ಆಗ ನನ್ನ ಕೈಗಳು ನಡಿಸಿದವುಗಳೆಲ್ಲವನ್ನು ನಾನು ಪ್ರಯಾಸ ಪಟ್ಟ ಪ್ರಯಾಸವನ್ನು ದೃಷ್ಟಿಸಿದೆನು; ಇಗೋ, ಎಲ್ಲವೂ ವ್ಯರ್ಥ ಮತ್ತು ಮನಸ್ಸಿಗೆ ಆಯಾಸಕರ. ಸೂರ್ಯನ ಕೆಳಗೆ ಯಾವ ಲಾಭವಿಲ್ಲ.
Cross references
ದೇವರು ತಾನು ಮಾಡಿದ್ದನ್ನೆಲ್ಲಾ ನೋಡಲಾಗಿ ಇಗೋ, ಅದು ಬಹಳ ಒಳ್ಳೆಯದಾಗಿತ್ತು. ಹೀಗೆ ಸಾಯಂಕಾಲವೂ ಪ್ರಾತಃಕಾಲವೂ ಆಗಿ ಆರನೆಯ ದಿನವಾಯಿತು.
ಮೋಶೆಯು ಆ ಕೆಲಸವನ್ನೆಲ್ಲಾ ನೋಡಿದಾಗ ಇಗೋ, ಕರ್ತನು ಆಜ್ಞಾಪಿಸಿದ ಪ್ರಕಾರವೇ ಅವರು ಅದನ್ನು ಮಾಡಿದ್ದರು. ಆಗ ಮೋಶೆಯು ಅವರನ್ನು ಆಶೀರ್ವದಿಸಿದನು.
ಸೂರ್ಯನ ಕೆಳಗೆ ಮನುಷ್ಯನು ಪಡುವ ಎಲ್ಲಾ ಪ್ರಯಾಸದಲ್ಲಿ ಅವನಿಗೆ ಲಾಭವೇನು?
ಸೂರ್ಯನ ಕೆಳಗೆ ನಡೆಯುವ ಎಲ್ಲಾ ಕೆಲಸಗಳನ್ನು ನಾನು ನೋಡಿದ್ದೇನೆ; ಇಗೋ, ಎಲ್ಲವು ವ್ಯರ್ಥವೂ ಮನಸ್ಸಿಗೆ ಆಯಾಸವೂ ಆಗಿವೆ.
ಜ್ಞಾನ ವನ್ನೂ ಹುಚ್ಚುತನವನ್ನೂ ಬುದ್ಧಿಹೀನತೆಯನ್ನೂ ತಿಳು ಕೊಳ್ಳುವಂತೆ ನಾನು ಮನಸ್ಸಿಟ್ಟೆನು; ಇದು ಸಹ ಮನಸ್ಸಿಗೆ ಆಯಾಸವೆಂದು ನಾನು ಅರಿತುಕೊಂಡೆನು.ಬಹು ಜ್ಞಾನವಿದ್ದಲ್ಲಿ ದುಃಖ; ತಿಳುವಳಿಕೆಯನ್ನು ಹೆಚ್ಚಿಸಿಕೊಳ್ಳು ವವನು ತನ್ನ ವ್ಯಥೆಯನ್ನು ಹೆಚ್ಚಿಸಿಕೊಳ್ಳುತ್ತಾನೆ.
ಆದಕಾರಣ ಜೀವವನ್ನು ನಾನು ಹಗೆಮಾಡಿದೆನು; ಸೂರ್ಯನ ಕೆಳಗೆ ನಡೆಯುವ ಕಾರ್ಯವು ವ್ಯಥೆಯಾಗಿ ನನಗೆ ತೋರಿತು; ಎಲ್ಲಾ ವ್ಯರ್ಥವೂ ಪ್ರಾಣಕ್ಕೆ ಆಯಾಸಕ ರವೂ ಆಗಿವೆ.
ಅವನು ಜ್ಞಾನಿಯೋ ಮೂಢ ನೋ ಯಾರಿಗೆ ಗೊತ್ತು? ಆದರೂ ನಾನು ಪಟ್ಟ ಎಲ್ಲಾ ಪ್ರಯಾಸದ ಮೇಲೆಯೂ ಸೂರ್ಯನ ಕೆಳಗೆ ನಾನು ಜ್ಞಾನಿಯೆಂದು ತೋರ್ಪಡಿಸಿಕೊಂಡವರ ಮೇಲೆಯೂ ಅವನು ಆಳುವನು. ಇದೂ ವ್ಯರ್ಥವೇ.
ಸೂರ್ಯನ ಕೆಳಗೆ ತಾನು ಪ್ರಯಾಸ ಪಟ್ಟ ತನ್ನ ಹೃದಯದ ಆಯಾಸಕ್ಕಾಗಿಯೂ ತನ್ನ ಎಲ್ಲಾ ಪ್ರಯಾಸಕ್ಕಾಗಿಯೂ ಮನುಷ್ಯನಿಗೆ ಏನು ಸಿಕ್ಕುತ್ತದೆ?
ಇಗೋ, ಇದು ಸೈನ್ಯಗಳ ಕರ್ತನಿಂದ ಅಲ್ಲವೋ? ಏನಂದರೆ, ಜನರು ಬೆಂಕಿಗೋಸ್ಕರ ಪರಿಶ್ರಮಪಟ್ಟ ವ್ಯರ್ಥಕ್ಕೋಸ್ಕರ ಆಯಾಸಪಡುವದೇ.
ಸಂತುಷ್ಟಿಸಹಿತವಾದ ಭಕ್ತಿಯು ದೊಡ್ಡ ಲಾಭವೇ ಸರಿ.
ಲೋಕದಲ್ಲಿರುವವುಗಳೆಲ್ಲವು ಅಂದರೆ ಶರೀರದಾಶೆ, ಕಣ್ಣಿನಾಶೆ, ಜೀವನದ ಗರ್ವ ಇವು ತಂದೆಗೆ ಸಂಬಂಧ ಪಟ್ಟವುಗಳಲ್ಲ, ಲೋಕಕ್ಕೆ ಸಂಬಂಧಪಟ್ಟವುಗಳಾಗಿವೆ.