ಎಲ್ಲಾ ಜನಗಳಿಗಿಂತಲೂ ನೀನು ಆಶೀರ್ವದಿಸಲ್ಪಟ್ಟವನಾ ಗಿರುವಿ; ನಿಮ್ಮೊಳಗೆ ಸ್ತ್ರೀಯರಲ್ಲಾಗಲಿ ಪುರುಷರ ಲ್ಲಾಗಲಿ ಪಶುಗಳಲ್ಲಾಗಲಿ ಬಂಜೆತನವು ಇರುವದಿಲ್ಲ.
Cross references
ಗರ್ಭಸ್ರಾವವಾಗಲಿ ಬಂಜೆತನವಾಗಲಿ ನಿಮ್ಮ ದೇಶದಲ್ಲಿ ಇರುವದಿಲ್ಲ; ನಿನ್ನ ದಿನಗಳ ಲೆಕ್ಕವನ್ನು ಪೂರ್ತಿಮಾಡುವೆನು.
ನಾನು ನಿಮ್ಮನ್ನು ಲಕ್ಷಿಸಿ ಅಭಿವೃದ್ಧಿಮಾಡಿ ಹೆಚ್ಚಿಸಿ ನಿಮ್ಮ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸುವೆನು.
ಆಗ ದೇವರು ಬಿಳಾಮನಿಗೆ ಹೇಳಿದ್ದೇನಂದರೆನೀನು ಅವರ ಸಂಗಡ ಹೋಗಬೇಡ; ನೀನು ಆ ಜನವನ್ನು ಶಪಿಸಬೇಡ; ಅದು ಆಶೀರ್ವದಿಸಲ್ಪಟ್ಟಿದೆ.
ನಿನ್ನ ಗರ್ಭದ ಫಲಕ್ಕೂ ನಿನ್ನ ಭೂಮಿಯ ಫಲಕ್ಕೂ ಪಶುಗಳ ಫಲಕ್ಕೂ ಪಶುಗಳ ಹಿಂಡಿಗೂ ಕುರಿಗಳ ಮಂದೆಗಳಿಗೂ ಆಶೀರ್ವಾದ.
ಇದಲ್ಲದೆ ನಿನಗೆ ಕೊಡುತ್ತೇನೆಂದು ನಿನ್ನ ಪಿತೃಗಳಿಗೆ ಆಣೆ ಇಟ್ಟ ಕರ್ತನು ಭೂಮಿಯಮೇಲೆ ನಿನ್ನನ್ನು ಸರಕುಗಳಲ್ಲಿಯೂ ಗರ್ಭದ ಫಲದಲ್ಲಿಯೂ ಪಶುಗಳ ಫಲದಲ್ಲಿಯೂ ಭೂಮಿಯ ಫಲದಲ್ಲಿಯೂ ಸಮೃದ್ಧಿ ಹೊಂದುವಂತೆ ಮಾಡುವನು.
ಇದಲ್ಲದೆ ಕರ್ತನು ನಿನ್ನನ್ನು ನಿನ್ನ ಎಲ್ಲಾ ಕೈಕೆಲಸದಲ್ಲಿ, ಗರ್ಭದ ಫಲದಲ್ಲಿ, ಪಶುಗಳ ಫಲದಲ್ಲಿ, ಭೂಮಿಯ ಫಲದಲ್ಲಿ ಒಳ್ಳೇದಕ್ಕೋಸ್ಕರ ಅಭಿವೃದ್ಧಿ ಮಾಡುವನು.
ಇಸ್ರಾಯೇಲೇ, ನೀನು ಸಂತೋಷವುಳ್ಳವನೂ ನಿನ್ನ ಸಹಾಯದ ಗುರಾಣಿಯೂ ನಿನ್ನ ಘನತೆಯ ಕತ್ತಿಯೂ ಆಗಿರುವ ಕರ್ತನಿಂದ ರಕ್ಷಿಸಲ್ಪಟ್ಟ ಓ ಜನವೇ, ನಿನ್ನ ಹಾಗೆ ಯಾರಿದ್ದಾರೆ? ನಿನ್ನ ಶತ್ರುಗಳು ನಿನಗೆ ಸುಳ್ಳುಗಾರರಾಗಿ ಕಂಡುಬರುವರು. ನೀನು ಅವರ ಉನ್ನತವಾದ ಸ್ಥಳಗಳ ಮೇಲೆ ನಡೆದು ಹೋಗುವಿ.
ಆಕಾಶವನ್ನೂ ಭೂಮಿಯನ್ನೂ ಉಂಟುಮಾಡಿದ ಕರ್ತನಿಂದ ನೀವು ಆಶೀರ್ವದಿಸಲ್ಪಟ್ಟವರು.
ಇಗೋ, ಮಕ್ಕಳು ಕರ್ತನಿಂದ ಸಿಕ್ಕಿದ ಸ್ವಾಸ್ಥ್ಯವಾಗಿ ದ್ದಾರೆ; ಗರ್ಭಫಲವು ಆತನ ಬಹುಮಾನವಾಗಿದೆ.
ಆತನು ಯಾಕೋಬರಿಗೆ ತನ್ನ ವಾಕ್ಯವನ್ನೂ ಇಸ್ರಾಯೇಲಿಗೆ ನಿಯಮಗಳನ್ನೂ ನ್ಯಾಯವಿಧಿಗಳನ್ನೂ ತಿಳಿಸುತ್ತಾನೆ.ಯಾವ ಜನಾಂಗಕ್ಕಾದರೂ ಆತನು ಹೀಗೆ ಮಾಡ ಲಿಲ್ಲ; ನ್ಯಾಯವಿಧಿಗಳನ್ನು ಅವರು ತಿಳುಕೊಳ್ಳುವದಿಲ್ಲ. ನೀವು ಕರ್ತನನ್ನು ಸ್ತುತಿಸಿರಿ.