Home Bibles ದ್ವಿತೀಯೋಪದೇಶಕಾಂಡ 6:23 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 6:23 · ಕನ್ನಡ ಬೈಬಲ್

ಆತನು ನಮ್ಮ ಪಿತೃಗಳಿಗೆ ಪ್ರಮಾಣಮಾಡಿದ ದೇಶವನ್ನು ನಮಗೆ ಕೊಟ್ಟು ನಾವು ಅದರಲ್ಲಿ ಪ್ರವೇಶಮಾಡುವ ಹಾಗೆ ಅಲ್ಲಿಂದ ನಮ್ಮನ್ನು ಹೊರಗೆ ಬರಮಾಡಿದನು.

Cross references

ನಿರ್ಗಮಕಾಂಡ 13:5

ಆದದ ರಿಂದ ನಿನಗೆ ಕೊಡುತ್ತೇನೆಂದು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ದೇಶಕ್ಕೆ ಅಂದರೆ ಕಾನಾನ್ಯರ ಹಿತ್ತಿಯರ ಅಮೋರಿಯರ ಹಿವ್ವಿಯರ ಯೆಬೂಸಿಯರ ಹಾಲೂ ಜೇನೂ ಹರಿಯುವ ದೇಶಕ್ಕೆ ನಿನ್ನನ್ನು ಕರೆ ತಂದಾಗ ಈ ಆಚರಣೆಯನ್ನು ಈ ತಿಂಗಳಲ್ಲಿ ಆಚರಿಸ ಬೇಕು.

ದ್ವಿತೀಯೋಪದೇಶಕಾಂಡ 1:8

ಇಗೋ, ಆ ದೇಶವನ್ನು ನಿಮ್ಮ ಮುಂದೆ ಇಟ್ಟಿದ್ದೇನೆ; ಹೋಗಿ ಕರ್ತನು ನಿಮ್ಮ ಪಿತೃಗಳಾದ ಅಬ್ರಹಾಮ ಇಸಾಕ ಯಾಕೋಬರಿಗೂ ಅವರ ತರುವಾಯ ಹುಟ್ಟುವ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣಮಾಡಿದ ದೇಶವನ್ನು ಸ್ವತಂತ್ರಿಸಿಕೊಳ್ಳಿರಿ ಎಂದು ಹೇಳಿದನು.

ದ್ವಿತೀಯೋಪದೇಶಕಾಂಡ 1:35

ನಿಶ್ಚಯವಾಗಿ ಕೆಟ್ಟಸಂತತಿಯಾದ ಈ ಮನುಷ್ಯರಲ್ಲಿ ಒಬ್ಬನಾದರೂ ನಾನು ನಿಮ್ಮ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣ ಮಾಡಿದ ಆ ಒಳ್ಳೇ ದೇಶವನ್ನು ನೋಡುವದಿಲ್ಲ.

ದ್ವಿತೀಯೋಪದೇಶಕಾಂಡ 6:10

ಇದಲ್ಲದೆ ನಿನ್ನ ದೇವರಾದ ಕರ್ತನು ನಿನ್ನ ಪಿತೃಗಳಾದ ಅಬ್ರಹಾಮ್‌ ಇಸಾಕ್‌ ಯಾಕೋಬರಿಗೆ ಪ್ರಮಾಣಮಾಡಿದ ದೇಶದಲ್ಲಿ ನಿನ್ನನ್ನು ಸೇರಿಸಿ ನೀನು ಕಟ್ಟದ ದೊಡ್ಡದಾದ ಒಳ್ಳೇ ಪಟ್ಟಣಗಳನ್ನೂ

ದ್ವಿತೀಯೋಪದೇಶಕಾಂಡ 6:18

ನಿನಗೆ ಒಳ್ಳೇದಾಗುವ ಹಾಗೆಯೂ ಕರ್ತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ಆ ಒಳ್ಳೇ ದೇಶವನ್ನು ನೀನು ಪ್ರವೇಶಿಸಿ ಸ್ವತಂತ್ರಿಸಿಕೊಂಡು

Interlinear

Choose Theme