ನಿನ್ನ ಹೃದಯವು ಉಬ್ಬಿಕೊಳ್ಳದ ಹಾಗೆಯೂ ನಿನ್ನನ್ನು ಐಗುಪ್ತದೇಶದ ದಾಸತ್ವದ ಮನೆಯೊಳಗಿಂದ ಹೊರಗೆ ಬರಮಾಡಿದಂಥ,
Cross references
ಆಗ ಮೋಶೆಯು ಜನರಿಗೆ--ನೀವು ಐಗುಪ್ತದ ದಾಸತ್ವದ ಮನೆಯಿಂದ ಹೊರಬಂದ ಈ ದಿನವನ್ನು ಜ್ಞಾಪಕಮಾಡಿಕೊಳ್ಳಿರಿ. ಯಾಕಂದರೆ ಕರ್ತನು ತನ್ನ ಬಲವಾದ ಕೈಯಿಂದ ನಿಮ್ಮನ್ನು ಅಲ್ಲಿಂದ ಹೊರಗೆ ಬರಮಾಡಿದ್ದಾನೆ. ಹೀಗಿರುವದರಿಂದ ಅಂದು ನೀವು ಹುಳಿ ರೊಟ್ಟಿಯನ್ನು ತಿನ್ನಬಾರದು.
ನಿನ್ನನ್ನು ಐಗುಪ್ತದೇಶದೊಳಗಿಂದ ಅಂದರೆ ದಾಸ ತ್ವದ ಮನೆಯೊಳಗಿಂದ ಹೊರಗೆ ಬರಮಾಡಿದ ನಿನ್ನ ದೇವರಾದ ಕರ್ತನು ನಾನೇ.
ನೀನು ತುಂಬದಿದ್ದ ಎಲ್ಲಾ ಒಳ್ಳೆಯವುಗಳು ತುಂಬಿರುವ ಮನೆ ಗಳನ್ನೂ ಅಗೆಯದಿರುವ ಬಾವಿಗಳನ್ನೂ ನೆಡದ ದ್ರಾಕ್ಷೇ ತೋಟಗಳನ್ನೂ ಇಪ್ಪೇತೋಟಗಳನ್ನೂ ನಿನಗೆ ಕೊಡ ಲಾಗಿ ನೀನು ತಿಂದು ತೃಪ್ತಿಯಾದಾಗ
ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಆತನ ಆಜ್ಞೆ ನ್ಯಾಯ ನಿಯಮಗಳನ್ನು ಕಾಪಾಡದವರೂ ನಿನ್ನ ದೇವರಾದ ಕರ್ತನನ್ನು ಮರೆಯದವರೂ ಆಗಬೇಡಿರಿ.
ನಿನ್ನ ತಾಯಿಯ ಮಗನಾದ ನಿನ್ನ ಸಹೋದರ ನಾಗಲಿ ಮಗನಾಗಲಿ ಮಗಳಾಗಲಿ ಮಗ್ಗುಲಲ್ಲಿರುವ ಹೆಂಡತಿಯಾಗಲಿ ನಿನ್ನ ಪ್ರಾಣದಂತೆ ನಿನಗಿರುವ ಸ್ನೇಹಿತ ನಾಗಲಿ ನೀನೂ ನಿನ್ನ ಪಿತೃಗಳೂ ತಿಳಿಯದ ಬೇರೆ ದೇವರುಗಳನ್ನು
ಅವನ ಹೃದಯವು ಅವನ ಸಹೋದರರ ಮೇಲೆ ಹೆಚ್ಚಿಸಿಕೊಳ್ಳದ ಹಾಗೆಯೂ ಅವನು ಆಜ್ಞೆಯನ್ನು ಬಿಟ್ಟು ಎಡಕ್ಕಾದರೂ ಬಲಕ್ಕಾದರೂ ತೊಲಗದ ಹಾಗೆಯೂ ಅವನಿಗೂ ಅವನ ಮಕ್ಕಳಿಗೂ ಇಸ್ರಾಯೇಲಿನ ಮಧ್ಯದಲ್ಲಿ ಅವನ ರಾಜ್ಯದಲ್ಲಿ ದಿನಗಳು ಹೆಚ್ಚುವ ಹಾಗೆಯೂ ಅದನ್ನು ತನ್ನ ಜೀವಿತದ ದಿನಗಳಲ್ಲೆಲ್ಲಾ ಓದಬೇಕು.
ಇಸ್ರಾಯೇಲ್ ಮಕ್ಕಳು ಕರ್ತನ ಮುಂದೆ ಕೆಟ್ಟತನ ಮಾಡಿ ತಮ್ಮ ದೇವರಾದ ಕರ್ತನನ್ನು ಮರೆತು ಬಾಳ ನನ್ನೂ ತೋಪುಗಳನ್ನೂ ಸೇವಿಸಿದರು.
ನೀನು ಎದೋಮ್ಯ ರನ್ನು ಹೊಡೆದೇ ಹೊಡೆದದ್ದರಿಂದ ನಿನ್ನ ಹೃದಯವು ನಿನ್ನನ್ನು ಹೆಚ್ಚಿಸುವಂತೆ ಮಾಡಿತು. ಹೆಚ್ಚಳಪಡು; ಮನೆಯಲ್ಲಿ ಕಾದಿರು; ನಿನ್ನ ಕೇಡಿಗಾಗಿ ನೀನು ಯಾಕೆ ಜಗಳವಾಡಬೇಕು? ನೀನೂ ನಿನ್ನ ಸಂಗಡ ಯೆಹೂ ದವೂ ಬಿದ್ದು ಹೋಗುವಿರಲ್ಲಾ ಅಂದನು. ಆದರೆ ಅಮಚ್ಯನು ಕೇಳದೆ ಹೋದನು.
ನಾನು ನಿಮ್ಮ ಸಂಗಡ ಮಾಡಿದ ಒಡಂಬಡಿ ಕೆಯನ್ನು ನೀವು ಮರೆಯದೆ ಇತರ ದೇವರುಗಳಿಗೆ ಭಯಪಡದೆ
ಆದರೆ ಅವನು ಬಲ ಹೊಂದಿದ ಮೇಲೆ ಅವನ ಹೃದಯವು ನಾಶನಕ್ಕೆ ಎತ್ತಲ್ಪಟ್ಟಿತು. ಏನಂದರೆ, ಅವನು ಧೂಪಪೀಠದ ಮೇಲೆ ಧೂಪ ಸುಡುವದಕ್ಕೆ ಕರ್ತನ ಆಲಯದಲ್ಲಿ ಪ್ರವೇಶಿಸಿ ತನ್ನ ದೇವರಾದ ಕರ್ತ ನಿಗೆ ವಿರೋಧವಾಗಿ ಅಪರಾಧ ಮಾಡಿದನು.
ಆದರೆ ಹಿಜ್ಕೀ ಯನು ತನಗೆ ಆದ ಉಪಕಾರಕ್ಕೆ ತಕ್ಕಂತೆ ನಡೆಯದೆ ಇದ್ದನು; ಅವನ ಹೃದಯದಲ್ಲಿ ಅಹಂಕಾರ ತುಂಬಿತ್ತು; ಆದದರಿಂದ ಅವನ ಮೇಲೆಯೂ ಯೆಹೂದ ಯೆರೂ ಸಲೇಮಿನ ಮೇಲೆಯೂ ರೌದ್ರ ಉಂಟಾಯಿತು.
ತಮ್ಮ ರಕ್ಷಕನಾಗಿ ಐಗುಪ್ತದೇಶದಲ್ಲಿ ದೊಡ್ಡ ಕೆಲಸಗಳನ್ನೂ
ನಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿ ನಮ್ಮನ್ನು ಅರಣ್ಯದಲ್ಲಿ ಕಾಡೂ ಕುಣಿಗಳೂ ಉಳ್ಳ ದೇಶದಲ್ಲಿ, ಕ್ಷಾಮದ ಮತ್ತು ಮರಣದ ನೆರಳಾದಂಥ ದೇಶದಲ್ಲಿ, ಒಬ್ಬರೂ ಹಾದು ಹೋಗದೆ ಯಾರೂ ವಾಸಮಾಡದೆ ಇರುವಲ್ಲಿ ನಡಿಸಿದ ಕರ್ತನು ಎಲ್ಲಿ ಎಂದು ಅವರು ಅಂದುಕೊಳ್ಳಲಿಲ್ಲ.
ಓ ಸಂತತಿಯೇ, ನೀವು ಕರ್ತನ ವಾಕ್ಯವನ್ನು ನೋಡಿರಿ; ನಾನು ಇಸ್ರಾಯೇಲಿನ ಅರಣ್ಯವಾ ದೆನೋ? ಕತ್ತಲೆಯ ದೇಶವಾದೆನೋ? ಯಾತಕ್ಕೆ ನನ್ನ ಜನರು--ನಾವು ಪ್ರಭುಗಳು, ಇನ್ನು ಮೇಲೆ ನಿನ್ನ ಬಳಿಗೆ ಎಂದೂ ಬರುವದಿಲ್ಲ ಎಂದು ಹೇಳುತ್ತಾರೆ.
ಆ ಸಮೂಹವನ್ನು ಅವನು ತೆಗೆದು ಹಾಕಿದ ಮೇಲೆ ಅವನ ಹೃದಯವು ಹೆಚ್ಚಳಪಡುವದು; ಹೌದು, ಸಹಸ್ರಾರು ಸೈನಿಕರನ್ನು ಬೀಳಿಸಿದ್ದರೂ ಪ್ರಬಲವಾಗ ಲಾರನು.
ನಿನಗೂ ಇತರರಿಗೂ ತಾರತಮ್ಯ ಮಾಡಿ ದವರು ಯಾರು? ನೀನು ಹೊಂದದೆ ಇರುವಂಥದ್ದು ನಿನ್ನಲ್ಲಿ ಯಾವದು ಇದೆ? ಹೊಂದಿದ ಮೇಲೆ ಹೊಂದದವನಂತೆ ನೀನು ಯಾಕೆ ಹಿಗ್ಗಿಕೊಳ್ಳುತ್ತೀ?