Home Bibles ದ್ವಿತೀಯೋಪದೇಶಕಾಂಡ 5:12 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 5:12 · ಕನ್ನಡ ಬೈಬಲ್

ನಿನ್ನ ದೇವರಾದ ಕರ್ತನು ನಿನಗೆ ಆಜ್ಞಾಪಿಸಿದಂತೆ ಸಬ್ಬತ್‌ ದಿವಸವನ್ನು ಪರಿಶುದ್ಧಮಾಡುವದಕ್ಕೆ ಅದನ್ನು ಕಾಪಾಡು.

Cross references

ನಿರ್ಗಮಕಾಂಡ 16:30

ಹೀಗೆ ಜನರು ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡರು.

ನಿರ್ಗಮಕಾಂಡ 20:8

ಸಬ್ಬತ್‌ ದಿನವನ್ನು ಪರಿಶುದ್ಧವಾಗಿ ಇರುವಂತೆ ಜ್ಞಾಪಕದಲ್ಲಿಟ್ಟುಕೋ.

ಯೆಶಾಯ 56:6

ಕರ್ತನನ್ನು ಸೇವಿಸುವದಕ್ಕೂ ಆತನ ಹೆಸರನ್ನು ಪ್ರೀತಿಮಾಡುವದಕ್ಕೂ ಆತನ ಸೇವಕರಾಗಿ ರುವದಕ್ಕೂ ತಾವೇ ಕರ್ತನೊಂದಿಗೆ ಸೇರಿಕೊಂಡಿರುವ ಅನ್ಯರ ಮಕ್ಕಳನ್ನು ಸಬ್ಬತ್‌ ದಿನವನ್ನು ಅಪವಿತ್ರ ಮಾಡದೆ ಕೈಕೊಳ್ಳುವ ಪ್ರತಿಯೊಬ್ಬನನ್ನೂ ನನ್ನ ಒಡಂಬಡಿಕೆಯನ್ನು ಹಿಡಿದುಕೊಂಡಿರುವವರನೂ

ಯೆಶಾಯ 58:13

ನೀನು ಸಬ್ಬತ್ತಿನಲ್ಲಿ ನಿನ್ನ ಕಾಲನ್ನು ಹಿಂದೆಗೆದು, ನನ್ನ ಪರಿಶುದ್ಧ ದಿವಸದಲ್ಲಿ ನಿನ್ನ ಇಷ್ಟ ವನ್ನು ಮಾಡದೇ ಹೋದರೆ ಸಬ್ಬತ್ತನ್ನು ಆನಂದಕರ ವಾದದ್ದೆಂದೂ ಕರ್ತನ ಪರಿಶುದ್ಧ ದಿವಸವನ್ನು ಘನವುಳ್ಳದ್ದೆಂದೂ ಕರೆದರೆ, ಸ್ವಂತ ಕೆಲಸಗಳನ್ನು ಮಾಡದೆ ಸ್ವಂತ ಇಷ್ಟವನ್ನು ಕಂಡುಕೊಳ್ಳದೆ, ಸ್ವಂತ ಮಾತುಗಳನ್ನು ಆಡದೆ, ಅದನ್ನು ಘನಪಡಿಸಿದರೆ,ಆಗ ಕರ್ತನಲ್ಲಿ ಆನಂದಗೊಳ್ಳುವಿ; ಭೂಮಿಯ ಎತ್ತರವಾದ ಸ್ಥಳಗಳ ಮೇಲೆ ನಿನ್ನನ್ನು ಹತ್ತಿಸಿ, ನಿನ್ನ ತಂದೆಯಾದ ಯಾಕೋಬನ ಬಾಧ್ಯತೆಯನ್ನು ಅನುಭವಿ ಸುವಂತೆ ನಿನಗೆ ಮಾಡುವೆನು. ಕರ್ತನೇ ಇದನ್ನು ನುಡಿದಿದ್ದಾನೆ.

Interlinear

Choose Theme