Home Bibles ದ್ವಿತೀಯೋಪದೇಶಕಾಂಡ 8:6 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 8:6 · ಕನ್ನಡ ಬೈಬಲ್

ಹೀಗಿರುವದರಿಂದ ನಿನ್ನ ದೇವರಾದ ಕರ್ತನ ಆಜ್ಞೆಗಳನ್ನು ಕೈಕೊಂಡು ಆತನ ಮಾರ್ಗಗಳಲ್ಲಿ ನಡೆದುಕೊಂಡು ಆತನಿಗೆ ಭಯಪಡಬೇಕು.

Cross references

ನಿರ್ಗಮಕಾಂಡ 18:20

ನೇಮಕಗಳನ್ನೂ ನ್ಯಾಯ ಪ್ರಮಾಣಗಳನ್ನೂ ಅವರಿಗೆ ಕಲಿಸಿ, ಅವರು ಹೋಗ ತಕ್ಕ ಮಾರ್ಗವನ್ನೂ ಅವರು ಮಾಡತಕ್ಕ ಕೆಲಸವನ್ನೂ ಅವರಿಗೆ ತೋರಿಸಬೇಕು.

ದ್ವಿತೀಯೋಪದೇಶಕಾಂಡ 5:29

ಅವರು ನನಗೆ ಭಯಪಟ್ಟು ನನ್ನ ಆಜ್ಞೆಗಳನ್ನೆಲ್ಲಾ ಎಂದೆಂದಿಗೂ ಕೈಕೊಳ್ಳುವಂಥ ಹೃದಯವು ಅವರಲ್ಲಿದ್ದರೆ ಎಷ್ಟೋ ಒಳ್ಳೇದು; ಆಗ ಅವರಿಗೂ ಅವರ ಮಕ್ಕಳಿಗೂ ಎಂದೆಂ ದಿಗೂ ಒಳ್ಳೆಯದಾಗುವದು.

ದ್ವಿತೀಯೋಪದೇಶಕಾಂಡ 5:33

ನೀವು ಬದುಕುವ ಹಾಗೆಯೂ ನಿಮಗೆ ಒಳ್ಳೆಯದಾಗುವ ಹಾಗೆಯೂ ನೀವು ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ನಿಮ್ಮ ದಿವಸಗಳು ಬಹಳವಾಗುವ ಹಾಗೆಯೂ ನಿಮ್ಮ ದೇವರಾದ ಕರ್ತನು ನಿಮಗೆ ಆಜ್ಞಾಪಿಸಿದ ಮಾರ್ಗ ಗಳಲ್ಲಿ ನಡಕೊಳ್ಳಬೇಕು.

1 ಸಮುವೇಲ 12:24

ಆದರೆ ನೀವು ಕರ್ತನಿಗೆ ಭಯ ಪಟ್ಟು ನಿಮ್ಮ ಪೂರ್ಣ ಹೃದಯದಿಂದ ಸತ್ಯದಲ್ಲಿ ಆತ ನನ್ನು ಸೇವಿಸಿರಿ. ಆತನು ನಿಮಗೋಸ್ಕರ ಎಂಥ ಮಹತ್ತಾದ ಕಾರ್ಯಗಳನ್ನು ಮಾಡಿದನೆಂದು ಆಲೋ ಚಿಸಿರಿ.ಆದರೆ ನೀವು ಕೆಟ್ಟತನವನ್ನು ಇನ್ನೂ ಮಾಡಿದರೆ ನೀವೂ ನಿಮ್ಮ ಅರಸನೂ ನಾಶವಾಗುವಿರಿ ಅಂದನು.

2 ದಿನವೃತ್ತಾಂತ 6:31

ನೀನು ಅಕಾಶದಿಂದ ಅಂದರೆ ನೀನು ವಾಸಮಾಡುವ ಸ್ಥಳದಿಂದ ಕೇಳಿ ಮನ್ನಿಸಿ ಮನುಷ್ಯನ ಹೃದಯವನ್ನು ತಿಳಿಯುವ ನೀನು ಪ್ರತಿ ಮನುಷ್ಯನಿಗೂ ಅವನವನ ಮಾರ್ಗದ ಪ್ರಕಾರಕೊಡು; ಯಾಕಂದರೆ ನೀನೊಬ್ಬನೇ ಸಮಸ್ತ ಮನುಷ್ಯ ಮಕ್ಕಳ ಹೃದಯಗಳನ್ನು ತಿಳಿದವನಾಗಿದ್ದೀ.

ಕೀರ್ತನೆಗಳು 128:1

ಕರ್ತನಿಗೆ ಭಯಪಟ್ಟು ಆತನ ಮಾರ್ಗಗಳಲ್ಲಿ ನಡೆದುಕೊಳ್ಳುವ ಪ್ರತಿಯೊಬ್ಬನು ಧನ್ಯನು.

ಲೂಕ 1:6

ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ ನ್ಯಾಯವಿಧಿಗಳನ್ನು ತಪ್ಪಿಲ್ಲದೆ ಕೈಕೊಂಡು ದೇವರ ಮುಂದೆ ನೀತಿವಂತರಾಗಿದ್ದರು.

Interlinear

Choose Theme