Home Bibles ದ್ವಿತೀಯೋಪದೇಶಕಾಂಡ 4:48 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 4:48 · ಕನ್ನಡ ಬೈಬಲ್

ಅರ್ನೋನ್‌ ನದಿಯ ತೀರದಲ್ಲಿರುವ ಅರೋ ಯೇರ್‌ ಮೊದಲುಗೊಂಡು ಹೆರ್ಮೋನೆಂಬ ಸೀಯೋನ್‌ ಪರ್ವತದ ವರೆಗೆಯೊರ್ದನಿನ ಈಚೆಯಲ್ಲಿರುವ ಮೂಡಣ ದಿಕ್ಕಿನಲ್ಲಿ ಇರುವ ಎಲ್ಲಾ ಬೈಲುಗಳನ್ನು ಸಹ ಪಿಸ್ಗಾದ ಊಟೆಗಳಲ್ಲಿರುವ ಬೈಲಿನ ಸಮುದ್ರದ ವರೆಗೆ ಸ್ವಾಧೀನಮಾಡಿಕೊಂಡರು.

Cross references

ದ್ವಿತೀಯೋಪದೇಶಕಾಂಡ 2:36

ಅರ್ನೋನಿನ ತೀರದಲ್ಲಿರುವ ಅರೋ ಯೇರ್‌ ಮತ್ತು ಆ ಹಳ್ಳದ ಪಟ್ಟಣವು ಮೊದಲ್ಗೊಂಡು ಗಿಲ್ಯಾದಿನ ವರೆಗೂ ಒಂದು ಪಟ್ಟಣವಾದರೂ ನಮಗೆ ಅಸಾಧ್ಯವಾಗಿರಲಿಲ್ಲ; ನಮ್ಮ ದೇವರಾದ ಕರ್ತನು ಅವುಗಳನ್ನೆಲ್ಲಾ ನಮ್ಮ ಕೈಗೆ ಒಪ್ಪಿಸಿದನು.ಅಮ್ಮೋನಿಯರ ಮಕ್ಕಳ ದೇಶಕ್ಕೂ ಯಬ್ಬೋಕ್‌ ನದಿಯ ಯಾವ ದೊಂದು ಸ್ಥಳಕ್ಕೂ ಪರ್ವತ ಪಟ್ಟಣಗಳಿಗೂ ನಮ್ಮ ದೇವರಾದ ಕರ್ತನು ನಮಗೆ ಬೇಡವೆಂದ ಯಾವ ಸ್ಥಳಕ್ಕೂ ನೀನು ಮಾತ್ರ ಬರಲಿಲ್ಲ.

ದ್ವಿತೀಯೋಪದೇಶಕಾಂಡ 3:8

ಆ ಕಾಲದಲ್ಲಿ ನಾವು ಯೊರ್ದನಿನ ಈಚೆಯಲ್ಲಿ ಅರ್ನೋನ್‌ ನದಿಯಿಂದ ಹೆರ್ಮೋನ್‌ ಬೆಟ್ಟದ ವರೆಗೆ ಇರುವ ದೇಶವನ್ನು ಅಮೋರಿಯರ ಇಬ್ಬರು ಅರ ಸರ ಕೈಯಿಂದ ತಕ್ಕೊಂಡೆವು.

ದ್ವಿತೀಯೋಪದೇಶಕಾಂಡ 3:9

(ಆ ಹೆರ್ಮೋನಿಗೆ ಚೀದೋನ್ಯರು ಸಿರ್ಯೋನೆಂದೂ ಅಮೋರಿಯರು ಸೇನೀಯರೆಂದೂ ಅನ್ನುತ್ತಾರೆ.)

ದ್ವಿತೀಯೋಪದೇಶಕಾಂಡ 3:12

ಆ ಕಾಲದಲ್ಲಿ ನಾವು ಸ್ವತಂತ್ರಿಸಿಕೊಂಡ ದೇಶವನ್ನು ಅರ್ನೋನ್‌ ನದಿಯ ಸವಿಾಪದಲ್ಲಿರುವ ಅರೋಯೇರಿನಿಂದ ಮೊದಲ್ಗೊಂಡು ಅರ್ಧ ಗಿಲ್ಯಾದ್‌ ಬೆಟ್ಟವನ್ನೂ ಅದರ ಪಟ್ಟಣಗಳನ್ನೂ ರೂಬೇನನ ಮನೆಯವರಿಗೂ ಗಾದನ ಮನೆಯವರಿಗೂ ಕೊಟ್ಟೆನು.

ಯೆಹೋಶುವ 13:24

ಇದಲ್ಲದೆ ಮೋಶೆಯು ಗಾದನ ಮಕ್ಕಳ ಗೋತ್ರ ಅವರ ಕುಟುಂಬಗಳ ಪ್ರಕಾರ ಬಾಧ್ಯತೆಯಾಗಿ ಕೊಟ್ಟನು.

ಕೀರ್ತನೆಗಳು 133:3

ಚೀಯೋನಿನ ಪರ್ವತಗಳ ಮೇಲೆ ಬೀಳುವ ಹೆರ್ಮೋನಿನ ಮಂಜಿನ ಹಾಗೆಯೂ ಅದೆ; ಅಲ್ಲಿ ಕರ್ತನು ಆಶೀರ್ವಾದವನ್ನೂ ಯುಗಯುಗಕ್ಕಿರುವ ಜೀವವನ್ನೂ ಆಜ್ಞಾಪಿಸಿದ್ದಾನೆ.

Interlinear

Choose Theme