ಕೆಟ್ಟದ್ದು ಇತ್ತೆಂದು ಸೂರ್ಯನ ಕೆಳಗೆ ನ್ಯಾಯ ತೀರ್ಪಿನ ಸ್ಥಳವನ್ನು ಮತ್ತು ದುಷ್ಕೃತ್ಯ ಇದೆಯೆಂದು ನೀತಿಯ ಸ್ಥಾನವನ್ನು ನಾನು ಕಂಡೆನು.
Cross references
ಅವಳು ಪತ್ರಗಳಲ್ಲಿ--ನೀವು ಉಪವಾಸವನ್ನು ಪ್ರಕಟಮಾಡಿ ನಾಬೋತನನ್ನು ಜನರೊಳಗೆ ಎತ್ತರದ ಸ್ಥಳದಲ್ಲಿ ನಿಲ್ಲಿಸಿ--
ಓ ಸಭೆಯೇ, ನೀವು ನಿಜವಾಗಿ ನೀತಿಯನ್ನು ನುಡಿಯುವಿರೋ? ಓ ಮನುಷ್ಯರ ಮಕ್ಕಳೇ, ನೀವು ಯಥಾರ್ಥವಾಗಿ ನ್ಯಾಯತೀರಿಸು ವಿರೋ?
ಹೌದು, ನಿಮ್ಮ ಹೃದಯದಲ್ಲಿ ದುಷ್ಟತ್ವ ವನ್ನು ಮಾಡುತ್ತೀರಲ್ಲಾ, ಲೋಕದಲ್ಲಿ ನಿಮ್ಮ ಕೈಗಳ ಬಲಾತ್ಕಾರವನ್ನು ತೂಗುತ್ತೀರಲ್ಲಾ.
ಎಷ್ಟರ ವರೆಗೂ ಅನ್ಯಾಯವಾಗಿ ತೀರ್ಪುಮಾಡಿ ದುಷ್ಟ ರಿಗೆ ಮುಖದಾಕ್ಷಿಣ್ಯ ಮಾಡುವಿರಿ? ಸೆಲಾ.
ನೀತಿವಂತನ ಪ್ರಾಣಕ್ಕೆ ವಿರೋಧವಾಗಿ ಅವರು ಕೂಡಿಕೊಳ್ಳುತ್ತಾರೆ; ನಿರಪರಾಧಿಯ ರಕ್ತವನ್ನು ಖಂಡಿಸುತ್ತಾರೆ.
ಹೀಗೆ ನಾನು ತಿರುಗಿಕೊಂಡು ಸೂರ್ಯನ ಕೆಳಗೆ ನಡೆಯುತ್ತಿರುವ ಹಿಂಸೆಗಳನ್ನೆಲ್ಲಾ ನಾನು ಯೋಚಿಸಿದೆನು; ಹಿಂಸಿಸಲ್ಪಟ್ಟವರ ಕಣ್ಣೀರನ್ನೂ ಅವರನ್ನು ಆದರಿಸುವವರು ಯಾರೂ ಇಲ್ಲದಿರುವ ದನ್ನೂ ನೋಡಿದೆನು; ಅವರನ್ನು ಹಿಂಸೆಪಡಿಸುವವರ ಕಡೆಗೆ ಶಕ್ತಿ ಇತ್ತು; ಆದರೆ ಇವರನ್ನು ಆದರಿಸುವವನು ಯಾವನೂ ಇಲ್ಲ.
ಬಹು ಕನಸುಗಳಲ್ಲಿ ಬಹಳ ಮಾತುಗಳಲ್ಲಿ ವಿಧವಿಧವಾದ ವ್ಯರ್ಥವಾದವುಗಳು ಇವೆ; ನೀನು ದೇವರಿಗೆ ಭಯಪಡು.
ಬಡವರ ಹಿಂಸೆಯನ್ನೂ ಒಬ್ಬ ಅಧಿಪತಿಯಲ್ಲಿ ನೀತಿ ನ್ಯಾಯಗಳ ಬಲಾತ್ಕಾರದ ವಕ್ರತೆಯನ್ನೂ ನೀನು ನೋಡಿದರೆ ಆ ಸಂಗತಿಯಲ್ಲಿ ಆಶ್ಚರ್ಯಪಡಬೇಡ; ಉನ್ನತೋನ್ನತನು ಲಕ್ಷಿಸುತ್ತಾನೆ; ಅವರಿಗಿಂತ ಉನ್ನತವಾ ದವರು ಇದ್ದಾರೆ.
ನ್ಯಾಯವು ಸಹ ಹಿಂದಕ್ಕೆ ತಿರುಗಿ ಸಲ್ಪಟ್ಟಿದೆ. ನೀತಿಯು ದೂರದಲ್ಲಿ ನಿಲ್ಲುತ್ತದೆ; ಸತ್ಯವು ಬೀದಿಯಲ್ಲಿ ಬಿದ್ದುಹೋಯಿತು. ಯಥಾರ್ಥತೆಯು ಪ್ರವೇಶಿಸುವದೇ ಇಲ್ಲ.
ಅವರು ಹೊಲಗಳನ್ನು ಆಶಿಸಿ ಬಲಾತ್ಕಾರದಿಂದ ತಕ್ಕೊಳ್ಳುತ್ತಾರೆ; ಮನೆಗಳನ್ನು ಸಹ ತೆಗೆದುಕೊಳ್ಳುತ್ತಾರೆ; ಮನುಷ್ಯನಿಗೂ ಅವನ ಮನೆಗೂ ಹೌದು, ಮನುಷ್ಯನಿಗೂ ಅವನ ಸ್ವಾಸ್ತ್ಯಕ್ಕೂ ಬಲಾತ್ಕಾರ ಮಾಡುತ್ತಾರೆ.
ಕೆಟ್ಟದ್ದನ್ನು ಎರಡು ಕೈಗಳಿಂದ ಚೆನ್ನಾಗಿ ಮಾಡುವ ಹಾಗೆ ಪ್ರಧಾನನೂ ನ್ಯಾಯಾಧಿಪತಿಯೂ ಬಹುಮಾನವನ್ನು ಕೇಳುತ್ತಾರೆ; ದೊಡ್ಡ ಮನುಷ್ಯನು ತನ್ನ ಕೇಡಿನ ಆಸೆಯನ್ನು ತಾನೇ ಹೇಳುತ್ತಾನೆ; ಅವರು ಒಂದೇ ಕಟ್ಟಾಗಿದ್ದಾರೆ.
ಅದರ ಮಧ್ಯದಲ್ಲಿರುವ ಪ್ರಧಾನರುಗಳು ಗರ್ಜಿಸುವ ಸಿಂಹಗಳಾಗಿದ್ದಾರೆ; ಅದರ ನ್ಯಾಯಾಧಿಪತಿಗಳು ಸಂಜೆಯ ತೋಳಗಳಾಗಿದ್ದಾರೆ; ಮರುದಿನದ ವರೆಗೂ ಕಡಿಯುವದಕ್ಕೆ ಎಲುಬುಗಳಿಲ್ಲ.
ಆಗ ಪ್ರಧಾನಯಾಜಕರೂ ಹಿರಿಯರೂ ಆಲೋ ಚನಾ ಸಭೆಯವರೆಲ್ಲರೂ ಯೇಸುವಿಗೆ ವಿರೋಧವಾಗಿ ಆತನನ್ನು ಕೊಲ್ಲಿಸುವಂತೆ ಸುಳ್ಳು ಸಾಕ್ಷಿಗಾಗಿ ಹುಡುಕಿ ದರು.
ಆಗ ಪೌಲನು ಅವನಿಗೆ--ಸುಣ್ಣಾ ಹಚ್ಚಿದ ಗೋಡೆಯೇ, ದೇವರು ನಿನ್ನನ್ನು ಹೊಡೆಯುವನು; ನ್ಯಾಯಪ್ರಮಾಣ ಕ್ಕನುಸಾರವಾಗಿ ನನ್ನನ್ನು ತೀರ್ಪು ಮಾಡುವದಕ್ಕೆ ಕೂತುಕೊಂಡು ನ್ಯಾಯಪ್ರಮಾಣಕ್ಕೆ ಪ್ರತಿಕೂಲವಾಗಿ ನನ್ನನ್ನು ಹೊಡೆಯುವಂತೆ ನೀನು ಅಪ್ಪಣೆ ಕೊಡು ತ್ತೀಯೋ ಎಂದು ಕೇಳಿದನು.
ನೀವಾದರೋ ಬಡವರನ್ನು ಅವಮಾನಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ನ್ಯಾಯಸ್ಥಾನಗಳ ಮುಂದೆ ಎಳೆದು ಕೊಂಡು ಹೋಗುವವರು ಐಶ್ವರ್ಯವಂತರಲ್ಲವೋ?