ನಿನಗಿಂತ ದೊಡ್ಡದಾದ ನಿನಗಿಂತ ಬಲಿಷ್ಠ ವಾದ ಜನಾಂಗಗಳನ್ನು ನಿನ್ನ ಮುಂದೆ ಓಡಿಸಿ ನಿನ್ನನ್ನು ಒಳಗೆ ಬರಮಾಡಿ ಈ ದಿನ ಇರುವಂತೆ ನಿನಗೆ ಅವರ ದೇಶವನ್ನು ಸ್ವಾಸ್ತ್ಯವಾಗಿ ಕೊಟ್ಟನು.
Cross references
ನನ್ನ ಭಯವನ್ನು ನಿಮ್ಮ ಮುಂದೆ ಕಳುಹಿಸಿ ನೀವು ಸೇರುವ ಜನರನ್ನೆಲ್ಲಾ ನಾಶಮಾಡುವೆನು ಮತ್ತು ನಿಮ್ಮನ್ನು ವಿರೋಧಿಸುವವರೆಲ್ಲಾ ನಿಮಗೆ ಬೆನ್ನು ತೋರಿ ಸುವಂತೆ ಮಾಡುವೆನು.
ಇದಲ್ಲದೆ ಕರ್ತನು ನನಗೆ--ಇಗೋ, ಸೀಹೋ ನನನ್ನೂ ಅವನ ದೇಶವನ್ನೂ ನಿನ್ನ ಮುಂದೆ ಒಪ್ಪಿಸು ವದಕ್ಕೆ ಆರಂಭಮಾಡಿದ್ದೇನೆ; ಅವನ ದೇಶವನ್ನು ಸ್ವಾಸ್ತ್ಯವಾಗಿ ಹೊಂದುವ ಹಾಗೆ ಸ್ವತಂತ್ರಿಸಿಕೊಳ್ಳುವದಕ್ಕೆ ಆರಂಭಮಾಡು ಅಂದನು.
ನೀನು ಸ್ವತಂತ್ರಿಸಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ಬರಮಾಡಿದಾಗ ಆತನು ನಿನಗಿಂತ ದೊಡ್ಡ ವರೂ ಬಲಿಷ್ಠರೂ ಆದ ಏಳು ಜನಾಂಗಗಳನ್ನು ಅಂದರೆ ಹಿತ್ತಿಯರನ್ನೂ ಗಿರ್ಗಾಷಿಯರನ್ನೂ ಅಮೋರಿಯರನ್ನೂ ಕಾನಾನ್ಯರನ್ನೂ ಪೆರಿಜ್ಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ಈ ಪ್ರಕಾರ ಬಹಳ ಜನಾಂಗ ಗಳನ್ನು ನಿನ್ನ ಮುಂದೆ ಹೊರಡಿಸಿ
ನಿನ್ನ ದೇವ ರಾದ ಕರ್ತನನ್ನು ಜ್ಞಾಪಕಮಾಡಿಕೊಳ್ಳಬೇಕು; ಈ ಹೊತ್ತು ಇರುವಂತೆ ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ತನ್ನ ಒಡಂಬಡಿಕೆಯನ್ನು ಸ್ಥಾಪಿಸುವ ಹಾಗೆ ಆಸ್ತಿಯನ್ನು ಸಂಪಾದಿಸುವ ಬಲವನ್ನು ನಿನಗೆ ಕೊಡುವಾತನು ಆತನೇ.
ಓ ಇಸ್ರಾಯೇಲೇ, ಕೇಳು; ನೀನು ಹೋಗಿ ನಿನಗಿಂತ ದೊಡ್ಡದಾದ ಬಲಿಷ್ಠ ಜನಾಂಗ ಗಳನ್ನೂ ಆಕಾಶದ ವರೆಗೆ ಭದ್ರಮಾಡಿದ ದೊಡ್ಡ ಪಟ್ಟಣಗಳನ್ನೂ
ಕರ್ತನು ಆ ಜನಾಂಗಗಳನ್ನೆಲ್ಲಾ ನಿಮ್ಮ ಮುಂದೆ ಹೊರಡಿಸುವನು; ನೀವು ನಿಮಗಿಂತ ಬಲವುಳ್ಳ ದೊಡ್ಡ ಜನಾಂಗಗಳನ್ನು ಸ್ವಾಧೀನ ಮಾಡಿಕೊಳ್ಳುವಿರಿ.
ಯೆಹೋಶು ವನು--ಜೀವವುಳ್ಳ ದೇವರು ನಿಮ್ಮ ಮಧ್ಯದಲ್ಲಿರು ವದನ್ನೂ ಆತನು ಕಾನಾನ್ಯರು ಹಿತ್ತಿಯರು ಹಿವ್ವಿಯರು ಪೆರಿಜೀಯರು ಗಿರ್ಗಾಷಿಯರು ಅಮೋರಿಯರು ಯೊಬೂಸಿಯರು ಇವರನ್ನು ನಿಮ್ಮ ಮುಂದೆ ನಿಶ್ಚಯ ವಾಗಿ ಓಡಿಸಿ ಬಿಡುವದನ್ನೂ ನೀವು ತಿಳಿಯುವ ಹಾಗೆ
ನೀನು ನಿನ್ನ ಜನವಾದ ಇಸ್ರಾಯೇಲಿನ ಎದುರಿನಿಂದ ಈ ದೇಶದ ನಿವಾಸಿಗ ಳನ್ನು ಓಡಿಸಿಬಿಟ್ಟು ಅದನ್ನು ನಿನ್ನ ಸ್ನೇಹಿತನಾದ ಅಬ್ರ ಹಾಮನ ಸಂತತಿಗೆ ಎಂದೆಂದಿಗೂ ಕೊಟ್ಟ ನೀನು ನಮ್ಮ ದೇವರಲ್ಲವೋ?
ಇಗೋ, ನಮಗೆ ನೀನು ಸ್ವಾಧೀನ ಮಾಡಿಕೊಳ್ಳಲು ಕೊಟ್ಟ ನಿನ್ನ ಸ್ವಾಸ್ಥ್ಯದೊಳಗಿಂದ ಅವರು ಬಂದು ನಮ್ಮನ್ನು ಹೊರಡಿಸಬೇಕೆಂದು ನಮಗೆ ಪ್ರತೀಕಾರ ಮಾಡುತ್ತಾರೆ.
ನೀನು ನಿನ್ನ ಕೈಯಿಂದ ಜನಾಂಗಗಳನ್ನು ಹೊರಡಿಸಿ (ನಮ್ಮ ತಂದೆಗಳನ್ನು) ನೆಟ್ಟಿದ್ದೀ; ಜನರನ್ನು ಬಾಧೆಪಡಿಸಿ ಅವರನ್ನು ಹೊರಗೆ ಹಾಕಿದಿ.