Home Bibles ☰ Books ಸಭಾಪ್ರಸಂಗಿ 8:6 · ಕನ್ನಡ ಬೈಬಲ್
ಸಭಾಪ್ರಸಂಗಿ 8:6 · ಕನ್ನಡ ಬೈಬಲ್

ಪ್ರತಿಯೊಂದು ಕಾರ್ಯಕ್ಕೂ ಕಾಲ ಮತ್ತು ನ್ಯಾಯಗಳಿವೆ, ಆದದರಿಂದ ಮನುಷ್ಯನ ಕಷ್ಟವು ಅವನ ಮೇಲೆ ದೊಡ್ಡದಾಗಿ ಘೋರವಾಗಿದೆ.

Cross references

ಯೋಬ 10:13

ಆದಾಗ್ಯೂ ಇವುಗ ಳನ್ನು ನಿನ್ನ ಹೃದಯದಲ್ಲಿ ಮರೆಮಾಡಿದಿ; ಇದು ನಿನ್ನ ಬಳಿಯಲ್ಲಿ ಇದೆ ಎಂದು ತಿಳಿದಿದ್ದೇನೆ.

ಯೋಬ 33:17

ಮನುಷ್ಯ ನನ್ನು ಅವನ ಉದ್ದೇಶದಿಂದ ತೊಲಗಿಸುವದಕ್ಕೂ ಮನುಷ್ಯನ ಗರ್ವವನ್ನು ಅಡಗಿಸುವದಕ್ಕೂ ಹಾಗೆ ಮಾಡುತ್ತಾನೆ.

ಯೋಬ 33:19

ಅವನು ತನ್ನ ಹಾಸಿಗೆಯಲ್ಲಿ ನೋವಿನಿಂದ ಶಿಕ್ಷಿಸ ಲ್ಪಡುತ್ತಾನೆ; ಅವನ ಎಲುಬುಗಳಿಗೆಲ್ಲಾ ಕಠಿಣವಾದ ನೋವು ಉಂಟು.

ಸಭಾಪ್ರಸಂಗಿ 3:1

ಆಕಾಶದ ಕೆಳಗೆ ಪ್ರತಿಯೊಂದು ಕಾರ್ಯಕ್ಕೂ ಒಂದು ಕಾಲವಿದೆ; ಪ್ರತಿಯೊಂದು ಉದ್ದೇಶಕ್ಕೂ ಒಂದು ಸಮಯವಿದೆ.

ಸಭಾಪ್ರಸಂಗಿ 3:11

ತನ್ನ ಸಮಯದಲ್ಲಿ ಪ್ರತಿಯೊಂದನ್ನು ಆತನು ಸುಂದರವಾಗಿ ಮಾಡಿದ್ದಾನೆ. ಆದಿಯಿಂದ ಅಂತ್ಯದ ವರೆಗೂ ದೇವರು ನಡಿಸುವ ಕೆಲಸವನ್ನು ಯಾವ ಮನುಷ್ಯನೂ ಗ್ರಹಿಸಲಾರದಂತೆ ಅವರ ಹೃದಯದಲ್ಲಿ ಆತನು ಲೋಕವನ್ನು ಇಟ್ಟಿದ್ದಾನೆ.

ಸಭಾಪ್ರಸಂಗಿ 3:17

ನಾನು ನನ್ನ ಹೃದಯದಲ್ಲಿ -- ನೀತಿವಂತರನ್ನೂ ದುಷ್ಟರನ್ನೂ ದೇವರು ತೀರ್ಪುಮಾಡುವನು; ಪ್ರತಿಯೊಂದು ಉದ್ದೇ ಶಕ್ಕೂ ಪ್ರತಿಯೊಂದು ಕೆಲಸಕ್ಕೂ ಸಮಯವಿದೆ ಎಂದು ಅಂದುಕೊಂಡೆನು.

ಸಭಾಪ್ರಸಂಗಿ 7:13

ದೇವರ ಕಾರ್ಯವನ್ನು ಯೋಚಿಸು; ಆತನು ಡೊಂಕು ಮಾಡಿದ್ದನ್ನು ಯಾವನು ನೆಟ್ಟಗೆ ಮಾಡಲು ಶಕ್ತನು.

ಸಭಾಪ್ರಸಂಗಿ 11:9

ಓ ಯೌವನಸ್ಥನೇ, ನಿನ್ನ ಯೌವನದಲ್ಲಿ ಸಂತೋಷಪಡು. ನಿನ್ನ ಯೌವನದ ದಿನಗಳಲ್ಲಿ ನಿನ್ನ ಹೃದಯವು ನಿನ್ನನ್ನು ಆನಂದಪಡಿಸಲಿ; ನೀನು ನಿನ್ನ ಹೃದಯದ ಮಾರ್ಗಗಳಲ್ಲಿಯೂ ನಿನ್ನ ಕಣ್ಣುಗಳ ನೋಟ ದಲ್ಲಿಯೂ ನಡೆ; ಆ ಎಲ್ಲಾ ಸಂಗತಿಗಳಿಗಾಗಿ ದೇವರು ನಿನ್ನನ್ನು ನ್ಯಾಯತೀರ್ಪಿಗೆ ತರುವನೆಂದು ತಿಳಿದುಕೋ.ಆದಕಾರಣ ನಿನ್ನ ಹೃದಯದಿಂದ ದುಃಖವನ್ನು ತೆಗೆದು ಹಾಕು; ನಿನ್ನ ಶರೀರದಿಂದ ಕೆಟ್ಟದ್ದನ್ನು ತೆಗೆದುಬಿಡು; ಬಾಲ್ಯವೂ ಯೌವನವೂ ವ್ಯರ್ಥವಾಗಿವೆ.

ಯೆಶಾಯ 3:11

ಕೆಡುಕರಿಗೆ ಅಯ್ಯೋ! ಅವರಿಗೆ ಕೇಡೇ ಇರಲಿ; ಅವನ ಕೈಗಳ ಪ್ರತಿಫಲವು ಅವನಿಗೆ ಕೊಡಲ್ಪಡುವದು.

ಯೆಶಾಯ 22:12

ಆ ದಿವಸದಲ್ಲಿ ಸೈನ್ಯಗಳ ದೇವರಾದ ಕರ್ತನು --ಅಳಬೇಕೆಂದು, ದುಃಖಿಸಬೇಕೆಂದು, ತಲೆಬೋಳಿಸಿ ಕೊಳ್ಳಬೇಕೆಂದು, ಗೋಣೀತಟ್ಟನ್ನು ಸುತ್ತಿಕೊಳ್ಳಬೇ ಕೆಂದು ಆತನು ಕರೆದನು.

ಲೂಕ 13:25

ಮನೇಯಜಮಾನನು ಒಂದು ಸಾರಿ ಎದ್ದು ಬಾಗಲನ್ನು ಮುಚ್ಚಿಕೊಂಡರೆ ನೀವು ಹೊರಗೆ ನಿಂತು ಕೊಂಡು ಬಾಗಲನ್ನು ತಟ್ಟುತ್ತಾ--ಕರ್ತನೇ, ಕರ್ತನೇ, ನಮಗಾಗಿ ತೆರೆ ಎಂದು ಹೇಳುವದಕ್ಕೆ ಆರಂಭಿಸಿದಾಗ ಆತನು ನಿಮಗೆ ಪ್ರತ್ಯುತ್ತರವಾಗಿ--ನೀವು ಎಲ್ಲಿಯ ವರೋ ನಾನರಿಯೆ ಎಂದು ಹೇಳುವನು.

ಲೂಕ 17:26

ನೋಹನ ದಿವಸಗಳಲ್ಲಿ ಹೇಗೆ ಇತ್ತೋ ಅದೇ ರೀತಿಯಲ್ಲಿ ಮನುಷ್ಯಕುಮಾರನ ದಿವಸಗಳಲ್ಲಿಯೂ ಇರುವದು.

ಲೂಕ 19:42

ನೀನು ಈ ನಿನ್ನ ದಿನದಲ್ಲಿಯಾದರೂ ನಿನ್ನ ಸಮಾ ಧಾನಕ್ಕೆ ಸಂಬಂಧಪಟ್ಟವುಗಳನ್ನು ತಿಳಿದುಕೊಳ್ಳಬೇಕಾ ಗಿತ್ತು; ಆದರೆ ಈಗ ಅವುಗಳು ನಿನ್ನ ಕಣ್ಣುಗಳಿಗೆ ಮರೆಯಾಗಿವೆ.

ಹೆಬ್ರಿಯರಿಗೆ 3:7

ಆದದರಿಂದ(ಪವಿತ್ರಾತ್ಮನು ಹೇಳುವ ಪ್ರಕಾರ--ನೀವು ಈ ದಿನ ದೇವರ ಶಬ್ದಕ್ಕೆ ಕಿವಿಗೊಟ್ಟರೆ

Interlinear

Choose Theme