Home Bibles ಸಭಾಪ್ರಸಂಗಿ 8:14 · ಕನ್ನಡ ಬೈಬಲ್
ಸಭಾಪ್ರಸಂಗಿ 8:14 · ಕನ್ನಡ ಬೈಬಲ್

ಭೂಮಿಯ ಮೇಲೆ ಮಾಡುವ ಒಂದು ವ್ಯರ್ಥವಾದದ್ದಿದೆ; ದುಷ್ಟರ ಕೆಲಸದ ಪ್ರಕಾರ ಅನುಭವಿಸುವ ನೀತಿವಂತರಿದ್ದಾರೆ; ನೀತಿವಂತರ ಕೆಲಸದ ಪ್ರಕಾರ ಅನುಭವಿಸುವ ದುಷ್ಟರಿ ದ್ದಾರೆ. ಇದೂ ಸಹ ವ್ಯರ್ಥವೆಂದು ನಾನು ಹೇಳಿದೆನು.

Cross references

ಯೋಬ 1:22

ಇದೆಲ್ಲಾದರಲ್ಲಿ ಯೋಬನು ಪಾಪಮಾಡಲಿಲ್ಲ. ದೇವರ ಮೇಲೆ ತಪ್ಪನ್ನು ಹೊರಿಸಲೂ ಇಲ್ಲ.

ಯೋಬ 9:22

ಇದೊಂದು ವಿಷಯ ಆದದರಿಂದ ನಾನು ಅದನ್ನು ಹೇಳಿದ್ದೇನೆ. ಪರಿಪೂರ್ಣರನ್ನೂ ಕೆಟ್ಟ ವರನ್ನೂ ಆತನು ನಾಶಮಾಡುತ್ತಾನೆ.

ಯೋಬ 21:7

ದುಷ್ಟರು ಯಾಕೆ ಬದುಕಿ ಮುದುಕರಾಗಿ ಹೌದು, ತ್ರಾಣದಿಂದ ಬಲಗೊಳ್ಳುತ್ತಾರೆ?

ಯೋಬ 21:17

ಎಷ್ಟು ಸಾರಿ ದುಷ್ಟರ ದೀಪವು ಆರಿ ಹೋಗುತ್ತದೆ; ಅವರ ನಾಶನವು ಅವರ ಮೇಲೆ ಬರುತ್ತದೆ; ದೇವರು ವೇದನೆಗಳನ್ನು ತನ್ನ ಕೋಪ ದಿಂದ ಹಂಚುತ್ತಾನೆ.

ಯೋಬ 24:21

ಹೆರದ ಬಂಜೆಯನ್ನು ಅವನು ಉಪದ್ರವಪಡಿಸಿ ದನು; ವಿಧವೆಗೆ ಉಪಕಾರಮಾಡಲಿಲ್ಲ.

ಯೋಬ 27:12

ಇಗೋ, ನೀವೆಲ್ಲರೂ ದೃಷ್ಟಿಸಿದ್ದೀರಿ; ಯಾಕೆ ಈ ಪ್ರಕಾರ ಕೇವಲ ವ್ಯರ್ಥವಾಗಿ ಹೋಗಿ ದ್ದೀರಿ?

ಕೀರ್ತನೆಗಳು 73:3

ದುಷ್ಟರ ಅಭಿವೃದ್ಧಿಯನ್ನು ನೋಡಿದಾಗ ಮೂರ್ಖರ ಮೇಲೆ ಹೊಟ್ಟೇಕಿಚ್ಚು ಪಟ್ಟೆನು.

ಕೀರ್ತನೆಗಳು 73:12

ಇಗೋ, ಇಹಲೋಕದಲ್ಲಿ ವೃದ್ಧಿಯಾಗುವ ದುಷ್ಟರು ಇವರೇ, ಐಶ್ವರ್ಯದಲ್ಲಿ ಇವರು ಹೆಚ್ಚುತ್ತಾರೆ.

ಸಭಾಪ್ರಸಂಗಿ 2:14

ಜ್ಞಾನಿಯ ಕಣ್ಣುಗಳು ಅವನ ತಲೆಯಲ್ಲಿರುತ್ತವೆ. ಬುದ್ಧಿಹೀನನು ಕತ್ತಲೆಯಲ್ಲಿ ನಡೆಯುತ್ತಾನೆ; ಅವರೆಲ್ಲರಿಗೂ ಒಂದೇ ಗತಿಯು ಸಂಭವಿಸುವದೆಂದು ನನ್ನಷ್ಟಕ್ಕೆ ನಾನೇ ಗ್ರಹಿಸಿ ಕೊಂಡೆನು.

ಸಭಾಪ್ರಸಂಗಿ 4:4

ತಿರುಗಿ ಎಲ್ಲಾ ಪ್ರಯಾಸಕ್ಕಾಗಿಯೂ ಪ್ರತಿಯೊಂದು ಒಳ್ಳೆಯ ಕಾರ್ಯಕ್ಕಾಗಿಯೂ ಮನುಷ್ಯನು ತನ್ನ ನೆರೆಯವನ ಮೇಲೆ ಅಸೂಯೆ ಪಡುತ್ತಾನೆಂದೂ ನಾನು ತಿಳುಕೊಂಡೆನು. ಇದೂ ಕೂಡ ವ್ಯರ್ಥವೂ ಪ್ರಾಣಕ್ಕೆ ಆಯಾಸಕರವೂ ಆಗಿದೆ.

ಸಭಾಪ್ರಸಂಗಿ 4:8

ಎರಡನೆಯವನಿಲ್ಲದ ಒಬ್ಬೊಂಟಿಗನು ಒಬ್ಬನಿದ್ದಾನೆ; ಹೌದು, ಅವನಿಗೆ ಮಗುವಾಗಲೀ ಸಹೋದರನಾಗಲೀ ಇಲ್ಲ; ಆದರೂ ಅವನ ಪ್ರಯಾಸಕ್ಕೆ ಕೊನೆಯಿಲ್ಲ. ಅಲ್ಲದೆ ಐಶ್ವರ್ಯ ದಿಂದ ಅವನ ಕಣ್ಣು ತೃಪ್ತಿಹೊಂದದು; ಮಾತ್ರವಲ್ಲದೆ ಅವನು--ನಾನು ಯಾರಿಗೋಸ್ಕರ ಕಷ್ಟಪಟ್ಟು ಪ್ರಾಣ ವನ್ನು ಅದಕ್ಕೆ ಸುಖವಿಲ್ಲದ ಹಾಗೆ ಕೊರೆತೆಪಡಿಸು ತ್ತೇನೆ; ಎಂದು ಅವನು ಅಂದುಕೊಳ್ಳುವನು. ಇದು ಕೂಡ ವ್ಯರ್ಥವೇ; ಹೌದು, ವ್ಯಥೆಯಿಂದಾದ ಪ್ರಯಾಸವೇ.

ಸಭಾಪ್ರಸಂಗಿ 7:15

ನನ್ನ ವ್ಯರ್ಥದ ದಿನಗಳಲ್ಲಿ ಎಲ್ಲಾ ವಿಷಯಗಳನ್ನು ನಾನು ನೋಡಿದ್ದೇನೆ; ನೀತಿವಂತನು ತನ್ನ ನೀತಿಯಲ್ಲಿ ನಾಶವಾಗುತ್ತಾನೆ. ದುಷ್ಟನು ತನ್ನ ದುಷ್ಟತನದಲ್ಲಿ ತನ್ನ ಜೀವಮಾನವನ್ನು ಹೆಚ್ಚಿಸಿಕೊಳ್ಳುತ್ತಾನೆ.

ಸಭಾಪ್ರಸಂಗಿ 9:1

ನಾನು ಇವೆಲ್ಲವುಗಳ ಮೇಲೆ ಮನಸ್ಸಿಟ್ಟು ಇವೆಲ್ಲವುಗಳಲ್ಲಿ ನಾನು ತೀರ್ಮಾನಿಸಿ ದ್ದೇನಂದರೆ--ನೀತಿವಂತನು ಮತ್ತು ಜ್ಞಾನಿ ಇವರ ಕೆಲಸಗಳು ದೇವರ ಕೈಯಲ್ಲಿವೆ; ಯಾವ ಮನುಷ್ಯನೂ ಅವರ ಮುಂದಿರುವ ಎಲ್ಲವುಗಳನ್ನು, ಅಂದರೆ ಪ್ರೀತಿ ಯನ್ನು ಅಥವಾ ದ್ವೇಷವನ್ನು ತಿಳಿಯಲಾರನು.

ಸಭಾಪ್ರಸಂಗಿ 10:5

ಆಳುವ ವನ ಸಮ್ಮುಖದಿಂದ ಹೊರಟು ಬರುವ ತಪ್ಪಿನ ಹಾಗಿ ರುವ ಒಂದು ಕೇಡನ್ನು ನಾನು ಸೂರ್ಯನ ಕೆಳಗೆ ನೋಡಿದ್ದೇನೆ.

ಯೆರೆಮಿಯ 12:1

ಕರ್ತನು ನನಗೆ--ನೀನು ಹೋಗಿ ನಾರಿನ ದಟ್ಟಿಯನ್ನು ತೆಗೆದುಕೊಂಡು ನಿನ್ನ ನಡುವಿಗೆ ಕಟ್ಟು, ಆದರೆ ಅದನ್ನು ನೀರಿನಲ್ಲಿ ಹಾಕಬೇಡ ಅಂದನು;

ಮಲಾಕಿ 3:15

ಈಗ ನಾವು ಗರ್ವಿಷ್ಠ ರನ್ನು ಭಾಗ್ಯವಂತರೆಂದನ್ನುತ್ತೇವೆ; ಹೌದು, ದುಷ್ಟತ್ವ ಮಾಡುವವರು ಅಭಿವೃದ್ಧಿಯಾಗುತ್ತಾರೆ; ಹೌದು, ದೇವರನ್ನು ಪರೀಕ್ಷಿಸುವವರೇ ರಕ್ಷಿಸಲ್ಪಟ್ಟಿದ್ದಾರೆ ಎಂದು ಹೇಳಿದ್ದೀರಿ.

Interlinear

Choose Theme