Home Bibles ಸಭಾಪ್ರಸಂಗಿ 7:24 · ಕನ್ನಡ ಬೈಬಲ್
ಸಭಾಪ್ರಸಂಗಿ 7:24 · ಕನ್ನಡ ಬೈಬಲ್

ದೂರ ದಲ್ಲಿರುವದನ್ನೂ ಅಗಾಧದಲ್ಲಿರುವದನ್ನೂ ಯಾವನು ಕಂಡುಕೊಂಡಾನು?

Cross references

ದ್ವಿತೀಯೋಪದೇಶಕಾಂಡ 30:11

ನಿಶ್ಚಯವಾಗಿ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಈ ಆಜ್ಞೆಯು ನಿನಗೆ ಮರೆಯಾದದ್ದಲ್ಲ, ಇಲ್ಲವೆ ದೂರವಾದದ್ದಲ್ಲ.

ಯೋಬ 11:7

ದೇವರನ್ನು ಶೋಧಿಸಿ ಕಂಡುಕೊಳ್ಳುವಿಯೋ? ಸರ್ವಶಕ್ತನ ಸಂಪೂರ್ಣತ್ವವನ್ನು ನಿನ್ನಿಂದ ಕಂಡು ಹಿಡಿಯ ಲಾದೀತೆ?

ಯೋಬ 28:12

ಆದರೆ ಜ್ಞಾನವು ಎಲ್ಲಿ ದೊರಕುವದು? ಗ್ರಹಿಕೆ ಇರುವ ಸ್ಥಳ ಎಲ್ಲಿ?

ಯೋಬ 28:23

ದೇವರು ಅದರ ಮಾರ್ಗವನ್ನು ಗ್ರಹಿಸಿ ಕೊಂಡಿದ್ದಾನೆ; ಆತನೇ ಅದರ ಸ್ಥಳವನ್ನು ತಿಳಿದಿದ್ದಾನೆ.

ಯೋಬ 28:28

ಆತನು ಮನುಷ್ಯನಿಗೆ ಹೇಳಿದ್ದೇ ನಂದರೆ--ಇಗೋ, ಕರ್ತನ ಭಯವೇ ಜ್ಞಾನ; ಕೇಡಿನಿಂದ ತೊಲಗುವದೇ ಗ್ರಹಿಕೆ.

ಕೀರ್ತನೆಗಳು 36:6

ನಿನ್ನ ನೀತಿಯು ದೊಡ್ಡ ಪರ್ವತಗಳ ಹಾಗಿದೆ; ನಿನ್ನ ನ್ಯಾಯತೀರ್ಪುಗಳು ಮಹಾ ಅಗಾಧವೇ. ಓ ಕರ್ತನೇ, ಮನುಷ್ಯರನ್ನೂ ಮೃಗಗಳನ್ನೂ ಸಂರಕ್ಷಿಸುತ್ತೀ.

ಕೀರ್ತನೆಗಳು 139:6

ಇಂಥ ತಿಳುವಳಿಕೆಯು ನನಗೆ ಅತಿ ಅದ್ಭುತವಾಗಿದೆ; ಅದು ನನಗೆ ನಿಲುಕದಷ್ಟು ಉನ್ನತವಾಗಿದೆ.

ಯೆಶಾಯ 55:8

ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಲ್ಲ; ಇಲ್ಲವೆ ನಿಮ್ಮ ಮಾರ್ಗಗಳು ನನ್ನ ಮಾರ್ಗಗಳಲ್ಲ ಎಂದು ಕರ್ತನು ಹೇಳುತ್ತಾನೆ.

ರೋಮಾಪುರದವರಿಗೆ 11:33

ಹಾ, ದೇವರ ಜ್ಞಾನದ ಮತ್ತು ತಿಳುವಳಿಕೆಯ ಐಶ್ವರ್ಯವು ಎಷ್ಟೋ ಅಗಾಧ ವಾಗಿದೆ! ಆತನ ತೀರ್ಪುಗಳು ಪರಿಶೋಧನೆಗೂ ಆತನ ಮಾರ್ಗಗಳು ಕಂಡು ಹಿಡಿಯುವದಕ್ಕೂ ಅಸಾಧ್ಯ ವಾಗಿವೆ!

1 ತಿಮೋಥೆಯ 6:16

ಆತನೊಬ್ಬನೇ ಅಮರತ್ವವುಳ್ಳವನೂ ಯಾರೂ ಸವಿಾಪಿಸಲಾರದಂತ ಬೆಳಕಿನಲ್ಲಿ ವಾಸಿಸುವಾತನೂ ಆಗಿದ್ದಾನೆ; ಯಾವ ಮನುಷ್ಯನೂ ಆತನನ್ನು ಕಾಣಲಿಲ್ಲ; ಯಾರೂ ಕಾಣ ಲಾರರು; ಆತನಿಗೆ ಮಾನವೂ ನಿತ್ಯಾಧಿಕಾರವೂ ಇರಲಿ. ಆಮೆನ್‌.

Interlinear

Choose Theme