Home Bibles ಸಭಾಪ್ರಸಂಗಿ 1:17 · ಕನ್ನಡ ಬೈಬಲ್
ಸಭಾಪ್ರಸಂಗಿ 1:17 · ಕನ್ನಡ ಬೈಬಲ್

ಜ್ಞಾನ ವನ್ನೂ ಹುಚ್ಚುತನವನ್ನೂ ಬುದ್ಧಿಹೀನತೆಯನ್ನೂ ತಿಳು ಕೊಳ್ಳುವಂತೆ ನಾನು ಮನಸ್ಸಿಟ್ಟೆನು; ಇದು ಸಹ ಮನಸ್ಸಿಗೆ ಆಯಾಸವೆಂದು ನಾನು ಅರಿತುಕೊಂಡೆನು.ಬಹು ಜ್ಞಾನವಿದ್ದಲ್ಲಿ ದುಃಖ; ತಿಳುವಳಿಕೆಯನ್ನು ಹೆಚ್ಚಿಸಿಕೊಳ್ಳು ವವನು ತನ್ನ ವ್ಯಥೆಯನ್ನು ಹೆಚ್ಚಿಸಿಕೊಳ್ಳುತ್ತಾನೆ.

Cross references

ಕೀರ್ತನೆಗಳು 73:16

ಇದನ್ನು ತಿಳಿಯು ವದಕ್ಕೆ ನಾನು ಯೋಚಿಸಿದಾಗ, ನಾನು ದೇವರ ಪರಿಶುದ್ಧ ಸ್ಥಳಗಳಿಗೆ ಬರುವ ವರೆಗೆ

ಸಭಾಪ್ರಸಂಗಿ 1:13

ಆಕಾಶದ ಕೆಳಗೆ ನಡೆಯುವ ಎಲ್ಲವುಗಳ ವಿಷಯವಾಗಿ ಜ್ಞಾನ ದಿಂದ ವಿಚಾರಿಸಿ ವಿಮರ್ಶಿಸುವದಕ್ಕೆ ನಾನು ನನ್ನ ಮನಸ್ಸು ಇಟ್ಟೆನು; ಇದರ ವಿಷಯವಾದ ಪ್ರಯಾಸವು ಮನಸ್ಸಿನಲ್ಲಿ ಯೋಚಿಸುವಂತೆ ದೇವರು ಮನುಷ್ಯ ಮಕ್ಕಳಿಗೆ ಈ ಕಷ್ಟಕರವಾದ ಪ್ರಯಾಸವನ್ನು ಕೊಟ್ಟಿ ದ್ದಾನೆ.

ಸಭಾಪ್ರಸಂಗಿ 2:3

ಜ್ಞಾನದಿಂದ ನನ್ನ ಹೃದಯವನ್ನು ಇನ್ನು ಸಂತೋಷಪಡಿಸುವದಕ್ಕಾಗಿ ದ್ರಾಕ್ಷಾರಸಕ್ಕೆ ನನ್ನನ್ನು ನಾನು ಒಪ್ಪಿಸಿ ಕೊಳ್ಳುವಂತೆಯೂ ಆಕಾಶದ ಕೆಳಗೆ ತಮ್ಮ ಜೀವ ಮಾನದಲ್ಲೆಲ್ಲಾ ಮನುಷ್ಯ ಪುತ್ರರಿಗೆ ಒಳ್ಳೆಯದೇನೆಂದು ನೋಡುವ ತನಕ ಬುದ್ಧಿ ಹೀನತೆಯನ್ನು ಹಿಡಿಯುವದಕ್ಕೂ ನಾನು ನನ್ನ ಹೃದಯ ದಲ್ಲಿ ವಿಚಾರ ಮಾಡಿಕೊಂಡೆನು.

ಸಭಾಪ್ರಸಂಗಿ 2:10

ನನ್ನ ಕಣ್ಣುಗಳು ಬಯಸಿದ್ದೆಲ್ಲವನ್ನು ಅವುಗಳಿಂದ ಹಿಂತೆಗೆಯಲಿಲ್ಲ, ಯಾವ ಸಂತೋಷಕ್ಕಾಗಿಯೂ ನನ್ನ ಹೃದಯವನ್ನು ನಾನು ತಡೆಯಲಿಲ್ಲ; ನನ್ನ ಎಲ್ಲಾ ಪ್ರಯಾಸದಲ್ಲಿ ನನ್ನ ಹೃದಯವು ಸಂತೋಷಿಸಿತು; ನನ್ನ ಪ್ರಯಾಸ ದಿಂದೆಲ್ಲಾ ನನಗಾದ ಪಾಲು ಇದೆ.

ಸಭಾಪ್ರಸಂಗಿ 2:11

ಆಗ ನನ್ನ ಕೈಗಳು ನಡಿಸಿದವುಗಳೆಲ್ಲವನ್ನು ನಾನು ಪ್ರಯಾಸ ಪಟ್ಟ ಪ್ರಯಾಸವನ್ನು ದೃಷ್ಟಿಸಿದೆನು; ಇಗೋ, ಎಲ್ಲವೂ ವ್ಯರ್ಥ ಮತ್ತು ಮನಸ್ಸಿಗೆ ಆಯಾಸಕರ. ಸೂರ್ಯನ ಕೆಳಗೆ ಯಾವ ಲಾಭವಿಲ್ಲ.

ಸಭಾಪ್ರಸಂಗಿ 2:12

ಜ್ಞಾನವನ್ನೂ ಹುಚ್ಚುತನವನ್ನೂ ಮೂಢತೆಯನ್ನೂ ನೋಡುವದಕ್ಕೆ ನಾನು ತಿರುಗಿಕೊಂಡೆನು; ಅರಸನ ತರುವಾಯ ಬರುವ ಮನುಷ್ಯನು ಏನು ಮಾಡಾನು? ಮೊದಲಿದ್ದದ್ದು ಆಗಲೇ ನಡೆಯಿತು.

ಸಭಾಪ್ರಸಂಗಿ 3:19

ಮೃಗಗಳಿಗೆ ಸಂಭವಿಸುವದು ಮನುಷ್ಯರ ಪುತ್ರರಿಗೂ ಸಂಭವಿಸುತ್ತದೆ; ಅವರಿಗೆ ಒಂದೇ ಸಂಗತಿ ಸಂಭವಿಸು ತ್ತದೆ; ಒಂದು ಸಾಯುವ ಹಾಗೆ ಮತ್ತೊಂದು ಸಾಯು ತ್ತದೆ; ಹೌದು, ಅವರೆಲ್ಲರಿಗೂ ಒಂದೇ ಒಂದು ಉಸಿ ರಾಟ ಇದೆ; ಆದಕಾರಣ ಮೃಗಕ್ಕಿಂತ ಮನುಷ್ಯನಿಗೆ ಯಾವ ಶ್ರೇಷ್ಠತೆಯೂ ಇಲ್ಲ; ಎಲ್ಲವೂ ವ್ಯರ್ಥ.

ಸಭಾಪ್ರಸಂಗಿ 4:4

ತಿರುಗಿ ಎಲ್ಲಾ ಪ್ರಯಾಸಕ್ಕಾಗಿಯೂ ಪ್ರತಿಯೊಂದು ಒಳ್ಳೆಯ ಕಾರ್ಯಕ್ಕಾಗಿಯೂ ಮನುಷ್ಯನು ತನ್ನ ನೆರೆಯವನ ಮೇಲೆ ಅಸೂಯೆ ಪಡುತ್ತಾನೆಂದೂ ನಾನು ತಿಳುಕೊಂಡೆನು. ಇದೂ ಕೂಡ ವ್ಯರ್ಥವೂ ಪ್ರಾಣಕ್ಕೆ ಆಯಾಸಕರವೂ ಆಗಿದೆ.

ಸಭಾಪ್ರಸಂಗಿ 6:9

ಅಪೇಕ್ಷೆಯ ತಿರುಗಾಟ ಕ್ಕಿಂತ ಕಣ್ಣುಗಳ ದೃಷ್ಟಿಯು ಉತ್ತಮ; ಇದೂ ಕೂಡ ವ್ಯರ್ಥವೂ ಮನಸ್ಸಿಗೆ ಆಯಾಸಕರವೂ ಆಗಿದೆ.

ಸಭಾಪ್ರಸಂಗಿ 7:23

ಇದೆಲ್ಲವನ್ನು ನಾನು ಜ್ಞಾನದಿಂದ ಪರೀಕ್ಷಿಸಿದ್ದೇನೆ; ಆಗ--ನಾನು ಜ್ಞಾನಿಯಾಗಿರುವೆನು ಎಂದು ಅಂದು ಕೊಂಡೆನು; ಅದು ನನ್ನಿಂದ ದೂರವಾಯಿತು.

ಸಭಾಪ್ರಸಂಗಿ 7:25

ಜ್ಞಾನದ ಮೂಲತತ್ವಗಳನ್ನೂ ಮೂಢತನದ ಕೆಟ್ಟತನವನ್ನೂ ಅಂದರೆ ಮೂಢತನ ವನ್ನೂ ಹುಚ್ಚುತನವನ್ನೂ ತಿಳುಕೊಳ್ಳುವಂತೆ ಪರೀಕ್ಷಿಸು ವವನಾಗಿಯೂ ನಾನು ನನ್ನ ಹೃದಯವನ್ನು ಪ್ರಯೋ ಗಿಸಿದೆನು.

ಸಭಾಪ್ರಸಂಗಿ 8:16

ಜ್ಞಾನವನ್ನು ತಿಳಿದುಕೊಳ್ಳುವದಕ್ಕೂ ಮತ್ತು ಭೂಮಿಯ ಮೇಲೆ ಮಾಡುವ ಕಾರ್ಯವನ್ನು ನೋಡುವದಕ್ಕೂ ನಾನು ನನ್ನ ಹೃದಯವನ್ನು ಪ್ರಯೋಗಿಸಿದೆನು; (ಯಾಕಂದರೆ ರಾತ್ರಿಹಗಲು ತಮ್ಮ ಕಣ್ಣುಗಳಿಗೆ ನಿದ್ರೆ ನೋಡದ ವರೂ ಇದ್ದಾರೆ).ತರುವಾಯ ದೇವರ ಎಲ್ಲಾ ಕೆಲಸಗಳನ್ನು ನಾನು ನೋಡಿದೆನು; ಅದೇನಂದರೆ, ಸೂರ್ಯನ ಕೆಳಗೆ ಮಾಡುವ ಕೆಲಸಗಳನ್ನು ಮನು ಷ್ಯನು ಕಾಣಲಾರನು; ಮನುಷ್ಯನು ಅದನ್ನು ಹುಡು ಕುವದಕ್ಕೆ ಎಷ್ಟು ಕಷ್ಟಪಟ್ಟರೂ ಅದನ್ನು ಕಂಡು ಕೊಳ್ಳಲಾರನು; ಹೌದು, ಜ್ಞಾನಿಯು ಅದನ್ನು ತಿಳಿದುಕೊಳ್ಳಲು ಯೋಚಿಸಿದರೂ ಅವನು ಅದನ್ನು ಕಂಡುಕೊಳ್ಳಲಾರನು.

ಸಭಾಪ್ರಸಂಗಿ 12:8

ವ್ಯರ್ಥದ ವ್ಯರ್ಥಗಳೂ ಎಲ್ಲವೂ ವ್ಯರ್ಥವೇ ಎಂದು ಪ್ರಸಂಗಿ ಹೇಳುವನು.

1 ತೆಸಲೋನಿಕದವರಿಗೆ 5:21

ಆದರೆ ಎಲ್ಲವನ್ನು ಪರಿಶೋಧಿಸಿ ಒಳ್ಳೇದನ್ನೇ ಭದ್ರವಾಗಿ ಹಿಡಿದುಕೊಳ್ಳಿರಿ.

Interlinear

Choose Theme