Home Bibles ಸಭಾಪ್ರಸಂಗಿ 7:11 · ಕನ್ನಡ ಬೈಬಲ್
ಸಭಾಪ್ರಸಂಗಿ 7:11 · ಕನ್ನಡ ಬೈಬಲ್

ಜ್ಞಾನವು ಬಾಧ್ಯತೆಯ ಹಾಗೆ ಒಳ್ಳೇದು. ಸೂರ್ಯನನ್ನು ನೋಡುವವರಿಗೆ ಅದರಿಂದ ಲಾಭ ವಿದೆ.

Cross references

1 ಅರಸುಗಳು 3:6

ಅದಕ್ಕೆ ಸೊಲೊಮೋನನು--ನನ್ನ ತಂದೆಯಾಗಿರುವ ನಿನ್ನ ಸೇವಕನಾದ ದಾವೀದನು ನಿನ್ನ ಮುಂದೆ ಸತ್ಯದಿಂದಲೂ ನೀತಿಯಿಂದಲೂ ಯಥಾರ್ಥವಾದ ಹೃದಯವುಳ್ಳವ ನಾಗಿಯೂ ನಡೆದದ್ದರಿಂದ ನೀನು ಅವನಿಗೆ ಬಹು ದಯೆತೋರಿಸಿ ಈ ಮಹಾಕರುಣೆಯನ್ನು ಅವನಿ ಗೋಸ್ಕರ ಕಾದಿಟ್ಟಿದ್ದೀ. ಈ ಹೊತ್ತಿರುವ ಹಾಗೆಯೇ ತನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳಲು ಒಬ್ಬ ಮಗನನ್ನು ಕೊಟ್ಟಿದ್ದೀ.

ಯೋಬ 28:12

ಆದರೆ ಜ್ಞಾನವು ಎಲ್ಲಿ ದೊರಕುವದು? ಗ್ರಹಿಕೆ ಇರುವ ಸ್ಥಳ ಎಲ್ಲಿ?

ಕೀರ್ತನೆಗಳು 119:72

ಸಾವಿ ರಾರು ಬೆಳ್ಳಿಬಂಗಾರಗಳಿಗಿಂತ ನಿನ್ನ ಬಾಯಿಯ ನ್ಯಾಯ ಪ್ರಮಾಣವು ನನಗೆ ಒಳ್ಳೇದು.

ಸಾಮೇತಿಗಳು 3:14

ಅದರ ವ್ಯಾಪಾರವೂ ಬೆಳ್ಳಿಯ ವ್ಯಾಪಾರಕ್ಕಿಂತಲೂ ಅದರ ಲಾಭವು ಸೋಸಿದ ಬಂಗಾರಕ್ಕಿಂತಲೂ ಉತ್ತಮವಾಗಿದೆ.

ಸಾಮೇತಿಗಳು 3:15

ಅದು ಮಾಣಿಕ್ಯಗಳಿಗಿಂತಲೂ ಬಹು ಅಮೂಲ್ಯವುಳ್ಳದ್ದಾಗಿದ್ದು ನಿನ್ನ ಇಷ್ಟ ವಸ್ತುಗಳೆಲ್ಲವೂ ಅದಕ್ಕೆ ಸಮವಾಗುವದಿಲ್ಲ.

ಸಾಮೇತಿಗಳು 8:10

ಬೆಳ್ಳಿಯನ್ನಲ್ಲ, ನನ್ನ ಶಿಕ್ಷಣವನ್ನೂ ಆಯಲ್ಪಟ್ಟ ಬಂಗಾ ರಕ್ಕಿಂತ ತಿಳುವಳಿಕೆಯನ್ನೂ ಪಡೆದುಕೋ.

ಸಾಮೇತಿಗಳು 14:24

ಜ್ಞಾನವಂತರ ಕಿರೀಟವು ಅದರ ಐಶ್ವ ರ್ಯವೇ; ಬುದ್ಧಿಹೀನರ ಬುದ್ಧಿಹೀನತೆಯು ಅವರ ಮೂರ್ಖತನವೇ.

ಸಭಾಪ್ರಸಂಗಿ 2:13

ಆಗ ಕತ್ತಲೆಗಿಂತ ಬೆಳಕು ಶ್ರೇಷ್ಠವಾಗಿರುವಂತೆ ಮೂಢತನಕ್ಕಿಂತ ಜ್ಞಾನವು ಶ್ರೇಷ್ಠವಾಗಿದೆ ಎಂದು ನಾನು ಕಂಡೆನು.

ಸಭಾಪ್ರಸಂಗಿ 9:15

ಆಗ ಅದ ರಲ್ಲಿ ಒಬ್ಬ ಜ್ಞಾನಿಯಾದ ಬಡಮನುಷ್ಯನು ಕಾಣಿಸಿ ಕೊಂಡು ಅವನು ತನ್ನ ಜ್ಞಾನದಿಂದ ಆ ಪಟ್ಟಣವನ್ನು ತಪ್ಪಿಸಿದನು. ಆದರೂ ಆ ಬಡಮನುಷ್ಯನನ್ನು ಯಾವನೂ ಜ್ಞಾಪಕಮಾಡಿಕೊಳ್ಳಲಿಲ್ಲ.

ಸಭಾಪ್ರಸಂಗಿ 11:7

ನಿಜವಾಗಿ ಬೆಳಕು ಹಿತವಾಗಿಯೂ ಮತ್ತು ಸೂರ್ಯನನ್ನು ನೋಡುವದು ಕಣ್ಣುಗಳಿಗೆ ಮೆಚ್ಚಿಕೆಯಾಗಿಯೂ ಇರು ವದು.

ಲೂಕ 16:8

ಆಗ ಯಜಮಾನನು ಅನ್ಯಾಯಗಾರನಾದ ಆ ಮನೆವಾರ್ತೆಯವನು ಜಾಣತನ ಮಾಡಿದನೆಂದು ಅವನನ್ನು ಹೊಗಳಿದನು; ಯಾಕಂದರೆ ಈ ಲೋಕದ ಮಕ್ಕಳು ತಮ್ಮ ಸಂತತಿಯವರಲ್ಲಿ ಬೆಳಕಿನ ಮಕ್ಕಳಿಗಿಂತ ಜಾಣರಾಗಿದ್ದಾರೆ.

1 ತಿಮೋಥೆಯ 6:17

ಈ ಲೋಕದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿ ಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ಭರವಸ ವನ್ನಿಡದೆ ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲ ವನ್ನೂ ಹೇರಳವಾಗಿ ದಯಪಾಲಿಸುವ ಜೀವವುಳ್ಳ ದೇವರ ಮೇಲೆ ಭರವಸವನ್ನಿಡಬೇಕೆಂತಲೂ

Interlinear

Choose Theme