ಹೀಗೆ ಕ್ರಿಸ್ತ ಯೇಸುವಿನ ಲ್ಲಿರುವ ಕರುಣೆಯ ಮೂಲಕ ತನ್ನ ಅಪಾರವಾದ ಕೃಪಾತಿಶಯವನ್ನು ಮುಂದಣ ಯುಗಗಳಲ್ಲಿ ನಮಗೆ ತೋರಿಸಬೇಕೆಂದಿದ್ದನು.
Cross references
ಇಸ್ರಾಯೇಲಿನ ದೇವರಾದ ಕರ್ತನಿಗೆ ಯುಗಯುಗಕ್ಕೂ ಕೊಂಡಾಟ ವಾಗಲಿ. ಆಮೆನ್. ಆಮೆನ್.
ಇಸ್ರಾಯೇಲಿನ ದೇವರಾದ ಕರ್ತನಿಗೆ ಯುಗಯುಗಾಂತರಕ್ಕೂ ಸ್ತುತಿಯುಂಟಾಗಲಿ. ಜನರೆಲ್ಲಾ ಆಮೆನ್ ಎಂದು ಹೇಳಲಿ. ನೀವು ಕರ್ತನನ್ನು ಸ್ತುತಿಸಿರಿ.
ಹಾದುಹೋಗುವವರಿಲ್ಲದೆ ನೀನು ಬಿಡಲ್ಪಟ್ಟವಳೂ ಹಗೆ ಮಾಡಲ್ಪಟ್ಟವಳೂ ಆಗಿ ದ್ದಕ್ಕೆ ಬದಲಾಗಿ ನಿನ್ನನ್ನು ನಿತ್ಯವಾದ ಘನತೆಯೂ ಅನೇಕ ಸಂತತಿಗಳಲ್ಲಿ ಉಲ್ಲಾಸವಾಗಿಯೂ ಮಾಡು ತ್ತೇನೆ.
ಆದರೆ ಕರುಣಾನಿಧಿಯಾದ ದೇವರು ತನ್ನ ಅಪಾರ ವಾದ ಪ್ರೀತಿಯ ನಿಮಿತ್ತ ನಮ್ಮನ್ನು ಪ್ರೀತಿಸಿ
ಆ ಮರ್ಮವು ಈ ಕಾಲದಲ್ಲಿ ದೇವರ ಪರಿಶುದ್ಧ ಅಪೊಸ್ತಲರಿಗೂ ಪ್ರವಾದಿಗಳಿಗೂ ಆತ್ಮನಿಂದ ತಿಳಿಸಲ್ಪಟ್ಟಂತೆ ಬೇರೆ ಕಾಲಗಳಲ್ಲಿ ಮನುಷ್ಯ ಪುತ್ರರಿಗೆ ತಿಳಿಸಲ್ಪಡಲಿಲ್ಲ.
ಸಭೆಯಲ್ಲಿ ಕ್ರಿಸ್ತ ಯೇಸುವಿನ ಮೂಲಕ ತಲತಲಾಂತ ರಕ್ಕೂ ಯುಗಯುಗಾಂತರಕ್ಕೂ ಮಹಿಮೆಯುಂಟಾಗಲಿ. ಆಮೆನ್.
ಹೀಗಾದರೆ ನಮ್ಮ ದೇವರ ಮತ್ತು ಕರ್ತನಾದ ಯೇಸು ಕ್ರಿಸ್ತನ ಕೃಪೆಗನುಸಾರವಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರು ನಿಮ್ಮಲ್ಲಿ ಮಹಿಮೆ ಹೊಂದುವದು, ಆತನಲ್ಲಿ ನೀವೂ ಮಹಿಮೆ ಹೊಂದುವಿರಿ.
ಹೇಗಿದ್ದರೂ ಇನ್ನು ಮುಂದೆ ನಿತ್ಯ ಜೀವಕ್ಕಾಗಿ ತನ್ನ ಮೇಲೆ ನಂಬಿಕೆಯಿಡುವವರಿಗೆ ದೃಷ್ಟಾಂತವಿರಬೇಕೆಂದು ಯೇಸು ಕ್ರಿಸ್ತನು ಮೊದಲು ನನ್ನನ್ನು ಕರುಣಿಸಿ ನನ್ನಲ್ಲಿ ತನ್ನ ಪೂರ್ಣದೀರ್ಘ ಶಾಂತಿಯನ್ನು ತೋರ್ಪಡಿಸಿದನು.
ಆದರೆ ನಮ್ಮ ರಕ್ಷಕನಾದ ದೇವರ ದಯೆಯೂ ಪ್ರೀತಿಯೂ ಮನುಷ್ಯನ ಕಡೆಗೆ ಪ್ರತ್ಯಕ್ಷವಾದಾಗ
ಪರಲೋಕದಿಂದ ಕಳುಹಿಸಲ್ಪಟ್ಟ ಪರಿಶುದ್ಧಾತ್ಮನಿಂದ ನಿಮಗೆ ಸುವಾರ್ತೆಯನ್ನು ಸಾರಿದವರು ಈಗ ನಿಮಗೆ ತಿಳಿಸುವಂಥ ಮತ್ತು ದೂತರು ಕಣ್ಣಿಟ್ಟು ನೋಡಬೇಕೆಂದು ಅಪೇಕ್ಷಿಸುವಂಥ ಕಾರ್ಯಗಳಲ್ಲಿ ತಮಗೋಸ್ಕರವಲ್ಲ ನಮಗೋಸ್ಕರವೇ ಸೇವೆ ಮಾಡಿದರೆಂದು ಅವರಿಗೆ ಪ್ರಕಟವಾಯಿತು.
ಅವರು ಹೊಸ ಹಾಡನ್ನು ಹಾಡುತ್ತಾ--ನೀನು ಪುಸ್ತಕವನ್ನು ತೆಗೆದುಕೊಳ್ಳುವದಕ್ಕೂ ಅದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯೋಗ್ಯ ನಾಗಿದ್ದೀ; ಯಾಕಂದರೆ ನೀನು ವಧಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳ ವರಿಂದ ನಮ್ಮನ್ನು ದೇವರಿಗಾಗಿ ವಿಮೋಚಿಸಿದ್ದೀ;