Home Bibles ಸಭಾಪ್ರಸಂಗಿ 8:2 · ಕನ್ನಡ ಬೈಬಲ್
ಸಭಾಪ್ರಸಂಗಿ 8:2 · ಕನ್ನಡ ಬೈಬಲ್

ನಾನು ನಿಮಗೆ--ದೇವರ ಮೇಲೆ ಆಣೆಯಿಟ್ಟು ಅರಸನ ಆಜ್ಞೆಯನ್ನು ಕೈಕೊಳ್ಳಿರಿ ಎಂದು ಆಲೋಚನೆ ಹೇಳಿಕೊಡುತ್ತೇನೆ.

Cross references

ನಿರ್ಗಮಕಾಂಡ 22:11

ತಾನು ತನ್ನ ನೆರೆಯವನ ವಸ್ತುವನ್ನು ತೆಗೆದುಕೊಳ್ಳಲಿಲ್ಲವೆಂದು ಅವರಿಬ್ಬರ ಮಧ್ಯದಲ್ಲಿ ಕರ್ತನ ಮೇಲೆ ಪ್ರಮಾಣ ಮಾಡಬೇಕು. ಅದನ್ನು (ಪಶುವಿನ) ಯಜಮಾನನು ಒಪ್ಪಿದರೆ ಅವನು ಬದಲುಕೊಡಬಾರದು.

1 ಸಮುವೇಲ 14:26

ಜನರು ಆ ಅಡವಿಯಲ್ಲಿ ಹೋಗುವಾಗ ಇಗೋ, ಜೇನು ತುಪ್ಪ ಸುರಿಯುತ್ತಿತ್ತು; ಆದರೆ ಜನರು ಆ ಆಣೆಯ ನಿಮಿತ್ತ ಭಯಪಟ್ಟದ್ದ ರಿಂದ ಒಬ್ಬನಾದರೂ ತನ್ನ ಬಾಯಿಗೆ ಹಾಕಿಕೊಳ್ಳಲಿಲ್ಲ.

2 ಸಮುವೇಲ 21:7

ಆದರೆ ತಮಗೂ ದಾವೀದ ನಿಗೂ ಸೌಲನ ಮಗನಾದ ಯೋನಾತಾನನಿಗೂ ಕರ್ತ ನನ್ನು ಕುರಿತು ಮಾಡಿದ ಪ್ರಮಾಣಕ್ಕೋಸ್ಕರ ಅರಸನು ಸೌಲನ ಮೊಮ್ಮಗನೂ ಯೋನಾತಾನನ ಮಗನೂ ಆದ ಮೆಫೀಬೋಶೆತನನ್ನು ಉಳಿಸಿ

1 ಅರಸುಗಳು 2:43

ನೀನು ಕರ್ತನ ಆಣೆ ಯನ್ನೂ ನಾನು ನಿನಗೆ ಆಜ್ಞಾಪಿಸಿದ ಆಜ್ಞೆಯನ್ನೂ ನೀನು ಕೈಕೊಳ್ಳದೆ ಇದ್ದದ್ದೇನು ಅಂದನು.

1 ದಿನವೃತ್ತಾಂತ 29:24

ಎಲ್ಲಾ ಪ್ರಧಾನರೂ ಪರಾಕ್ರಮಶಾಲಿಗಳೂ ಅರಸನಾದ ದಾವೀದನ ಸಮಸ್ತ ಕುಮಾರರೂ ಅರಸನಾದ ಸೊಲೊ ಮೋನನ ಕೆಳಗೆ ಒಪ್ಪಿಸಿಕೊಟ್ಟರು.

ಸಾಮೇತಿಗಳು 24:21

ನನ್ನ ಮಗನೇ, ಕರ್ತನಿಗೂ ಅರಸನಿಗೂ ಭಯಪಡು; ಭಯಪಡದವರ ಗೊಡವೆಗೆ ಹೋಗ ಬೇಡ.

ಯೆಹೆಜ್ಕೇಲ 17:13

ಅರಸನ ಸಂತಾನ ದವರನ್ನು ಕರೆದುಕೊಂಡು ಅವನ ಸಂಗಡ ಒಡಂಬಡಿಕೆ ಮಾಡಿ ಅವನಿಂದ ಪ್ರಮಾಣಮಾಡಿಸಿ ದೇಶದ ಬಲಿಷ್ಠರನ್ನು ತೆಗೆದುಕೊಂಡು ಹೋಗಿದ್ದಾನೆ.

ರೋಮಾಪುರದವರಿಗೆ 13:1

ಪ್ರತಿಯೊಬ್ಬನು ತನ್ನ ಮೇಲಿರುವ ಅಧಿಕಾರಿಗಳಿಗೆ ಅಧೀನನಾಗಿರಲಿ; ಯಾಕಂದರೆ ದೇವರಿಂದ ಹೊರತು ಒಬ್ಬರಿಗೂ ಅಧಿಕಾರವಿರುವದಿಲ್ಲ; ಇರುವ ಅಧಿಕಾರಿಗಳು ದೇವ ರಿಂದ ನೇಮಿಸಲ್ಪಟ್ಟವರು.

ತೀತ 3:1

ದೊರೆತನಗಳಿಗೂ ಅಧಿಕಾರಿಗಳಿಗೂ ಒಳಗಾಗಿ ನ್ಯಾಯಾಧಿಪತಿಗಳಿಗೆ ವಿಧೇಯ ರಾಗಿರಬೇಕೆಂತಲೂ ಪ್ರತಿಯೊಂದು ಸತ್ಕ್ರಿಯೆಗೆ ಸಿದರಾಗಿರಬೇಕೆಂತಲೂ

1 ಪೇತ್ರ 2:13

ಮನುಷ್ಯನ ಪ್ರತಿಯೊಂದು ಕಟ್ಟಳೆಗೂ ಕರ್ತನ ನಿಮಿತ್ತ ನೀವು ಅಧೀನರಾಗಿರ್ರಿ. ಅರಸನು ಸರ್ವಾಧಿಕಾರಿ ಎಂತಲೂ

Interlinear

Choose Theme