Home Bibles ☰ Books ಸಭಾಪ್ರಸಂಗಿ 7:25 · ಕನ್ನಡ ಬೈಬಲ್
ಸಭಾಪ್ರಸಂಗಿ 7:25 · ಕನ್ನಡ ಬೈಬಲ್

ಜ್ಞಾನದ ಮೂಲತತ್ವಗಳನ್ನೂ ಮೂಢತನದ ಕೆಟ್ಟತನವನ್ನೂ ಅಂದರೆ ಮೂಢತನ ವನ್ನೂ ಹುಚ್ಚುತನವನ್ನೂ ತಿಳುಕೊಳ್ಳುವಂತೆ ಪರೀಕ್ಷಿಸು ವವನಾಗಿಯೂ ನಾನು ನನ್ನ ಹೃದಯವನ್ನು ಪ್ರಯೋ ಗಿಸಿದೆನು.

Cross references

ಆದಿಕಾಂಡ 34:7

ಯಾಕೋಬನ ಮಕ್ಕಳು ಅದನ್ನು ಕೇಳಿದಾಗ ಅವರು ಹೊಲದಿಂದ ಬಂದರು. ಶೆಕೆಮನು ಯಾಕೋಬನ ಮಗಳ ಸಂಗಡ ಮಲಗಿ ಇಸ್ರಾಯೇಲಿ ನಲ್ಲಿ ಅವಮಾನಕರವಾದದ್ದನ್ನು ಮಾಡಿದ್ದರಿಂದ ಆ ಮನುಷ್ಯರು ವ್ಯಸನಪಟ್ಟು ಬಹಳ ಉರಿಗೊಂಡರು. ಅದು ಹಾಗೆ ಆಗಬಾರದಾಗಿತ್ತು.

ಯೆಹೋಶುವ 7:13

ನೀನು ಎದ್ದು ಜನರನ್ನು ಪರಿಶುದ್ಧ ಮಾಡಿ ಹೇಳ ಬೇಕಾದದ್ದೇನಂದರೆ--ನಾಳೆಗೆ ನಿಮ್ಮನ್ನು ಪರಿಶುದ್ಧ ಮಾಡಿಕೊಳ್ಳಿರಿ; ಇಸ್ರಾಯೇಲೇ, ನಿನ್ನ ಮಧ್ಯದಲ್ಲಿ ಶಾಪಕ್ಕೆ ಕಾರಣವಾದದ್ದು ಉಂಟು; ಅದನ್ನು ನಿಮ್ಮಲ್ಲಿಂದ ತೆಗೆದುಹಾಕುವ ಪರಿಯಂತರ ನೀನು ನಿನ್ನ ಶತ್ರುಗಳ ಮುಂದೆ ನಿಲ್ಲಲಾರಿರಿ ಎಂದು ಇಸ್ರಾಯೇಲ್‌ ಕರ್ತನಾದ ದೇವರು ಹೇಳುತ್ತಾನೆ.

2 ಸಮುವೇಲ 13:12

ಅದಕ್ಕವಳು--ನನ್ನ ಸಹೋದರನೇ, ಬೇಡ; ನನ್ನನ್ನು ಒತ್ತಾಯಮಾಡಬೇಡ; ಯಾಕಂದರೆ ಇಸ್ರಾಯೇಲಿನಲ್ಲಿ ಇಂಥಾ ಕಾರ್ಯಮಾಡಕೂಡದು; ಇಂಥಾ ಬುದ್ಧಿಹೀನ ವಾದ ಕೆಲಸ ಮಾಡಬೇಡ.

ಸಾಮೇತಿಗಳು 17:12

ಮೂರ್ಖತನದಲ್ಲಿ ಮುಳುಗಿ ರುವ ಮೂಢನಿಗೆ ಎದುರಾಗುವದಕ್ಕಿಂತಲೂ ಮರಿಗ ಳನ್ನು ಕಳೆದುಕೊಂಡ ಕರಡಿಗೆ ಎದುರಾಗುವದು ಲೇಸು.

ಸಾಮೇತಿಗಳು 26:11

ತಾನು ಕಕ್ಕಿದ್ದಕ್ಕೆ ನಾಯಿಯು ತಿರುಗುವಂತೆ ಮೂಢನು ತನ್ನ ಮೂಢತನಕ್ಕೆ ಹಿಂದಿರುಗುತ್ತಾನೆ.

ಸಭಾಪ್ರಸಂಗಿ 1:13

ಆಕಾಶದ ಕೆಳಗೆ ನಡೆಯುವ ಎಲ್ಲವುಗಳ ವಿಷಯವಾಗಿ ಜ್ಞಾನ ದಿಂದ ವಿಚಾರಿಸಿ ವಿಮರ್ಶಿಸುವದಕ್ಕೆ ನಾನು ನನ್ನ ಮನಸ್ಸು ಇಟ್ಟೆನು; ಇದರ ವಿಷಯವಾದ ಪ್ರಯಾಸವು ಮನಸ್ಸಿನಲ್ಲಿ ಯೋಚಿಸುವಂತೆ ದೇವರು ಮನುಷ್ಯ ಮಕ್ಕಳಿಗೆ ಈ ಕಷ್ಟಕರವಾದ ಪ್ರಯಾಸವನ್ನು ಕೊಟ್ಟಿ ದ್ದಾನೆ.

ಸಭಾಪ್ರಸಂಗಿ 1:17

ಜ್ಞಾನ ವನ್ನೂ ಹುಚ್ಚುತನವನ್ನೂ ಬುದ್ಧಿಹೀನತೆಯನ್ನೂ ತಿಳು ಕೊಳ್ಳುವಂತೆ ನಾನು ಮನಸ್ಸಿಟ್ಟೆನು; ಇದು ಸಹ ಮನಸ್ಸಿಗೆ ಆಯಾಸವೆಂದು ನಾನು ಅರಿತುಕೊಂಡೆನು.ಬಹು ಜ್ಞಾನವಿದ್ದಲ್ಲಿ ದುಃಖ; ತಿಳುವಳಿಕೆಯನ್ನು ಹೆಚ್ಚಿಸಿಕೊಳ್ಳು ವವನು ತನ್ನ ವ್ಯಥೆಯನ್ನು ಹೆಚ್ಚಿಸಿಕೊಳ್ಳುತ್ತಾನೆ.

ಸಭಾಪ್ರಸಂಗಿ 2:1

ನಾನು ನನ್ನ ಹೃದಯದಲ್ಲಿ--ಹೋಗು, ನಾನು ನಿನ್ನನ್ನು ಸಂತೋಷದ ಮೂಲಕ ಪರೀಕ್ಷಿಸುವೆನು; ಆದಕಾರಣ ಸುಖವನ್ನು ಅನುಭವಿಸು ಎಂದು ಅಂದುಕೊಂಡೆನು. ಇಗೋ, ಇದು ಕೂಡ ವ್ಯರ್ಥವೇ.

ಸಭಾಪ್ರಸಂಗಿ 2:12

ಜ್ಞಾನವನ್ನೂ ಹುಚ್ಚುತನವನ್ನೂ ಮೂಢತೆಯನ್ನೂ ನೋಡುವದಕ್ಕೆ ನಾನು ತಿರುಗಿಕೊಂಡೆನು; ಅರಸನ ತರುವಾಯ ಬರುವ ಮನುಷ್ಯನು ಏನು ಮಾಡಾನು? ಮೊದಲಿದ್ದದ್ದು ಆಗಲೇ ನಡೆಯಿತು.

ಸಭಾಪ್ರಸಂಗಿ 2:15

ಆಗ ನಾನು ನನ್ನ ಹೃದಯದಲ್ಲಿ --ಮೂಢನಿಗೆ ಸಂಭವಿಸುವಂತೆ ನನಗೂ ಸಂಭವಿಸು ತ್ತದೆ. ಇದರಿಂದ ಯಾಕೆ ನಾನು ಹೆಚ್ಚು ಜ್ಞಾನದಿಂದ ಇದ್ದೇನೆ ಎಂದು ಅಂದುಕೊಂಡೆನು. ಆಗ ನಾನು ಇದೂ ವ್ಯರ್ಥವೆಂದು ನನ್ನ ಹೃದಯದಲ್ಲಿ ಅಂದು ಕೊಂಡೆನು.

ಸಭಾಪ್ರಸಂಗಿ 2:20

ಆದದರಿಂದ ಸೂರ್ಯನ ಕೆಳಗೆ ಪ್ರಯಾಸ ಪಟ್ಟ ಎಲ್ಲಾ ಪ್ರಯಾಸದ ವಿಷಯವಾಗಿ ನನ್ನ ಹೃದಯವು ನಿರಾಶೆಗೊಳ್ಳುವಂತೆ ನಾನು ತಿರುಗಾಡಿದೆನು.

ಸಭಾಪ್ರಸಂಗಿ 3:16

ಕೆಟ್ಟದ್ದು ಇತ್ತೆಂದು ಸೂರ್ಯನ ಕೆಳಗೆ ನ್ಯಾಯ ತೀರ್ಪಿನ ಸ್ಥಳವನ್ನು ಮತ್ತು ದುಷ್ಕೃತ್ಯ ಇದೆಯೆಂದು ನೀತಿಯ ಸ್ಥಾನವನ್ನು ನಾನು ಕಂಡೆನು.

ಸಭಾಪ್ರಸಂಗಿ 7:27

ಇಗೋ, ಲೆಕ್ಕವನ್ನು ಕಂಡುಹಿಡಿಯಲು ಒಂದೊಂದನ್ನಾಗಿ ಎಣಿಸಿ ನಾನು ಇದನ್ನು ಕಂಡುಕೊಂಡೆ ನೆಂದು ಪ್ರಸಂಗಿ ಹೇಳುತ್ತಾನೆ:

ಸಭಾಪ್ರಸಂಗಿ 9:1

ನಾನು ಇವೆಲ್ಲವುಗಳ ಮೇಲೆ ಮನಸ್ಸಿಟ್ಟು ಇವೆಲ್ಲವುಗಳಲ್ಲಿ ನಾನು ತೀರ್ಮಾನಿಸಿ ದ್ದೇನಂದರೆ--ನೀತಿವಂತನು ಮತ್ತು ಜ್ಞಾನಿ ಇವರ ಕೆಲಸಗಳು ದೇವರ ಕೈಯಲ್ಲಿವೆ; ಯಾವ ಮನುಷ್ಯನೂ ಅವರ ಮುಂದಿರುವ ಎಲ್ಲವುಗಳನ್ನು, ಅಂದರೆ ಪ್ರೀತಿ ಯನ್ನು ಅಥವಾ ದ್ವೇಷವನ್ನು ತಿಳಿಯಲಾರನು.

ಸಭಾಪ್ರಸಂಗಿ 10:13

ಅವನ ಬಾಯಿಯು ಮಾತುಗಳು ಆರಂಭದಲ್ಲಿ ಮೂಢತನ ದವುಗಳಾಗಿವೆ; ಅವನ ಮಾತಿನ ಅಂತ್ಯವು ಕೆಟ್ಟ ಮೂರ್ಖತನವಾಗಿದೆ.

ಯೆರೆಮಿಯ 12:1

ಕರ್ತನು ನನಗೆ--ನೀನು ಹೋಗಿ ನಾರಿನ ದಟ್ಟಿಯನ್ನು ತೆಗೆದುಕೊಂಡು ನಿನ್ನ ನಡುವಿಗೆ ಕಟ್ಟು, ಆದರೆ ಅದನ್ನು ನೀರಿನಲ್ಲಿ ಹಾಕಬೇಡ ಅಂದನು;

Interlinear

Choose Theme