೂ ಯೆಬೂಸಿಯರೂ ಇರುವ ಹಾಲೂ ಜೇನೂ ಹರಿಯುವ ದೇಶಕ್ಕೆ ಬರಮಾಡುವೆನೆಂದು ಹೇಳಿದ್ದೇನೆ ಎಂದು ಅವರಿಗೆ ಹೇಳು.

ನಿರ್ಗಮಕಾಂಡ 6:6

ಆದದರಿಂದ ಇಸ್ರಾ ಯೇಲ್‌ ಮಕ್ಕಳಿಗೆ--ನಾನೇ ಕರ್ತನು, ನಾನು ನಿಮ್ಮನ್ನು ಐಗುಪ್ತದ ಬಿಟ್ಟೀಕೆಲಸಗಳಿಂದ ಹೊರಗೆ ಬರಮಾಡಿ ಅವರ ದಾಸತ್ವದಿಂದ ನಿಮ್ಮನ್ನು ಬಿಡಿಸಿ ನಾನು ಚಾಚಿದ ಬಾಹುವಿನಿಂದಲೂ ದೊಡ್ಡ ನ್ಯಾಯತೀರ್ಪುಗ ಳಿಂದಲೂ

ನಿರ್ಗಮಕಾಂಡ 7:3

ಆದರೆ ನಾನು ಫರೋಹನ ಹೃದಯವನ್ನು ಕಠಿಣಪಡಿಸಿ ನನ್ನ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಐಗುಪ್ತದೇಶದಲ್ಲಿ ಹೆಚ್ಚಿಸುವೆನು.

ನಿರ್ಗಮಕಾಂಡ 9:20

ಆಗ ಫರೋಹನ ಸೇವಕರಲ್ಲಿ ಕರ್ತನ ವಾಕ್ಯಕ್ಕೆ ಭಯಪಟ್ಟವರೆಲ್ಲರೂ ತಮ್ಮ ದಾಸರನ್ನೂ ಪಶುಗಳನ್ನೂ ಮನೆಗಳಿಗೆ ಓಡಿಬರುವಂತೆ ಮಾಡಿದರು.

ನಿರ್ಗಮಕಾಂಡ 10:7

ಆಗ ಫರೋಹನ ಸೇವಕರು ಅವನಿಗೆ--ಇವನು ಎಷ್ಟು ಕಾಲ ನಮಗೆ ಉರುಲಾಗಿರಬೇಕು. ಆ ಜನರು ತಮ್ಮ ದೇವರಾದ ಕರ್ತನಿಗೆ ಸೇವೆಮಾಡುವಂತೆ ಅವರನ್ನು ಕಳುಹಿಸಿಬಿಡು. ಐಗುಪ್ತವು ನಾಶವಾಯಿ ತೆಂದು ನಿನಗೆ ಇನ್ನೂ ತಿಳಿಯಲಿಲ್ಲವೋ ಅಂದರು.

ನಿರ್ಗಮಕಾಂಡ 10:21

ಆಗ ಕರ್ತನು ಮೋಶೆಗೆ--ಐಗುಪ್ತದೇಶದಲ್ಲಿ ಕತ್ತಲೆ ಕವಿದು ಗಾಡಾಂಧಕಾರವಾಗುವಂತೆ ನಿನ್ನ ಕೈಯನ್ನು ಆಕಾಶದ ಕಡೆಗೆ ಚಾಚು ಅಂದನು.

ನಿರ್ಗಮಕಾಂಡ 12:30

ಆಗ ಫರೋಹನೂ ಅವನ ಎಲ್ಲಾ ಸೇವಕರೂ ಎಲ್ಲಾ ಐಗುಪ್ತ್ಯರೂ ರಾತ್ರಿಯಲ್ಲಿ ಎದ್ದರು. ಆಗ ಐಗುಪ್ತದಲ್ಲಿ ದೊಡ್ಡ ಗೋಳಾಟವಾಯಿತು. ಅಲ್ಲಿ ಸತ್ತವರಿಲ್ಲದ ಒಂದು ಮನೆಯಾದರೂ ಇರಲಿಲ್ಲ.

ನಿರ್ಗಮಕಾಂಡ 13:3

ಆಗ ಮೋಶೆಯು ಜನರಿಗೆ--ನೀವು ಐಗುಪ್ತದ ದಾಸತ್ವದ ಮನೆಯಿಂದ ಹೊರಬಂದ ಈ ದಿನವನ್ನು ಜ್ಞಾಪಕಮಾಡಿಕೊಳ್ಳಿರಿ. ಯಾಕಂದರೆ ಕರ್ತನು ತನ್ನ ಬಲವಾದ ಕೈಯಿಂದ ನಿಮ್ಮನ್ನು ಅಲ್ಲಿಂದ ಹೊರಗೆ ಬರಮಾಡಿದ್ದಾನೆ. ಹೀಗಿರುವದರಿಂದ ಅಂದು ನೀವು ಹುಳಿ ರೊಟ್ಟಿಯನ್ನು ತಿನ್ನಬಾರದು.

ನಿರ್ಗಮಕಾಂಡ 15:11

ದೇವರುಗಳಲ್ಲಿ ಓ ಕರ್ತನೇ, ನಿನ್ನ ಹಾಗೆ ಯಾರಿದ್ದಾರೆ? ಪರಿಶುದ್ಧತ್ವದಲ್ಲಿ ಮಹಿಮೆ ಹೊಂದಿದವನೂ ಸ್ತೋತ್ರಗಳಲ್ಲಿ ಭಯಂಕರನೂ ಅದ್ಭುತಗಳನ್ನು ಮಾಡುವಾತನೂ ಆದ ನಿನ್ನ ಹಾಗೆ ಯಾರಿದ್ದಾರೆ?

ನಿರ್ಗಮಕಾಂಡ 19:4

ನಾನು ಐಗುಪ್ತ್ಯರಿಗೆ ಮಾಡಿದ್ದನ್ನು ನೀವು ನೋಡಿದ್ದೀರಿ; ನಿಮ್ಮನ್ನು ಹದ್ದುಗಳ ರೆಕ್ಕೆಗಳ ಮೇಲೆ ನಾನು ಹೇಗೆ ಹೊತ್ತುಕೊಂಡು ನನ್ನ ಬಳಿಗೆ ಬರಮಾಡಿದೆನೆಂಬದನ್ನೂ ನೀವು ನೋಡಿದ್ದೀರಿ;

ಅಂಕೆಗಳ ಪುಸ್ತಕ 20:16

ಆದಕಾರಣ ನಾವು ಕರ್ತನಿಗೆ ಕೂಗಿದೆವು; ಆತನು ನಮ್ಮ ಧ್ವನಿಯನ್ನು ಕೇಳಿ ದೂತನನ್ನು ಕಳುಹಿಸಿ ನಮ್ಮನ್ನು ಐಗುಪ್ತದೊಳಗಿಂದ ಹೊರಗೆ ತಂದನು; ಇಗೋ, ನಾವು ನಿನ್ನ ಮೇರೆಯ ಕಡೇ ಊರಾದ ಕಾದೇಶಿನ ಲ್ಲಿದ್ದೇವೆ.

ದ್ವಿತೀಯೋಪದೇಶಕಾಂಡ 1:30

ನಿಮ್ಮ ಮುಂದೆ ಹೋಗುವ ನಿಮ್ಮ ದೇವರಾದ ಕರ್ತನು, ಆತನೇ ಐಗುಪ್ತದಲ್ಲಿ ನಿಮ್ಮ ಕಣ್ಣುಗಳ ಮುಂದೆಯೂ ಅರಣ್ಯದಲ್ಲಿಯೂ ನಿಮಗೆ ಮಾಡಿದ ಎಲ್ಲಾದರ ಪ್ರಕಾರ ನಿಮಗೋಸ್ಕರ ಯುದ್ಧಮಾಡುವನು.

ದ್ವಿತೀಯೋಪದೇಶಕಾಂಡ 5:15

ನೀನು ಐಗುಪ್ತ ದೇಶದಲ್ಲಿ ದಾಸನಾಗಿದ್ದಿ ಎಂದೂ ನಿನ್ನ ದೇವರಾದ ಕರ್ತನು ನಿನ್ನನ್ನು ಅಲ್ಲಿಂದ ಬಲವಾದ ಕೈಯಿಂದಲೂ ಚಾಚಿದ ತೋಳಿನಿಂದಲೂ ಹೊರಗೆ ಬರಮಾಡಿದ ನೆಂದೂ ಜ್ಞಾಪಕಮಾಡಿಕೊಳ್ಳಬೇಕು. ಆದಕಾರಣ ನಿನ್ನ ದೇವರಾದ ಕರ್ತನು ನಿನಗೆ ಸಬ್ಬತ್‌ ದಿವಸವನ್ನು ಆಚರಿಸಬೇಕೆಂದು ಆಜ್ಞಾಪಿಸಿದ್ದಾನೆ.

ದ್ವಿತೀಯೋಪದೇಶಕಾಂಡ 6:21

ನಾವು ಐಗುಪ್ತದಲ್ಲಿ ಫರೋಹನಿಗೆ ದಾಸ ರಾಗಿದ್ದೆವು; ಕರ್ತನು ಬಲವಾದ ಕೈಯಿಂದ ನಮ್ಮನ್ನು ಐಗುಪ್ತದೊಳಗಿಂದ ಹೊರಗೆ ಬರಮಾಡಿದನು.

ದ್ವಿತೀಯೋಪದೇಶಕಾಂಡ 7:8

ಕರ್ತನು ನಿಮ್ಮನ್ನು ಪ್ರೀತಿಸಿದ್ದರಿಂದಲೂ ನಿಮ್ಮ ಪಿತೃಗಳಿಗೆ ಮಾಡಿದ ಪ್ರಮಾಣವನ್ನು ಕಾಪಾಡುವದರಿಂದಲೂ ಕರ್ತನು ನಿಮ್ಮನ್ನು ಬಲವಾದ ಕೈಯಿಂದ ಹೊರಗೆ ಬರಮಾಡಿ ನಿನ್ನನ್ನು ದಾಸತ್ವದ ಮನೆಯಿಂದಲೂ ಐಗುಪ್ತದ ಅರಸನಾದ ಫರೋಹನ ಕೈಯಿಂದಲೂ ವಿಮೋಚಿಸಿದನು.

ದ್ವಿತೀಯೋಪದೇಶಕಾಂಡ 7:19

ನಿನ್ನ ಕಣ್ಣುಗಳು ನೋಡಿದ ದೊಡ್ಡ ಉಪದ್ರವ ಗಳನ್ನೂ ನಿನ್ನ ದೇವರಾದ ಕರ್ತನು ನಿನ್ನನ್ನು ಹೊರಗೆ ಬರಮಾಡಿದಾಗ ಉಂಟಾದ ಗುರುತುಗಳನ್ನೂ ಅದ್ಭುತ ಗಳನ್ನೂ ಬಲವಾದ ಕೈಯನ್ನೂ ಚಾಚಿದ ತೋಳನ್ನೂ ನೀನು ಚೆನ್ನಾಗಿ ಜ್ಞಾಪಕಮಾಡಿಕೊಳ್ಳಬೇಕು. ನೀನು ಯಾವ ಜನಗಳಿಗೆ ಭಯಪಡುತ್ತೀಯೋ ಆ ಜನಗಳಿ ಗೆಲ್ಲಾ ನಿನ್ನ ಕರ್ತನಾದ ದೇವರು ಹಾಗೆಯೇ ಮಾಡು ವನು.

ದ್ವಿತೀಯೋಪದೇಶಕಾಂಡ 10:21

ನಿನ್ನ ಕಣ್ಣುಗಳು ನೋಡಿದ ಆ ಮಹಾ ಭಯಂಕರವಾದ ಕಾರ್ಯಗಳನ್ನು ನಿನಗೆ ಮಾಡಿದ ಆತನೇ ನಿನ್ನ ಸ್ತೋತ್ರವು, ಆತನೇ ನಿನ್ನ ದೇವರು.ಎಪ್ಪತ್ತು ಮಂದಿಯಾಗಿ ನಿನ್ನ ಪಿತೃಗಳು ಐಗುಪ್ತಕ್ಕೆ ಇಳಿದುಹೋದರು; ಈಗ ನಿನ್ನ ದೇವರಾದ ಕರ್ತನು ನಿನ್ನನ್ನು ಆಕಾಶದ ನಕ್ಷತ್ರಗಳ ಹಾಗೆ ಅಸಂಖ್ಯ ವಾಗಿ ಮಾಡಿದ್ದಾನೆ.

ದ್ವಿತೀಯೋಪದೇಶಕಾಂಡ 26:8

ಆದದರಿಂದ ಕರ್ತನು ನಮ್ಮನ್ನು ತನ್ನ ಬಲವಾದ ಕೈಯಿಂದಲೂ ಚಾಚಿದ ತೋಳಿನಿಂದಲೂ ಮಹಾ ಭಯದಿಂದಲೂ ಗುರುತುಗಳಿಂದಲೂ ಅದ್ಭುತ ಗಳಿಂದಲೂ ಐಗುಪ್ತದಿಂದ ಹೊರಗೆ ಬರಮಾಡಿ

ದ್ವಿತೀಯೋಪದೇಶಕಾಂಡ 29:3

ಆ ದೊಡ್ಡ ಪರಿಶೋಧನೆಗಳನ್ನೂ ಆ ದೊಡ್ಡ ಗುರುತುಗಳನ್ನೂ ಅದ್ಭುತಗಳನ್ನೂ ನಿನ್ನ ಕಣ್ಣುಗಳು ನೋಡಿದವಲ್ಲಾ?

ದ್ವಿತೀಯೋಪದೇಶಕಾಂಡ 34:12

ಕರ್ತನು ಮುಖಾಮುಖಿಯಾಗಿ ತಿಳಿದ ಮೋಶೆಯ ಹಾಗೆ ಮತ್ತೊಬ್ಬ ಪ್ರವಾದಿ ಇಸ್ರಾ ಯೇಲಿನಲ್ಲಿ ಏಳಲಿಲ್ಲ.

ಯೆಹೋಶುವ 24:7

ಅವರು ಕರ್ತನಿಗೆ ಕೂಗಿದಾಗ ನಿಮಗೂ ಐಗುಪ್ತ್ಯರಿಗೂ ಮಧ್ಯದಲ್ಲಿ ಅಂಧಕಾರವನ್ನು ಇರಿಸಿ ಸಮುದ್ರವನ್ನು ಅವರ ಮೇಲೆ ಬರಮಾಡಿ ಅವರನ್ನು ಮುಚ್ಚಿಬಿಟ್ಟೆನು.

ಕೀರ್ತನೆಗಳು 78:12

ಅವರ ತಂದೆಗಳ ಮುಂದೆ ಐಗುಪ್ತ ದೇಶ ದಲ್ಲಿ, ಸೋನ್‌ ಬೈಲಿನಲ್ಲಿ ಆತನು ಅದ್ಭುತಗಳನ್ನು ಮಾಡಿದನು.

ಕೀರ್ತನೆಗಳು 78:48

ಅವರ ದನಗಳನ್ನು ಕಲ್ಮ ಳೆಗೂ ಮಂದೆಗಳನ್ನು ಸಿಡಿಲಿಗೂ ಒಪ್ಪಿಸಿಬಿಟ್ಟನು.

ಕೀರ್ತನೆಗಳು 136:12

ಬಲವಾದ ಕೈಯಿಂ ದಲೂ ಚಾಚಿದ ತೋಳಿನಿಂದಲೂ ಅವರನ್ನು ಹೊರಗೆ ತಂದನು; ಆತನ ಕರುಣೆಯು ಎಂದೆಂದಿಗೂ ಅದೆ.

ಯೆರೆಮಿಯ 32:21

ಆಗ ನಾನು ನನ್ನ ಸೇವಕನಾದ ದಾವೀದನ ಸಂಗಡ ಮಾಡಿದ ಒಡಂಬಡಿಕೆಯನ್ನೂ ಅವನ ಸಿಂಹಾಸನದಲ್ಲಿ ಆಳುವ ಮಗನು ಅವನಿಗಿಲ್ಲದ ಹಾಗೆ ಮತ್ತು ನನ್ನ ಸೇವಕರಾಗಿರುವ ಯಾಜಕರಾದ ಲೇವಿಯರ ಸಂಗಡ ಮಾಡಿದ ಒಡಂಬಡಿಕೆಯನ್ನೂ ವಿಾರುವದಕ್ಕೆ ಆದೀತು.

1 ಪೇತ್ರ 5:6

ಹೀಗಿರುವದರಿಂದ ದೇವರ ತ್ರಾಣವುಳ್ಳ ಹಸ್ತದ ಕೆಳಗೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ; ಆತನು ತಕ್ಕ ಕಾಲದಲ್ಲಿ ನಿಮ್ಮನ್ನು ಮೇಲಕ್ಕೆ ತರುವನು.

Interlinear

Choose Theme