Home Bibles ದ್ವಿತೀಯೋಪದೇಶಕಾಂಡ 7:15 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 7:15 · ಕನ್ನಡ ಬೈಬಲ್

ಕರ್ತನು ಎಲ್ಲಾ ರೋಗಗಳನ್ನು ನಿನ್ನಿಂದ ತೆಗೆದು ಬಿಡುವನು; ನಿನಗೆ ತಿಳಿದಿರುವ ಐಗುಪ್ತದ ಕೆಟ್ಟ ರೋಗಗಳನ್ನೆಲ್ಲಾ ನಿನ್ನ ಮೇಲೆ ಬರಮಾಡದೆ ನಿನ್ನನ್ನು ಹಗೆಮಾಡುವವರೆಲ್ಲರ ಮೇಲೆ ಅವುಗಳನ್ನು ಬರ ಮಾಡುವನು.

Cross references

ನಿರ್ಗಮಕಾಂಡ 9:11

ಇದಲ್ಲದೆ ಮಂತ್ರಗಾರರು ಹುಣ್ಣಿನ ನಿಮಿತ್ತ ಮೋಶೆಯ ಮುಂದೆ ನಿಂತುಕೊಳ್ಳ ಲಾರದೆ ಹೋದರು. ಹುಣ್ಣುಗಳು ಮಂತ್ರಗಾರರ ಲ್ಲಿಯೂ ಐಗುಪ್ತ್ಯರ ಮೇಲೆಲ್ಲಾ ಇದ್ದವು.

ನಿರ್ಗಮಕಾಂಡ 15:26

ಆತನು-- ನೀನು ನಿನ್ನ ದೇವರಾದ ಕರ್ತನ ಸ್ವರಕ್ಕೆ ಶ್ರದ್ಧೆಯಿಂದ ಕಿವಿಗೊಟ್ಟು ಆತನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ ಆತನ ಆಜ್ಞೆಗಳಿಗೆ ಕಿವಿಗೊಟ್ಟು ಆತನ ನಿಯಮ ಗಳನ್ನು ಕೈಕೊಂಡರೆ ಐಗುಪ್ತ್ಯರ ಮೇಲೆ ಬರಮಾಡಿದ ಯಾವ ವ್ಯಾಧಿಯನ್ನೂ ನಿನ್ನ ಮೇಲೆ ಬರಮಾಡುವದಿಲ್ಲ; ನಿನ್ನನ್ನು ಸ್ವಸ್ಥಪಡಿಸುವ ಕರ್ತನು ನಾನೇ ಆಗಿದ್ದೇನೆ ಅಂದನು.ತರುವಾಯ ಅವರು ಹನ್ನೆರಡು ನೀರಿನ ಬಾವಿಗಳೂ ಎಪ್ಪತ್ತು ಖರ್ಜೂರದ ಮರಗಳೂ ಇದ್ದ ಏಲೀಮಿಗೆ ಬಂದರು. ಅವರು ಆ ನೀರುಗಳ ಬಳಿಯಲ್ಲಿ ಇಳುಕೊಂಡರು.

ಲೇವ್ಯಕಾಂಡ 26:3

ನೀವು ನನ್ನ ನಿಯಮಗಳ ಪ್ರಕಾರ ನಡೆದುಕೊಂಡು ನನ್ನ ಆಜ್ಞೆಗಳನ್ನು ಕೈಕೊಂಡು ಅವುಗಳಂತೆ ಮಾಡಿದರೆ

ದ್ವಿತೀಯೋಪದೇಶಕಾಂಡ 28:27

ಕರ್ತನು ನಿನ್ನನ್ನು ಐಗುಪ್ತದ ಹುಣ್ಣುಗಳಿಂದಲೂ ಗಡ್ಡೆವ್ಯಾಧಿಯಿಂದಲೂ ಕಜ್ಜಿಯಿಂದಲೂ ಇಸಬಿನಿಂದ ಲೂ ನೀನು ವಾಸಿಯಾಗಕೂಡದ ಹಾಗೆ ಹೊಡೆ ಯುವನು.

ದ್ವಿತೀಯೋಪದೇಶಕಾಂಡ 28:60

ಇದಲ್ಲದೆ ನೀನು ಹೆದರಿಕೊಂಡ ಐಗುಪ್ತದ ರೋಗ ಗಳನ್ನೆಲ್ಲಾ ಆತನು ತಿರಿಗಿ ನಿನ್ನ ಮೇಲೆ ಬರಮಾಡು ವನು; ಅವು ನಿನ್ನನ್ನು ಅಂಟಿಕೊಳ್ಳುವವು.

ಕೀರ್ತನೆಗಳು 91:10

ಕೇಡು ನಿನ್ನನ್ನು ಮುಟ್ಟದು; ಯಾವ ವ್ಯಾಧಿಯೂ ನಿನ್ನ ನಿವಾಸಕ್ಕೆ ಸವಿಾಪಿಸದು.

ಕೀರ್ತನೆಗಳು 105:36

ಅವರ ದೇಶದಲ್ಲಿಯ ಎಲ್ಲಾ ಚೊಚ್ಚಲುಗಳನ್ನೂ ಬಲವುಳ್ಳ ಎಲ್ಲಾ ಪ್ರಮುಖರನ್ನೂ ಹೊಡೆದನು.

Interlinear

Choose Theme