Home Bibles ದ್ವಿತೀಯೋಪದೇಶಕಾಂಡ 9:23 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 9:23 · ಕನ್ನಡ ಬೈಬಲ್

ಇದಲ್ಲದೆ ಕರ್ತನು ನಿಮ್ಮನ್ನು ಕಾದೇಶ್‌ ಬರ್ನೇಯದಿಂದ ಕಳುಹಿಸುವಾಗ--ನೀವು ಹೋಗಿ ನಾನು ನಿಮಗೆ ಕೊಡುವ ದೇಶವನ್ನು ಸ್ವಾಧೀನಮಾಡಿ ಕೊಳ್ಳಿರಿ ಎಂದು ಹೇಳಿದಾಗ ನೀವು ನಿಮ್ಮ ದೇವರಾದ ಕರ್ತನ ಅಪ್ಪಣೆಗೆ ವಿರೋಧವಾಗಿ ತಿರುಗಿಬಿದ್ದು ಆತನನ್ನು ನಂಬಲಿಲ್ಲ, ಆತನ ಮಾತನ್ನು ಕೇಳಲಿಲ್ಲ.

Cross references

ಅಂಕೆಗಳ ಪುಸ್ತಕ 13:1

ಕರ್ತನು ಮೋಶೆಯ ಸಂಗಡ ಮಾತನಾಡಿ

ಅಂಕೆಗಳ ಪುಸ್ತಕ 14:1

ಆಗ ಸಭೆಯವರೆಲ್ಲಾ ತಮ್ಮ ಸ್ವರವೆತ್ತಿ ಕೂಗುವವರಾಗಿ ಆ ರಾತ್ರಿಯೆಲ್ಲಾ ಅತ್ತರು.

ಅಂಕೆಗಳ ಪುಸ್ತಕ 14:2

ಇಸ್ರಾಯೇಲ್‌ ಮಕ್ಕಳೆಲ್ಲರೂ ಮೋಶೆಗೂ ಆರೋನ ರಿಗೂ ವಿರೋಧವಾಗಿ ಗುಣುಗುಟ್ಟಿದರು. ಸಭೆಯಲ್ಲಾ ಅವರಿಗೆ--ನಾವು ಐಗುಪ್ತ ದೇಶದಲ್ಲಿ ಸತ್ತಿದ್ದರೆ ಇಲ್ಲವೆ ಈ ಅರಣ್ಯದಲ್ಲಿ ಸತ್ತರೆ ನಮಗೆ ಒಳ್ಳೇದಾಗಿತ್ತು.

ಅಂಕೆಗಳ ಪುಸ್ತಕ 14:9

ನೀವಾ ದರೋ ಕರ್ತನಿಗೆ ವಿರೋಧವಾಗಿ ಬೀಳಬೇಡಿರಿ, ಆ ದೇಶದ ಜನರಿಗೆ ಭಯಪಡಬೇಡಿರಿ, ಅವರು ನಮಗೆ ರೊಟ್ಟಿಯಾಗುವರು; ಅವರಿಗಿದ್ದ ಆಶ್ರಯವು ಅವರ ಬಳಿಯಿಂದ ಹೋಯಿತು; ಕರ್ತನು ನಮ್ಮ ಸಂಗಡ ಇದ್ದಾನೆ; ಅವರಿಗೆ ಭಯಪಡಬೇಡಿರಿ ಅಂದನು.

ಅಂಕೆಗಳ ಪುಸ್ತಕ 14:10

ಸಭೆಯವರೆಲ್ಲರೂ ಅವರನ್ನು ಕಲ್ಲೆಸೆಯಬೇಕೆಂದಿ ದ್ದರು. ಆಗ ಕರ್ತನ ಮಹಿಮೆಯು ಸಭೆಯ ಗುಡಾರ ದಲ್ಲಿ ಇಸ್ರಾಯೇಲ್‌ ಮಕ್ಕಳಿಗೆಲ್ಲಾ ಪ್ರತ್ಯಕ್ಷವಾಯಿತು.

ದ್ವಿತೀಯೋಪದೇಶಕಾಂಡ 1:2

(ಹೋರೇಬಿನಿಂದ ಕಾದೇಶ್‌ ಬರ್ನೇಯಕ್ಕೆ ಸೇಯಾರ್‌ ಬೆಟ್ಟದ ಮಾರ್ಗವಾಗಿ ಹನ್ನೊಂದು ದಿವಸ ಪ್ರಯಾಣ).

ದ್ವಿತೀಯೋಪದೇಶಕಾಂಡ 1:19

ಆಗ ನೀವು ಹೋರೇಬಿನಿಂದ ಹೊರಟು ನಮ್ಮ ದೇವರಾದ ಕರ್ತನು ನಮಗೆ ಆಜ್ಞಾಪಿಸಿದ ಪ್ರಕಾರ ನೀವು ಅಮೋರಿಯರ ಬೆಟ್ಟದ ಮಾರ್ಗದಲ್ಲಿ ನೋಡಿದ ಆ ದೊಡ್ಡ ಭಯಂಕರವಾದ ಅರಣ್ಯವನ್ನೆಲ್ಲಾ ದಾಟಿ ಕಾದೇಶ್‌ಬರ್ನೇಯಕ್ಕೆ ಬಂದೆವು.

ಕೀರ್ತನೆಗಳು 78:22

ಅವರು ದೇವರಲ್ಲಿ ನಂಬಿಕೆ ಇಡಲಿಲ್ಲ; ಆತನ ರಕ್ಷಣೆಯಲ್ಲಿ ಭರವಸವಿಡಲಿಲ್ಲ.

ಕೀರ್ತನೆಗಳು 106:24

ಹೌದು, ಅವರು, ಮನೋಹರವಾದ ದೇಶ ವನ್ನು ಅಸಹ್ಯಿಸಿಬಿಟ್ಟು ಆತನ ಮಾತನ್ನು ನಂಬದೆ ಹೋದರು.

ಯೆಶಾಯ 63:10

ಆದರೆ ಅವರು ತಿರುಗಿ ಬಿದ್ದು, ಆತನ ಪರಿಶುದ್ಧಾತ್ಮನನ್ನು ದುಃಖಪಡಿಸಿದರು; ಆದ ದರಿಂದ ಆತನು ತಿರುಗಿಕೊಂಡು, ಅವರಿಗೆ ಶತ್ರು ವಾದನು; ಆತನೇ ಅವರಿಗೆ ವಿರೋಧವಾಗಿ ಯುದ್ಧ ಮಾಡಿದನು.

ಹೆಬ್ರಿಯರಿಗೆ 3:18

ತನ್ನ ವಿಶ್ರಾಂತಿಯಲ್ಲಿ ಅವರು ಸೇರುವದೇ ಇಲ್ಲವೆಂದು ಯಾರನ್ನು ಕುರಿತು ಆತನು ಪ್ರಮಾಣಮಾಡಿದನು? ನಂಬದವರ ವಿಷಯ ವಾಗಿ ಅಲ್ಲವೇ?ಅವರು ಸೇರಲಾರದೆ ಹೋದದ್ದು ಅಪನಂಬಿಕೆಯಿಂದಲೇ ಎಂದು ತಿಳಿದುಕೊಳ್ಳುತ್ತೇವೆ.

ಹೆಬ್ರಿಯರಿಗೆ 4:2

ಅವರಿಗೆ ಸುವಾರ್ತೆಯು ಸಾರೋಣವಾದಂತೆಯೇ ನಮಗೂ ಸಾರೋಣವಾಯಿತು; ಆದರೆ ಕೇಳಿದವರು ನಂಬಲಿಲ್ಲವಾದ ಕಾರಣ ಸಾರಿದ ಆ ವಾಕ್ಯದಿಂದ ಅವರಿಗೆ ಪ್ರಯೋಜನವಾಗಲಿಲ್ಲ.

Interlinear

Choose Theme