Home Ecclesiastes 11 · ಕನ್ನಡ ಬೈಬಲ್

Ecclesiastes

Chapter 11

ಕನ್ನಡ ಬೈಬಲ್
1ನಿನ್ನ ರೊಟ್ಟಿಯನ್ನು ನೀರಿನ ಮೇಲೆ ಹಾಕು, ಬಹಳ ದಿನಗಳ ಮೇಲೆ ಅದು ನಿನಗೆ ಸಿಗುವದು.
2ನಿನ್ನ ಭಾಗವನ್ನು ಏಳು ಮತ್ತು ಎಂಟು ಮಂದಿಗೆ ಸಹ ಕೊಡು; ಭೂಮಿಯ ಮೇಲೆ ಯಾವ ಕೇಡು ಬರುವದೋ ನಿನಗೆ ತಿಳಿಯದು.
3ಮೋಡ ಗಳು ಮಳೆಯಿಂದ ತುಂಬಿದ್ದರೆ ಅವು ತಾವಾಗಿಯೇ ಭೂಮಿಯ ಮೇಲೆ ಬರಿದುಮಾಡಿಕೊಳ್ಳುತ್ತವೆ; ಮರವು ಉತ್ತರ ಇಲ್ಲವೆ ದಕ್ಷಿಣಕ್ಕೆ ಬಿದ್ದರೆ ಆ ಮರವು ಬಿದ್ದ ಸ್ಥಳದಲ್ಲಿಯೇ ಇರುವದು.
4ಯಾವನು ಗಾಳಿಯನ್ನು ಲಕ್ಷಿಸುವನೋ ಅವನು ಬಿತ್ತುವದಿಲ್ಲ; ಮೋಡಗಳನ್ನು ಗಮನಿಸುವವನು ಕೊಯ್ಯುವದಿಲ್ಲ.
5ಹೇಗೆ ನೀನು ಆತ್ಮೀಯ ಮಾರ್ಗವು ಯಾವದೆಂದೂ ಮತ್ತು ಮಗು ವಿರುವ ಅವಳ ಗರ್ಭದಲ್ಲಿ ಎಲುಬುಗಳು ಹೇಗೆ ಬೆಳೆಯುವವೆಂದೂ ತಿಳಿದುಕೊಳ್ಳಲಾರಿಯೋ ಹಾಗೆ ಯೇ ಎಲ್ಲವನ್ನೂ ಮಾಡುವ ದೇವರ ಕೆಲಸವನ್ನೂ ತಿಳಿದುಕೊಳ್ಳಲಾರಿ.
6ಬೆಳಿಗ್ಗೆ ನಿನ್ನ ಬೀಜವನ್ನು ಬಿತ್ತು, ಸಂಜೆ ತನಕ ನಿನ್ನ ಕೈಯನ್ನು ಹಿಂತೆಗೆಯಬೇಡ; ಇದೋ, ಅದೋ ಯಾವದೋ ಕೈಗೂಡಿ ಬರು ವದೋ ಇಲ್ಲವೆ ಎರಡೂ ಒಂದೇ ರೀತಿ ಒಳ್ಳೆಯದಾ ಗುವವೋ ಎಂದು ನಿನಗೆ ತಿಳಿಯದು.
7ನಿಜವಾಗಿ ಬೆಳಕು ಹಿತವಾಗಿಯೂ ಮತ್ತು ಸೂರ್ಯನನ್ನು ನೋಡುವದು ಕಣ್ಣುಗಳಿಗೆ ಮೆಚ್ಚಿಕೆಯಾಗಿಯೂ ಇರು ವದು.
8ಆದರೆ ಅನೇಕ ವರುಷಗಳು ಒಬ್ಬ ಮನುಷ್ಯನು ಬದುಕಿ ಅವುಗಳಲ್ಲೆಲ್ಲಾ ಸಂತೋಷಪಟ್ಟರೂ ಅವನು ಕತ್ತಲೆಯ ದಿನಗಳನ್ನು ಜ್ಞಾಪಿಸಿಕೊಳ್ಳಲಿ. ಅವು ಅತಿ ಯಾಗಿರುವವು, ಬರುವವುಗಳೆಲ್ಲವು ವ್ಯರ್ಥವಾಗಿವೆ.
9ಓ ಯೌವನಸ್ಥನೇ, ನಿನ್ನ ಯೌವನದಲ್ಲಿ ಸಂತೋಷಪಡು. ನಿನ್ನ ಯೌವನದ ದಿನಗಳಲ್ಲಿ ನಿನ್ನ ಹೃದಯವು ನಿನ್ನನ್ನು ಆನಂದಪಡಿಸಲಿ; ನೀನು ನಿನ್ನ ಹೃದಯದ ಮಾರ್ಗಗಳಲ್ಲಿಯೂ ನಿನ್ನ ಕಣ್ಣುಗಳ ನೋಟ ದಲ್ಲಿಯೂ ನಡೆ; ಆ ಎಲ್ಲಾ ಸಂಗತಿಗಳಿಗಾಗಿ ದೇವರು ನಿನ್ನನ್ನು ನ್ಯಾಯತೀರ್ಪಿಗೆ ತರುವನೆಂದು ತಿಳಿದುಕೋ.ಆದಕಾರಣ ನಿನ್ನ ಹೃದಯದಿಂದ ದುಃಖವನ್ನು ತೆಗೆದು ಹಾಕು; ನಿನ್ನ ಶರೀರದಿಂದ ಕೆಟ್ಟದ್ದನ್ನು ತೆಗೆದುಬಿಡು; ಬಾಲ್ಯವೂ ಯೌವನವೂ ವ್ಯರ್ಥವಾಗಿವೆ.
10ಆದಕಾರಣ ನಿನ್ನ ಹೃದಯದಿಂದ ದುಃಖವನ್ನು ತೆಗೆದು ಹಾಕು; ನಿನ್ನ ಶರೀರದಿಂದ ಕೆಟ್ಟದ್ದನ್ನು ತೆಗೆದುಬಿಡು; ಬಾಲ್ಯವೂ ಯೌವನವೂ ವ್ಯರ್ಥವಾಗಿವೆ.
Bible Study with Steffi App

Memorize verses with spaced repetition. Free, no ads, 15+ languages.

Download Free ↗

Choose Theme