Home Bibles ಎಫೆಸದವರಿಗೆ 1:23 · ಕನ್ನಡ ಬೈಬಲ್
ಎಫೆಸದವರಿಗೆ 1:23 · ಕನ್ನಡ ಬೈಬಲ್

ಸಭೆಯು ಆತನ ದೇಹವಾಗಿದೆ; ಎಲ್ಲವನ್ನು ಎಲ್ಲಾ ಸಂಬಂಧದಲ್ಲಿ ವ್ಯಾಪಿಸುವಾತನಿಂದ ಅದು ಪರಿಪೂರ್ಣತೆಯುಳ್ಳ ದಾಗಿದೆ.

Cross references

ಯೋಹಾನ 1:16

ಆತನ ಸಂಪೂರ್ಣತೆಯೊಳಗಿಂದ ನಾವೆಲ್ಲರೂ ಕೃಪೆಗಾಗಿ ಕೃಪೆಯನ್ನು ಹೊಂದಿದೆವು.

ರೋಮಾಪುರದವರಿಗೆ 13:5

ಆದಕಾರಣ ದಂಡನೆಯಾದೀತೆಂದು ಮಾತ್ರವಲ್ಲದೆ ಮನಸ್ಸಿನ ನಿಮಿತ್ತವಾಗಿಯೂ (ಅವನಿಗೆ) ಅಧೀನ ನಾಗುವದು ಅವಶ್ಯ.

1 ಕೊರಿಂಥದವರಿಗೆ 12:6

ಾರ್ಯಗಳಲ್ಲಿ ಬೇರೆ ಬೇರೆ ವಿಧಗಳುಂಟು, ಆದರೆ ಸರ್ವರಲ್ಲಿಯೂ ಸರ್ವಕಾರ್ಯಗಳನ್ನು ಸಾಧಿಸುವ ದೇವರು ಒಬ್ಬನೇ.

1 ಕೊರಿಂಥದವರಿಗೆ 12:12

ಹೇಗೆ ದೇಹವು ಒಂದಾಗಿದ್ದರೂ ಅದಕ್ಕಿರುವ ಅಂಗಗಳು ಅನೇಕವಾಗಿವೆಯೋ, ಹೇಗೆ ಆ ದೇಹದ ಅಂಗಗಳೆಲ್ಲವು ಅನೇಕವಾಗಿದ್ದು ಒಂದೇ ದೇಹವಾಗಿ ರುವದೋ, ಹಾಗೆಯೇ ಕ್ರಿಸ್ತನು ಇದ್ದಾನೆ.

1 ಕೊರಿಂಥದವರಿಗೆ 15:28

ಸಮಸ್ತವೂ ಆತನಿಗೆ ಅಧೀನವಾದ ಮೇಲೆ ಮಗನು ಸಹ ಸಮಸ್ತವನ್ನೂ ತನಗೆ ಅಧೀನ ಮಾಡಿಕೊಟ್ಟಾತನಿಗೆ ತಾನೇ ಅಧೀನನಾಗುವನು; ಹೀಗೆ ದೇವರು ಸಮಸ್ತರಲ್ಲಿಯೂ ಸಮಸ್ತವೂ ಆಗಿರುವನು.

ಎಫೆಸದವರಿಗೆ 2:16

ಇದ್ದ ದ್ವೇಷವನ್ನು ತನ್ನ ಶಿಲುಬೆಯ ಮೇಲೆ ಕೊಂದು ಅದರಿಂದ ಉಭಯರನ್ನು ಒಂದೇ ದೇಹದಂತಾಗ ಮಾಡಿ ದೇವರೊಂದಿಗೆ ಸಮಾಧಾನ ಪಡಿಸಿದ್ದಾನೆ.

ಎಫೆಸದವರಿಗೆ 3:19

ಜ್ಞಾನಕ್ಕೆ ವಿಾರುವ ಕ್ರಿಸ್ತನ ಪ್ರೀತಿ ಯನ್ನು ತಿಳಿದುಕೊಂಡು ದೇವರ ಸಂಪೂರ್ಣತೆಯ ಮಟ್ಟಿಗೂ ಪರಿಪೂರ್ಣರಾಗುವ ಹಾಗೆಯೂ ನಿಮಗೆ ದಯ ಪಾಲಿಸಲಿ ಎಂದು ಆತನನ್ನು ಬೇಡಿಕೊಳ್ಳುತ್ತೇನೆ.

ಎಫೆಸದವರಿಗೆ 4:4

ನಿಮ್ಮ ಕರೆಯುವಿಕೆಯ ಒಂದೇ ನಿರೀಕ್ಷೆಯಲ್ಲಿ ನೀವು ಕರೆಯಲ್ಪಟ್ಟಂತೆಯೇ ದೇಹವು ಒಂದೇ, ಆತ್ಮನು ಒಬ್ಬನೇ,

ಎಫೆಸದವರಿಗೆ 4:10

ಇಳಿದು ಬಂದಾತನು ಮೇಲಣ ಎಲ್ಲಾ ಆಕಾಶ ಗಳಿಗಿಂತ ಉನ್ನತವಾಗಿ ಏರಿ ಹೋದಾತನೇ; ಆದದರಿಂದ ಆತನು ಸಮಸ್ತವನ್ನು ತುಂಬಿದವ ನಾದನು).

ಎಫೆಸದವರಿಗೆ 4:12

ಆತನು ಕೆಲವರನ್ನು ಅಪೋಸ್ತರನ್ನಾಗಿಯೂ ಕೆಲವರನ್ನು ಪ್ರವಾದಿಗಳನ್ನಾಗಿಯೂ ಕೆಲವರನ್ನು ಸುವಾರ್ತಿಕರ ನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಉಪದೇಶಿಗಳನ್ನಾಗಿಯೂ ಅನುಗ್ರಹಿಸಿದನು.

ಎಫೆಸದವರಿಗೆ 5:23

ಕ್ರಿಸ್ತನು ಸಭೆಗೆ ತಲೆಯಾಗಿರುವ ಪ್ರಕಾರವೇ ಗಂಡನು ಹೆಂಡತಿಗೆ ತಲೆಯಾಗಿದ್ದಾನೆ. ಆತನು (ಕ್ರಿಸ್ತನು) ದೇಹಕ್ಕೆ ರಕ್ಷಕ ನಾಗಿದ್ದಾನೆ,

ಕೊಲೊಸ್ಸೆಯವರಿಗೆ 1:18

ಸಭೆಯೆಂಬ ದೇಹಕ್ಕೆ ಆತನು ಶಿರಸ್ಸಾಗಿದ್ದಾನೆ. ಆತನೇ ಆದಿಯಾಗಿದ್ದು ಎಲ್ಲಾದರಲ್ಲಿ ಪ್ರಮುಖನಾಗಿರುವಂತೆ ಆತನು ಸತ್ತವರೊಳಗಿಂದ ಬಂದ ಜ್ಯೇಷ್ಠನೂ ಆಗಿದ್ದಾನೆ.

ಕೊಲೊಸ್ಸೆಯವರಿಗೆ 1:24

ನಾನು ಈಗ ನಿಮಗೋಸ್ಕರ ಅನುಭವಿ ಸುತ್ತಿರುವ ಬಾಧೆಗಳಲ್ಲಿ ಸಂತೋಷಪಟ್ಟು ಕ್ರಿಸ್ತನ ಸಂಕಟ ಗಳೊಳಗೆ ಇನ್ನೂ ಉಳಿದದ್ದನ್ನು ಸಭೆಯೆಂಬ ಆತನ ದೇಹಕ್ಕೋಸ್ಕರ ನನ್ನ ಶರೀರದಲ್ಲಿ ಅನುಭವಿಸಿ ತೀರಿಸು ತ್ತೇನೆ.

ಕೊಲೊಸ್ಸೆಯವರಿಗೆ 2:9

ಕ್ರಿಸ್ತನಲ್ಲಿಯೇ ದೈವತ್ವ ಸರ್ವಸಂಪೂರ್ಣತೆಯು ಶಾರೀ ರಕವಾಗಿ ವಾಸಮಾಡುತ್ತದೆ.

ಕೊಲೊಸ್ಸೆಯವರಿಗೆ 3:11

ಇದರಲ್ಲಿ ಗ್ರೀಕನು ಯೆಹೂದ್ಯನು ಎಂಬ ಭೇದವಿಲ್ಲ; ಸುನ್ನತಿ ಮಾಡಿಸಿ ಕೊಂಡವರು ಸುನ್ನತಿ ಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ, ಮ್ಲೇಚ್ಛ ಹೂನರೆಂದಿಲ್ಲ; ದಾಸನು ಸ್ವತಂತ್ರನು ಎಂಬ ಭೇದವಿಲ್ಲ; ಆದರೆ ಕ್ರಿಸ್ತನೇ ಸಮಸ್ತರಲ್ಲಿಯೂ ಸಮಸ್ತವೂ ಆಗಿದ್ದಾನೆ.

ಕೊಲೊಸ್ಸೆಯವರಿಗೆ 3:15

ದೇವರ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ; ಅದಕ್ಕಾಗಿಯೇ ನೀವು ಸಹ ಒಂದೇ ದೇಹವಾಗಿರುವಂತೆ ಕರೆಯಲ್ಪಟ್ಟಿದ್ದೀರಿ; ಇದಲ್ಲದೆ ನೀವು ಕೃತಜ್ಞತೆಯುಳ್ಳವರಾಗಿರ್ರಿ.

Interlinear

Choose Theme