ಕರ್ತನೇ ದೇವರೆಂದು ನೀನು ತಿಳುಕೊಳ್ಳುವ ಹಾಗೆ ಅವು ನಿನಗೆ ತೋರಿಸಲ್ಪಟ್ಟವು; ಆತನಲ್ಲದೆ ಮತ್ತೊಬ್ಬನಿಲ್ಲ.
Cross references
ಆರೋನನು ಐಗು ಪ್ತದ ನೀರುಗಳ ಮೇಲೆ ಕೈಚಾಚಿದಾಗ ಕಪ್ಪೆಗಳು ಏರಿಬಂದು ಐಗುಪ್ತದೇಶವನ್ನು ಮುಚ್ಚಿಕೊಂಡವು.
ದೇವರುಗಳಲ್ಲಿ ಓ ಕರ್ತನೇ, ನಿನ್ನ ಹಾಗೆ ಯಾರಿದ್ದಾರೆ? ಪರಿಶುದ್ಧತ್ವದಲ್ಲಿ ಮಹಿಮೆ ಹೊಂದಿದವನೂ ಸ್ತೋತ್ರಗಳಲ್ಲಿ ಭಯಂಕರನೂ ಅದ್ಭುತಗಳನ್ನು ಮಾಡುವಾತನೂ ಆದ ನಿನ್ನ ಹಾಗೆ ಯಾರಿದ್ದಾರೆ?
ಹೀಗಿರುವ ದರಿಂದ ಮೇಲಿನ ಆಕಾಶದಲ್ಲಿಯೂ ಕೆಳಗಿನ ಭೂಮಿ ಯಲ್ಲಿಯೂ ಕರ್ತನೇ ದೇವರೆಂದು ಮತ್ತೊಬ್ಬನಿಲ್ಲ ವೆಂದು ಈಹೊತ್ತು ತಿಳುಕೊಂಡು ಮನಸ್ಸಿಗೆ ತಂದು ಕೋ.
ಓ ಇಸ್ರಾಯೇಲೇ, ಕೇಳು, ನಮ್ಮ ದೇವರಾದ ಕರ್ತನು ಒಬ್ಬನೇ ಕರ್ತನು.
ಹೀಗಿರುವದರಿಂದ ನಿನ್ನ ದೇವರಾದ ಕರ್ತನು ಆತನೇ ದೇವರು; ಆತನೇ ನಂಬಿಗಸ್ತನಾದ ದೇವರು; ಆತನು ತನ್ನನ್ನು ಪ್ರೀತಿಮಾಡಿ ತನ್ನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ಒಡಂಬಡಿಕೆಯನ್ನೂ ಕರುಣೆಯನ್ನೂ ಸಾವಿರ ತಲೆಗಳ ವರೆಗೂ ಕಾಪಾಡಿ
ನಾನು ಕೇಡುಗಳನ್ನು ಅವರ ಮೇಲೆ ಕೂಡಿಸಿ ಡುವೆನು; ನನ್ನ ಬಾಣಗಳನ್ನು ಅವರ ಮೇಲೆ ಎಸೆದು ತೀರಿಸುವೆನು.
ನಾನು ಆತನೇ ಎಂದೂ ನನ್ನ ಹಾಗೆ ಬೇರೆ ದೇವರಿಲ್ಲವೆಂದೂ ಈಗ ನೋಡಿರಿ; ನಾನೇ ಸಾಯಿಸು ತ್ತೇನೆ, ಬದುಕಿಸುತ್ತೇನೆ; ಗಾಯ ಮಾಡುತ್ತೇನೆ, ನಾನೇ ಸ್ವಸ್ಥ ಮಾಡುತ್ತೇನೆ. ನನ್ನ ಕೈಯಿಂದ ತಪ್ಪಿಸುವವನು ಯಾರೂ ಇಲ್ಲ.
ಕರ್ತನ ಹಾಗೆ ಪರಿಶುದ್ಧನಾದವನಿಲ್ಲ; ನಿಶ್ಚಯವಾಗಿ ನಿನ್ನ ಹೊರತು ಮತ್ತೊಬ್ಬನಿಲ್ಲ. ನಮ್ಮ ದೇವರ ಹಾಗೆ ಯಾವ ಬಂಡೆಯೂ ಇಲ್ಲ.
ಆಗ ದಾವೀದನು ಫಿಲಿಷ್ಟಿಯನಿಗೆ--ನೀನು ಕತ್ತಿ ಈಟಿಯ ಗುರಾಣಿಯ ಸಂಗಡ ನನ್ನ ಬಳಿಗೆ ಬರುತ್ತೀ; ಆದರೆ ನೀನು ನಿಂದಿಸಿದ ಇಸ್ರಾಯೇ ಲಿನ ಸೈನ್ಯಗಳ ದೇವರಾದಂಥ ಸೈನ್ಯಗಳ ಕರ್ತನ ಹೆಸರಿ ನಲ್ಲಿ ನಾನು ನಿನ್ನ ಬಳಿಗೆ ಬರುತ್ತೇನೆ.
ಆದದರಿಂದ ಓ ಕರ್ತನಾದ ದೇವರೇ, ನೀನು ಮಹತ್ವವುಳ್ಳವನಾಗಿದ್ದೀ; ನಾವು ನಮ್ಮ ಕಿವಿಗಳಿಂದ ಕೇಳಿದ ಎಲ್ಲಾದರ ಪ್ರಕಾರ ನಿನ್ನ ಹಾಗೆ ಯಾರೂ ಇಲ್ಲ; ನಿನ್ನ ಹೊರತು ದೇವರು ಯಾರೂ ಇಲ್ಲ.
ಕರ್ತನಲ್ಲದೆ ದೇವರು ಯಾರು? ನಮ್ಮ ದೇವರಲ್ಲದೆ ಬಂಡೆಯು ಯಾರು?
ಸಾಯಂಕಾಲದ ಬಲಿಯನ್ನು ಅರ್ಪಿಸುವ ವೇಳೆ ಯಲ್ಲಿ ಪ್ರವಾದಿಯಾದ ಎಲೀಯನು ಸವಿಾಪಕ್ಕೆ ಬಂದು--ಅಬ್ರಹಾಮನಿಗೂ ಇಸಾಕನಿಗೂ ಇಸ್ರಾ ಯೇಲಿಗೂ ದೇವರಾದ ಕರ್ತನೇ, ಇಸ್ರಾಯೇಲಿನಲ್ಲಿ ನೀನು ದೇವರೆಂದೂ ನಾನು ನಿನ್ನ ಸೇವಕನೆಂದೂ ನಾನು ಈ ಕಾರ್ಯಗಳನ್ನೆಲ್ಲಾ ನಿನ್ನ ಮಾತಿನ ಹಾಗೆಯೇ ಮಾಡಿದೆನೆಂದೂ ಇಂದು ತಿಳಿಯಲ್ಪಡಲಿ.
ಆದದ ರಿಂದ ಅವರು ಅವುಗಳನ್ನು ನಾಶಮಾಡಿದ್ದಾರೆ. ಆದರೆ ಈಗ ನಮ್ಮ ದೇವರಾದ ಕರ್ತನೇ, ನೀನೊಬ್ಬನೇ ದೇವರಾದ ಕರ್ತನಾಗಿದ್ದೀ ಎಂದು ಭೂಮಿಯ ಎಲ್ಲಾ ರಾಜ್ಯಗಳೂ ತಿಳಿಯುವ ಹಾಗೆ ನಮ್ಮನ್ನು ಅವನ ಕೈಯಿಂದ ತಪ್ಪಿಸಿ ರಕ್ಷಿಸು ಎಂಬದೇ.
ಓ ಕರ್ತನೇ, ನಾವು ನಮ್ಮ ಕಿವಿಗಳಿಂದ ಕೇಳಿದ ಎಲ್ಲಾದರ ಪ್ರಕಾರ ನಿನ್ನ ಹಾಗೆ ಯಾರೂ ಇಲ್ಲ; ನಿನ್ನ ಹೊರತು ದೇವರು ಯಾರೂ ಇಲ್ಲ.
ನಿಶ್ಚಯವಾಗಿ ನೀತಿವಂತನಿಗೆ ಪ್ರತಿಫಲವಿದೆ; ನಿಶ್ಚಯವಾಗಿ ಭೂಮಿಯಲ್ಲಿ ನ್ಯಾಯ ತೀರಿಸುವ ದೇವರು ಆತನೇ ಎಂದು ಮನುಷ್ಯನು ಹೇಳುವನು.
ನೀನು ಮಾತ್ರ ಯೆಹೋವ ನೆಂಬ ಹೆಸರುಳ್ಳ ನೀನು ಸಮಸ್ತ ಭೂಮಿಯ ಮೇಲೆ ಮಹೋನ್ನತನಾಗಿದ್ದೀ ಎಂದು ತಿಳುಕೊಳ್ಳಲಿ.
ಕರ್ತನು ಹೇಳುವದೇನಂದರೆ--ನೀವು ನನ್ನ ಸಾಕ್ಷಿಗಳಾಗಿದ್ದೀರಿ; ನಾನೇ ಆತನೆಂದು ನೀವು ತಿಳಿದು ನಂಬಿ ಗ್ರಹಿಸುವ ಹಾಗೆಯೇ ನಾನು ನಿನ್ನನ್ನು ಸೇವಕನನ್ನಾಗಿ ಆರಿಸಿಕೊಂಡಿದ್ದೇನೆ. ನನಗಿಂತ ಮುಂಚೆ ಯೂ ನನ್ನ ನಂತರದಲ್ಲಿಯೂ ಯಾವ ದೇವರೂ ಇರಲಿಲ್ಲ.
ಇಸ್ರಾಯೇಲಿನ ಅರಸನೂ ವಿಮೋಚಕನೂ ಸೈನ್ಯ ಗಳ ಕರ್ತನೂ ಇಂತೆನ್ನುತ್ತಾನೆ--ನಾನೇ ಮೊದಲನೆಯ ವನು, ನಾನೇ ಕಡೆಯವನು, ನನ್ನ ಹೊರತು ಬೇರೆ ಯಾವ ದೇವರೂ ಇಲ್ಲ.
ಹೆದರಬೇಡಿರಿ ಇಲ್ಲವೆ ಭಯಪಡಬೇಡಿರಿ ನಾನು ಪೂರ್ವದಿಂದಲೂ ನಿಮಗೆ ಹೇಳಲಿಲ್ಲವೋ? ಅದನ್ನು ಪ್ರಕಟಿಸಲಿ ಲ್ಲವೋ? ಅಂತೂ ನೀವೇ ನನ್ನ ಸಾಕ್ಷಿಗಳು. ನಾನಲ್ಲದೆ ಇನ್ನೊಬ್ಬ ದೇವರು ಇದ್ದಾನೋ? ಹೌದು, ಇನ್ನು ಯಾವ ದೇವರೂ ಇಲ್ಲ, ಯಾರೂ ನನಗೆ ಗೊತ್ತಿಲ್ಲ.
ನಾನೇ ಕರ್ತನು, ಮತ್ತೊಬ್ಬನಿಲ್ಲ; ನನ್ನ ಹೊರತು ಯಾವ ದೇವರೂ ಇಲ್ಲ; ನೀನು ನನ್ನನ್ನು ಅರಿಯದನಾಗಿದ್ದರೂ ನಿನಗೆ ನಡುಕಟ್ಟುವೆನು.
ಆಕಾಶಗಳನ್ನು ನಿರ್ಮಿಸಿದ ಕರ್ತನು ಇಂತೆನ್ನು ತ್ತಾನೆ--ದೇವರು ತಾನೇ ಭೂಮಿಯನ್ನು ನಿರ್ಮಿಸಿ ಅದನ್ನು ಉಂಟು ಮಾಡಿದನು. ಆತನೇ ಅದನ್ನು ಸ್ಥಾಪಿಸಿದನು; ಅದನ್ನು ವ್ಯರ್ಥವಾಗಿ ಸೃಷ್ಟಿಸದೇ ಜನ ನಿವಾಸಕ್ಕಾಗಿಯೇ ರೂಪಿಸಿದನು; ನಾನೇ ಕರ್ತನು, ಮತ್ತೊಬ್ಬನಿಲ್ಲ.
ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ನೋಡಿ ರಕ್ಷಣೆಯನ್ನು ಹೊಂದಿರಿ; ಯಾಕಂದರೆ ನಾನೇ ದೇವರು, ನನ್ನ ಹೊರತು ಯಾರೂ ಇಲ್ಲ.
ಯೇಸು ಪ್ರತ್ಯುತ್ತರವಾಗಿ ಅವನಿಗೆ--ಎಲ್ಲಾ ದೈವಾಜ್ಞೆಗಳಲ್ಲಿ ಮೊದಲನೆಯದು -- ಓ ಇಸ್ರಾಯೇಲೇ, ಕೇಳು; ನಮ್ಮ ದೇವರಾದ ಕರ್ತನು ಒಬ್ಬನೇ ಕರ್ತನಾಗಿದ್ದಾನೆ.
ಅದಕ್ಕೆ ಆ ಶಾಸ್ತ್ರಿಯು ಆತನಿಗೆ --ಬೋಧಕನೇ, ಒಳ್ಳೇದು. ನೀನು ಸತ್ಯವನ್ನೇ ಹೇಳಿದ್ದೀ; ಯಾಕಂದರೆ ದೇವರು ಒಬ್ಬನೇ; ಆತನ ಹೊರತು ಬೇರೊಬ್ಬನು ಇಲ್ಲವೇ ಇಲ್ಲ.
ದೇವರ ಮಗನು ಬಂದು ನಾವು ಸತ್ಯವಾಗಿರುವಾತ ನನ್ನು ಅರಿತುಕೊಳ್ಳುವ ಹಾಗೆ ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ನಾವು ಆ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಈತನೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾನೆ.ಚಿಕ್ಕ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ. ಆಮೆನ್.