ಆ ಮೇಲೆ ನೀವು ಮಾಡಿದ ಎಲ್ಲಾ ಪಾಪಗಳ ನಿಮಿತ್ತವೂ ನೀವು ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನುಮಾಡಿ ಆತನಿಗೆ ಕೋಪವನ್ನೆಬ್ಬಿಸಿದ ನಿಮಿತ್ತವೂ ಮುಂಚಿನಂತೆ ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ರೊಟ್ಟಿ ತಿನ್ನದೆ, ನೀರು ಕುಡಿಯದೆ, ಕರ್ತನ ಮುಂದೆ ನಾನು ಬಿದ್ದಿದ್ದೆನು.
Cross references
ಹೀಗಿರುವದರಿಂದ ನನ್ನ ಕೋಪವು ಅವರ ಮೇಲೆ ಉರಿದು ಅವರನ್ನು ದಹಿಸಿ ಬಿಡುವಂತೆ ನನ್ನನ್ನು ಬಿಡು. ತರುವಾಯ ನಾನು ನಿನ್ನನ್ನು ದೊಡ್ಡ ಜನಾಂಗವಾಗುವಂತೆ ಮಾಡುವೆನು ಅಂದನು.
ಮೋಶೆಯು ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ರೊಟ್ಟಿಯನ್ನು ತಿನ್ನದೆ ನೀರನ್ನು ಕುಡಿಯದೆ ಅಲ್ಲಿ ಕರ್ತನ ಸಂಗಡ ಇದ್ದನು. ಆತನು ಒಡಂಬಡಿಕೆಯ ವಾಕ್ಯಗಳಾದ ಹತ್ತು ಆಜ್ಞೆಗಳನ್ನು ಹಲಗೆಗಳ ಮೇಲೆ ಬರೆದನು.
ಆ ಕಲ್ಲಿನ ಹಲಗೆಗಳನ್ನು ಅಂದರೆ ಕರ್ತನು ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯ ಹಲಗೆಗಳನ್ನು ತಕ್ಕೊಳ್ಳುವದಕ್ಕೆ ನಾನು ಬೆಟ್ಟದ ಮೇಲೆ ಏರಿದಾಗ ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ಬೆಟ್ಟದಲ್ಲಿದ್ದೆನು.
ಇದಲ್ಲದೆ ನಾನು ಮುಂಚಿನಂತೆ ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ಬೆಟ್ಟದಲ್ಲಿ ಇದ್ದೆನು. ಕರ್ತನು ಆ ಕಾಲದಲ್ಲಿ ಸಹ ನನ್ನ ಪ್ರಾರ್ಥನೆಯನ್ನು ಕೇಳಿ ನಿನ್ನನ್ನು ನಾಶಮಾಡುವದಕ್ಕೆ ಕರ್ತನು ಇಷ್ಟಪಡಲಿಲ್ಲ.
ಕರ್ತನು--ಊರೀಯನ ಹೆಂಡತಿಯು ದಾವೀದ ನಿಗೆ ಹೆತ್ತ ಕೂಸನ್ನು ಹೊಡೆದನು. ಅದು ಬಹಳ ಅಸ್ವಸ್ಥವಾಯಿತು. ದಾವೀದನು ಕೂಸಿಗೋಸ್ಕರ ದೇವ ರನ್ನು ಬೇಡಿಕೊಂಡನು. ಇದಲ್ಲದೆ ದಾವೀದನು ಉಪ ವಾಸಮಾಡಿ ಒಳಗೆ ಹೋಗಿ ರಾತ್ರಿಯೆಲ್ಲಾ ನೆಲದ ಮೇಲೆ ಬಿದ್ದುಕೊಂಡಿದ್ದನು.
ಎಜ್ರನು ದೇವರ ಆಲಯದ ಮುಂದಿ ನಿಂದ ಎದ್ದು ಎಲ್ಯಾಷೀಬಿನ ಮಗನಾದ ಯೆಹೋಹಾ ನಾನನ ಕೊಠಡಿಯಲ್ಲಿ ಪ್ರವೇಶಿಸಿ ಅಲ್ಲಿಗೆ ಬಂದಾಗ ರೊಟ್ಟಿಯನ್ನು ತಿನ್ನದೆ ನೀರನ್ನು ಕುಡಿಯದೆ ಇದ್ದನು; ಯಾಕಂದರೆ ಸೆರೆಯಾಗಿ ಒಯ್ಯಲ್ಪಟ್ಟವರ ಅಕೃತ್ಯಕ್ಕೋಸ್ಕರ ದುಃಖಿಸಿದನು.
ಆದದರಿಂದ ಆತನು ಅವರನ್ನು ನಾಶಮಾಡುತ್ತೇನೆಂದು ಹೇಳಿದನು. ಆದರೆ ಆತನು ಆದುಕೊಂಡ ಮೋಶೆಯು ಆತನ ಕೋಪ ವನ್ನು ತಿರುಗಿಸುವ ಹಾಗೆ ಆಪತ್ತಿನಲ್ಲಿ ಆತನ ಮುಂದೆ ನಿಂತುಕೊಂಡನು.