Home Bibles ☰ Books ದ್ವಿತೀಯೋಪದೇಶಕಾಂಡ 8:1 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 8:1 · ಕನ್ನಡ ಬೈಬಲ್

ನೀವು ಬದುಕಿ ಅಭಿವೃದ್ಧಿಯಾಗಿ ಕರ್ತನು ನಿಮ್ಮ ಪಿತೃಗಳಿಗೆ ಪ್ರಮಾಣಮಾಡಿದ ದೇಶಕ್ಕೆ ಹೋಗಿ ಅದನ್ನು ಸ್ವತಂತ್ರಿಸಿಕೊಳ್ಳುವ ಹಾಗೆ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಆಜ್ಞೆಗಳನ್ನೆಲ್ಲಾ ಲಕ್ಷ್ಯವಿಟ್ಟು ಕೈಕೊಳ್ಳಬೇಕು.

Cross references

ದ್ವಿತೀಯೋಪದೇಶಕಾಂಡ 1:8

ಇಗೋ, ಆ ದೇಶವನ್ನು ನಿಮ್ಮ ಮುಂದೆ ಇಟ್ಟಿದ್ದೇನೆ; ಹೋಗಿ ಕರ್ತನು ನಿಮ್ಮ ಪಿತೃಗಳಾದ ಅಬ್ರಹಾಮ ಇಸಾಕ ಯಾಕೋಬರಿಗೂ ಅವರ ತರುವಾಯ ಹುಟ್ಟುವ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣಮಾಡಿದ ದೇಶವನ್ನು ಸ್ವತಂತ್ರಿಸಿಕೊಳ್ಳಿರಿ ಎಂದು ಹೇಳಿದನು.

ದ್ವಿತೀಯೋಪದೇಶಕಾಂಡ 4:1

ಹೀಗಿರುವದರಿಂದ ಈಗ ಇಸ್ರಾಯೇಲೇ, ನೀವು ಬದುಕಿ ನಿಮ್ಮ ಪಿತೃಗಳ ದೇವರಾದ ಕರ್ತನು ನಿಮಗೆ ಕೊಡುವ ದೇಶವನ್ನು ಪ್ರವೇಶಿಸಿ ಸ್ವತಂತ್ರಿಸಿಕೊಳ್ಳುವ ಹಾಗೆ ನಾನು ನಿಮಗೆ ಬೋಧಿಸುವ ನಿಯಮಗಳನ್ನೂ ನ್ಯಾಯಗಳನ್ನೂ ಕೇಳಿ ಅವುಗಳನ್ನು ಮಾಡಿರಿ.

ದ್ವಿತೀಯೋಪದೇಶಕಾಂಡ 5:32

ಹೀಗಿರುವದರಿಂದ ನಿಮ್ಮ ದೇವರಾದ ಕರ್ತನು ನಿಮಗೆ ಆಜ್ಞಾಪಿಸಿದಂತೆ ಕೈಕೊಂಡು ನಡೆಯಬೇಕು; ಎಡಕ್ಕಾದರೂ ಬಲಕ್ಕಾದರೂ ತಿರುಗಬೇಡಿರಿ.ನೀವು ಬದುಕುವ ಹಾಗೆಯೂ ನಿಮಗೆ ಒಳ್ಳೆಯದಾಗುವ ಹಾಗೆಯೂ ನೀವು ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ನಿಮ್ಮ ದಿವಸಗಳು ಬಹಳವಾಗುವ ಹಾಗೆಯೂ ನಿಮ್ಮ ದೇವರಾದ ಕರ್ತನು ನಿಮಗೆ ಆಜ್ಞಾಪಿಸಿದ ಮಾರ್ಗ ಗಳಲ್ಲಿ ನಡಕೊಳ್ಳಬೇಕು.

ದ್ವಿತೀಯೋಪದೇಶಕಾಂಡ 5:33

ನೀವು ಬದುಕುವ ಹಾಗೆಯೂ ನಿಮಗೆ ಒಳ್ಳೆಯದಾಗುವ ಹಾಗೆಯೂ ನೀವು ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ನಿಮ್ಮ ದಿವಸಗಳು ಬಹಳವಾಗುವ ಹಾಗೆಯೂ ನಿಮ್ಮ ದೇವರಾದ ಕರ್ತನು ನಿಮಗೆ ಆಜ್ಞಾಪಿಸಿದ ಮಾರ್ಗ ಗಳಲ್ಲಿ ನಡಕೊಳ್ಳಬೇಕು.

ದ್ವಿತೀಯೋಪದೇಶಕಾಂಡ 8:18

ನಿನ್ನ ದೇವ ರಾದ ಕರ್ತನನ್ನು ಜ್ಞಾಪಕಮಾಡಿಕೊಳ್ಳಬೇಕು; ಈ ಹೊತ್ತು ಇರುವಂತೆ ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ತನ್ನ ಒಡಂಬಡಿಕೆಯನ್ನು ಸ್ಥಾಪಿಸುವ ಹಾಗೆ ಆಸ್ತಿಯನ್ನು ಸಂಪಾದಿಸುವ ಬಲವನ್ನು ನಿನಗೆ ಕೊಡುವಾತನು ಆತನೇ.

ಕೀರ್ತನೆಗಳು 119:4

ನಿನ್ನ ಕಟ್ಟಳೆಗಳನ್ನು ಜಾಗ್ರತೆಯಾಗಿ ಕೈಕೊಳ್ಳ ಬೇಕೆಂದು ನೀನು ಆಜ್ಞಾಪಿಸಿದ್ದೀ.

1 ತೆಸಲೋನಿಕದವರಿಗೆ 4:1

ಸಹೋದರರೇ, ನೀವು ಹೇಗೆ ನಡೆದು ಕೊಂಡು ದೇವರನ್ನು ಮೆಚ್ಚಿಸಬೇಕೆಂದು ನಮ್ಮಿಂದ ಕೇಳಿರುವ ಪ್ರಕಾರವೇ ನೀವು ಹೆಚ್ಚೆಚ್ಚಾಗಿ ಅಭಿವೃದ್ಧಿಯಾಗಬೇಕೆಂದು ನಾವು ಕರ್ತನಾದ ಯೇಸು ವಿನ ಮೂಲಕ ನಿಮ್ಮನ್ನು ಬೇಡಿಕೊಂಡು ಎಚ್ಚರಿಸುತ್ತೇವೆ.

Interlinear

Choose Theme