Home Bibles ಸಭಾಪ್ರಸಂಗಿ 7:17 · ಕನ್ನಡ ಬೈಬಲ್
ಸಭಾಪ್ರಸಂಗಿ 7:17 · ಕನ್ನಡ ಬೈಬಲ್

ನೀನು ಅತಿ ಯಾಗಿ ದುಷ್ಟನಾಗಿರಬೇಡ; ಇಲ್ಲವೆ ಮೂರ್ಖನಾಗಿರ ಬೇಡ; ನಿನ್ನ ಸಮಯಕ್ಕಿಂತ ಮೊದಲು ನೀನು ಯಾಕೆ ಸಾಯುವಿ?

Cross references

ಆದಿಕಾಂಡ 38:7

ಆದರೆ ಯೆಹೂದನ ಚೊಚ್ಚಲ ಮಗನಾದ ಏರನು ಕರ್ತನ ದೃಷ್ಟಿಯಲ್ಲಿ ದುಷ್ಟನಾಗಿದ್ದದರಿಂದ ಕರ್ತನು ಅವನನ್ನು ಸಾಯಿಸಿದನು.

1 ಸಮುವೇಲ 25:38

ಹೆಚ್ಚು ಕಡಿಮೆ ಹತ್ತು ದಿವಸಗಳಾದ ತರುವಾಯ ಏನಾಯಿತಂದರೆ, ಕರ್ತನು ನಾಬಾಲನನ್ನು ಹೊಡೆದದ್ದರಿಂದ ಅವನು ಸತ್ತನು.

ಯೋಬ 15:32

ಅವನ ಸಮಯಕ್ಕೆ ಮುಂಚೆಯೇ ಅದು ತೀರುವದು; ಅವನ ಕೊಂಬೆಯು ಹಸಿರಾಗುವದಿಲ್ಲ.

ಯೋಬ 22:16

ಅವರು ಆ ಕಾಲ ದಲ್ಲಿ ಕಡಿಯಲ್ಪಟ್ಟರು; ಅವರ ಅಸ್ತಿವಾರವು ಪ್ರವಾಹ ದಲ್ಲಿ ಕೊರೆದು ಹೋಯಿತು.

ಕೀರ್ತನೆಗಳು 55:23

ಓ ದೇವರೇ, ನೀನು ಅವರನ್ನು ನಾಶನದ ಕುಣಿಯಲ್ಲಿ ಇಳಿಯ ಮಾಡುವಿ. ಕೊಲೆಪಾತಕರೂ ಮೋಸಗಾರರೂ ತಮ್ಮ ಆಯುಷ್ಯದ ದಿವಸಗಳಲ್ಲಿ ಅರ್ದದಷ್ಟಾದರೂ ಜೀವಿ ಸುವದಿಲ್ಲ; ನಾನು ನಿನ್ನಲ್ಲಿ ಭರವಸವಿಡುತ್ತೇನೆ.

ಸಾಮೇತಿಗಳು 10:27

ಕರ್ತನ ಭಯವು ದಿನಗಳನ್ನು ಹೆಚ್ಚಿಸುತ್ತದೆ; ದುಷ್ಟರ ವರುಷ ಗಳು ಕಡಿಮೆ ಮಾಡಲ್ಪಡುವವು.

ಯೆರೆಮಿಯ 2:33

ಪ್ರೀತಿಯನ್ನು ಹುಡುಕುವ ಹಾಗೆ ನಿನ್ನ ಮಾರ್ಗವನ್ನು ಯಾಕೆ ಚಂದ ಮಾಡಿಕೊಳ್ಳುತ್ತೀ? ಕೆಟ್ಟ ಹೆಂಗಸರಿಗೂ ನಿನ್ನ ಮಾರ್ಗವನ್ನು ಕಲಿಸಿದ್ದೀ.

ಯೆಹೆಜ್ಕೇಲ 8:17

ಆಗ ಆತನು ನನಗೆ--ಓ ಮನುಷ್ಯಪುತ್ರನೇ, ನೋಡಿ ದೆಯಾ? ಅವರು ಇಲ್ಲಿ ಮಾಡುವ ಅಸಹ್ಯವಾದವುಗಳು ಯೆಹೂದನ ಮನೆತನದವರಿಗಲ್ಲವೇ? ಅವರು ದೇಶವನ್ನು ಹಿಂಸೆಯಿಂದ ತುಂಬಿಸಿದ್ದಲ್ಲದೆ ನನ್ನನ್ನು ಕೆಣಕಬೇಕೆಂದು ಮತ್ತೆ ಯತ್ನಿಸುತ್ತಿದ್ದಾರೆ. ನೋಡು, ಅವರ ಮೂಗಿಗೆ ಕೊಂಬೆಗಳನ್ನಿಟ್ಟು ಕೊಳ್ಳುತ್ತಾರೆ.ಆದದರಿಂದ ನಾನು ಸಹ ಉಗ್ರ ದಿಂದಲೇ ಇರುವೆನು. ನನ್ನ ಕಣ್ಣು ಕನಿಕರಿಸುವದೂ ಇಲ್ಲ, ನಾನು ಕಟಾಕ್ಷಿಸುವದೂ ಇಲ್ಲ, ಅವರು ನನ್ನ ಕಿವಿಗಳಲ್ಲಿ ಮಹಾಧ್ವನಿಯಿಂದ ಕಿರಿಚಿದರೂ ನಾನು ಕೇಳಿಸಿಕೊಳ್ಳುವದೂ ಇಲ್ಲ.

ಯೆಹೆಜ್ಕೇಲ 16:20

ಇದಾದ ಮೇಲೆ ನನಗೆ ಹುಟ್ಟಿದ್ದ ನನ್ನ ಕುಮಾರರನ್ನೂ ಕುಮಾರ್ತೆ ಯರನ್ನೂ ಅವರ ಆಹಾರಕ್ಕಾಗಿ ಅರ್ಪಿಸಿದಿ. ಈ ನಿನ್ನ ವ್ಯಭಿಚಾರ ಸಾಮಾನ್ಯವಾದದ್ದಲ್ಲ,

ಅಪೋಸ್ತಲರ ಕೃತ್ಯಗಳು 5:5

ಅನನೀಯನು ಈ ಮಾತುಗಳನ್ನು ಕೇಳಿ ಕೆಳಗೆ ಬಿದ್ದು ಪ್ರಾಣಬಿಟ್ಟನು; ಇವುಗಳನ್ನು ಕೇಳಿದವರೆಲ್ಲರಿಗೂ ಮಹಾಭಯ ಉಂಟಾ ಯಿತು.

ಅಪೋಸ್ತಲರ ಕೃತ್ಯಗಳು 5:10

ಕೂಡಲೆ ಆಕೆಯು ಅವನ ಪಾದಗಳ ಮುಂದೆ ಬಿದ್ದು ಪ್ರಾಣ ಬಿಟ್ಟಳು. ಆಗ ಆ ಯೌವನಸ್ಥರು ಒಳಗೆ ಬಂದು ಆಕೆಯು ಸತ್ತಿದ್ದನ್ನು ಕಂಡು ಹೊತ್ತುಕೊಂಡು ಹೋಗಿ ಆಕೆಯ ಗಂಡನ ಪಕ್ಕದಲ್ಲಿ ಹೂಣಿಟ್ಟರು.

ಅಪೋಸ್ತಲರ ಕೃತ್ಯಗಳು 12:23

ಅವನು ದೇವರಿಗೆ ಮಹಿಮೆ ಸಲ್ಲಿಸದೆ ಹೋದದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಹೊಡೆದನು; ಆಗ ಅವನನ್ನು ಹುಳಗಳು ತಿಂದದ್ದರಿಂದ ಅವನು ಪ್ರಾಣ ಬಿಟ್ಟನು.

ಅಪೋಸ್ತಲರ ಕೃತ್ಯಗಳು 16:28

ಆದರೆ ಪೌಲನು ಮಹಾಧ್ವನಿಯಿಂದ ಕೂಗಿ ಅವನಿಗೆ--ನೀನೇನೂ ಕೇಡು ಮಾಡಿಕೊಳ್ಳಬೇಡ; ನಾವೆಲ್ಲರೂ ಇಲ್ಲೇ ಇದ್ದೇವೆ ಎಂದು ಹೇಳಿದನು.

ಯಾಕೋಬ 1:21

ಆದಕಾರಣ ಎಲ್ಲಾ ಮಲಿನತೆಯನ್ನೂ ಎಲ್ಲಾ ದುಷ್ಟತನವನ್ನೂ ತೆಗೆದುಹಾಕಿ ಒಳಗೆ ಬೇರೂರಿರುವ ವಾಕ್ಯಕ್ಕೆ ನಮ್ರತೆ ಯಿಂದ ಎಡೆಕೊಡಿರಿ; ಅದು ನಿಮ್ಮ ಆತ್ಮಗಳನ್ನು ರಕ್ಷಿಸು ವದಕ್ಕೆ ಸಾಮರ್ಥ್ಯವುಳ್ಳದ್ದಾಗಿದೆ.

Interlinear

Choose Theme