Home Bibles ದ್ವಿತೀಯೋಪದೇಶಕಾಂಡ 9:15 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 9:15 · ಕನ್ನಡ ಬೈಬಲ್

ಆಗ ನಾನು ತಿರುಗಿಕೊಂಡು ಬೆಟ್ಟದಿಂದ ಇಳಿದೆನು; ಆ ಬೆಟ್ಟವು ಬೆಂಕಿಯಿಂದ ಉರಿಯುತ್ತಿತ್ತು; ಒಡಂಬಡಿ ಕೆಯ ಎರಡು ಹಲಗೆಗಳು ನನ್ನ ಎರಡು ಕೈಗಳಲ್ಲಿ ಇದ್ದವು.

Cross references

ನಿರ್ಗಮಕಾಂಡ 9:23

ಮೋಶೆಯು ಆಕಾಶದ ಕಡೆಗೆ ಕೋಲನ್ನು ಚಾಚಿ ದನು. ಆಗ ಕರ್ತನು ಗುಡುಗುಗಳನ್ನು ಆನೆಕಲ್ಲಿನ ಮಳೆಯನ್ನು ಸುರಿಸಿದನು. ಅಗ್ನಿಯು ಭೂಮಿಗೆ ಇಳಿದು ಬಂತು. ಹೀಗೆ ಕರ್ತನು ಐಗುಪ್ತದೇಶದ ಮೇಲೆ ಆನೆಕಲ್ಲಿನ ಮಳೆಯನ್ನು ಸುರಿಸಿದನು.

ನಿರ್ಗಮಕಾಂಡ 19:18

ಕರ್ತನು ಅಗ್ನಿಯೊಳಗೆ ಸೀನಾಯಿ ಬೆಟ್ಟದ ಮೇಲೆ ಇಳಿದದ್ದರಿಂದ ಆ ಬೆಟ್ಟದಲ್ಲೆಲ್ಲಾ ಹೊಗೆ ಹಾಯುತ್ತಿತ್ತು. ಅದರ ಹೊಗೆಯು ಆವಿಗೆಯ ಹೊಗೆ ಯಂತೆ ಏರಿ ಬರುತ್ತಾ ಇತ್ತು. ಬೆಟ್ಟವೆಲ್ಲಾ ಬಹಳವಾಗಿ ಕಂಪಿಸಿತು.

ನಿರ್ಗಮಕಾಂಡ 32:14

ಆಗ ಕರ್ತನು ತನ್ನ ಜನರಿಗೆ ಮಾಡುತ್ತೇನೆಂದು ಹೇಳಿದ ಕೇಡಿನ ವಿಷಯದಲ್ಲಿ ಮನಸ್ಸನ್ನು ಬದಲಾಯಿಸಿ ಕೊಂಡನು.

ದ್ವಿತೀಯೋಪದೇಶಕಾಂಡ 4:11

ಆಗ ನೀವು ಹತ್ತಿರ ಬಂದು ಬೆಟ್ಟದ ಕೆಳಗೆ ನಿಂತಿರಿ; ಆ ಬೆಟ್ಟವು ಕತ್ತಲೆಯಾ ಗಿದ್ದು ಮೇಘಗಳೂ ಗಾಢಾಂಧಕಾರವೂ ಉಂಟಾಗಿ ಆಕಾಶ ಮಧ್ಯದ ವರೆಗೆ ಬೆಂಕಿಯಿಂದ ಉರಿಯು ತ್ತಿತ್ತು.

ದ್ವಿತೀಯೋಪದೇಶಕಾಂಡ 5:23

(ಆ ಬೆಟ್ಟವು ಬೆಂಕಿಯಿಂದ ಉರಿಯುತ್ತಿರಲಾಗಿ ನೀವು ಕತ್ತಲೆಯಿಂದ ಆ ಶಬ್ದವನ್ನು ಕೇಳಿ ನಿಮ್ಮ ಗೋತ್ರ ಗಳ ಮುಖ್ಯಸ್ಥರೂ ನಿಮ್ಮ ಹಿರಿಯರೂ ನನ್ನ ಬಳಿಗೆ ಬಂದು ನನಗೆ)

ಹೆಬ್ರಿಯರಿಗೆ 12:18

ಮುಟ್ಟಬಹುದಾದ ಮತ್ತು ಬೆಂಕಿ ಹತ್ತಿದಂಥ ಬೆಟ್ಟಕ್ಕೂ ಮೊಬ್ಬಿಗೂ ಕತ್ತಲೆಗೂ ಬಿರುಗಾಳಿಗೂ

Interlinear

Choose Theme