Home Bibles ☰ Books ಸಭಾಪ್ರಸಂಗಿ 10:5 · ಕನ್ನಡ ಬೈಬಲ್
ಸಭಾಪ್ರಸಂಗಿ 10:5 · ಕನ್ನಡ ಬೈಬಲ್

ಆಳುವ ವನ ಸಮ್ಮುಖದಿಂದ ಹೊರಟು ಬರುವ ತಪ್ಪಿನ ಹಾಗಿ ರುವ ಒಂದು ಕೇಡನ್ನು ನಾನು ಸೂರ್ಯನ ಕೆಳಗೆ ನೋಡಿದ್ದೇನೆ.

Cross references

ಸಾಮೇತಿಗಳು 19:10

ಬುದ್ಧಿಹೀನನಿಗೆ ಆನಂದವು ಯುಕ್ತವಲ್ಲ; ಅಧಿಪತಿಗಳ ಮೇಲೆ ದೊರೆತನ ಮಾಡುವದು ಸೇವಕ ನಿಗೆ ಯುಕ್ತವೇ ಅಲ್ಲ.

ಸಭಾಪ್ರಸಂಗಿ 3:16

ಕೆಟ್ಟದ್ದು ಇತ್ತೆಂದು ಸೂರ್ಯನ ಕೆಳಗೆ ನ್ಯಾಯ ತೀರ್ಪಿನ ಸ್ಥಳವನ್ನು ಮತ್ತು ದುಷ್ಕೃತ್ಯ ಇದೆಯೆಂದು ನೀತಿಯ ಸ್ಥಾನವನ್ನು ನಾನು ಕಂಡೆನು.

ಸಭಾಪ್ರಸಂಗಿ 4:1

ಹೀಗೆ ನಾನು ತಿರುಗಿಕೊಂಡು ಸೂರ್ಯನ ಕೆಳಗೆ ನಡೆಯುತ್ತಿರುವ ಹಿಂಸೆಗಳನ್ನೆಲ್ಲಾ ನಾನು ಯೋಚಿಸಿದೆನು; ಹಿಂಸಿಸಲ್ಪಟ್ಟವರ ಕಣ್ಣೀರನ್ನೂ ಅವರನ್ನು ಆದರಿಸುವವರು ಯಾರೂ ಇಲ್ಲದಿರುವ ದನ್ನೂ ನೋಡಿದೆನು; ಅವರನ್ನು ಹಿಂಸೆಪಡಿಸುವವರ ಕಡೆಗೆ ಶಕ್ತಿ ಇತ್ತು; ಆದರೆ ಇವರನ್ನು ಆದರಿಸುವವನು ಯಾವನೂ ಇಲ್ಲ.

ಸಭಾಪ್ರಸಂಗಿ 4:7

ಆಗ ನಾನು ತಿರುಗಿಕೊಂಡು ಸೂರ್ಯನ ಕೆಳಗೆ ಇದ್ದ ವ್ಯರ್ಥವನ್ನು ಕಂಡೆನು.

ಸಭಾಪ್ರಸಂಗಿ 5:13

ಸೂರ್ಯನ ಕೆಳಗೆ ವ್ಯಥೆಯಿಂದ ಕೂಡಿದ ಒಂದು ಕೆಟ್ಟತನವನ್ನು ನಾನು ನೋಡಿದ್ದೇನೆ; ಅದು ಯಾವ ದಂದರೆ, ತಮ್ಮ ವ್ಯಥೆಗಾಗಿ ಅವುಗಳ ಯಜ ಮಾನರು ಇಟ್ಟುಕೊಂಡಿದ್ದ ಐಶ್ವರ್ಯವೇ.

ಸಭಾಪ್ರಸಂಗಿ 6:1

ಸೂರ್ಯನ ಕೆಳಗೆ ಇರುವ ಒಂದು ಕೇಡನ್ನು ನಾನು ಕಂಡೆನು; ಅದು ಮನುಷ್ಯರೊ ಳಗೆ ಸಾಧಾರಣವಾಗಿದೆ.

ಸಭಾಪ್ರಸಂಗಿ 9:3

ಸೂರ್ಯನ ಕೆಳಗೆ ಮಾಡುವ ಎಲ್ಲಾ ಸಂಗತಿಗಳಲ್ಲಿಯೂ ಇದೂ ಒಂದು ಕೆಟ್ಟದ್ದು; ಇದಕ್ಕೆಲ್ಲಾ ಒಂದು ಗತಿಯಿದೆ; ಹೌದು, ಮನುಷ್ಯ ಕುಮಾರರ ಹೃದಯಗಳು ಸಹ ಕೆಟ್ಟತನದಿಂದ ತುಂಬಿವೆ; ಅವರು ಜೀವಿಸುವಾಗ ಅವರ ಹೃದಯಗಳಲ್ಲಿ ಹುಚ್ಚು ತನವಿದೆ. ಅನಂತರ ಅವರು ಸಾಯುತ್ತಾರೆ (ಸತ್ತವರ ಬಳಿಗೆ ಹೋಗುತ್ತಾರೆ.)

Interlinear

Choose Theme