ನೀವು ಆತ್ಮ ಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧ ವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ಪರಿಶುದ್ಧರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರ್ರಿ.
Cross references
ಆಗ ಯಾಕೋಬನು ಒಬ್ಬನೇ ಉಳಿದಾಗ ಒಬ್ಬ ಮನುಷ್ಯನು ಉದಯ ವಾಗುವ ವರೆಗೆ ಅವನ ಸಂಗಡ ಹೋರಾಡಿದನು.
ಅವಳು ಕರ್ತನ ಮುಂದೆ ಹೆಚ್ಚಾಗಿ ಪ್ರಾರ್ಥನೆ ಮಾಡುತ್ತಿರುವಾಗ ಏಲಿಯು ಅವಳ ಬಾಯನ್ನೇ ನೋಡುತ್ತಿದ್ದನು.
ಓ ಕರ್ತನಾದ ದೇವರೇ--ಅವರು ನಿನಗೆ ಕೂಗುವ ಎಲ್ಲಾದರಲ್ಲಿ ನೀನು ಅವರನ್ನು ಕೇಳುವ ಹಾಗೆ ನಿನ್ನ ಸೇವಕನ ವಿಜ್ಞಾಪನೆಗೂ ನಿನ್ನ ಜನವಾದ ಇಸ್ರಾಯೇಲಿನ ವಿಜ್ಞಾಪನೆಗೂ ನಿನ್ನ ಕಣ್ಣುಗಳು ತೆರೆ ದಿರಲಿ,
ಆಕಾಶದ ಕಡೆಗೆ ಕೈಯೆತ್ತಿ ಕರ್ತನ ಯಜ್ಞವೇದಿಯ ಮುಂದೆ ಮೊಣಕಾಲೂರಿದ್ದ ಸೊಲೊಮೋ ನನು ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಮಾಡಿ ಮುಗಿಸಿದ ನಂತರ ಎದ್ದು ನಿಂತನು.
ಇದ ಲ್ಲದೆ ಕರ್ತನು ತಾನೇ ದೇವರಾಗಿದ್ದಾನೆ; ಆತನ ಹೊರತು ಬೇರೊಬ್ಬನಿಲ್ಲವೆಂದು ಭೂಲೋಕದ ಜನ ರೆಲ್ಲರೂ ತಿಳಿಯುವ ಹಾಗೆ
ಆಗ ಕರ್ತನು ಅವ ನಿಗೆ--ನೀನು ನನ್ನ ಮುಂದೆ ಮಾಡಿದ ನಿನ್ನ ಪ್ರಾರ್ಥನೆ ಯನ್ನೂ ವಿಜ್ಞಾಪನೆಯನ್ನೂ ನಾನು ಕೇಳಿ ಯುಗ ಯುಗಕ್ಕೂ ನನ್ನ ಹೆಸರು ಅಲ್ಲಿರುವ ಹಾಗೆ ನೀನು ಕಟ್ಟಿಸಿದ ಈ ಮಂದಿರವನ್ನು ಪರಿಶುದ್ಧ ಮಾಡಿದೆನು; ನನ್ನ ಕಣ್ಣುಗಳೂ ನನ್ನ ಹೃದಯವೂ ನಿತ್ಯವಾಗಿ ಅಲ್ಲಿ ರುವವು.
ಯೆಹೂದ್ಯರನ್ನು ನಾಶ ಮಾಡಲು ಶೂಷನಿನಲ್ಲಿ ಕೊಡಲ್ಪಟ್ಟ ಆಜ್ಞಾಪತ್ರದ ಪ್ರತಿಯನ್ನು ಅವನ ಕೈಯಲ್ಲಿ ಕೊಟ್ಟು ಅದನ್ನು ಎಸ್ತೇರ ಳಿಗೆ ತೋರಿಸಿ ತಿಳಿಸುವದಕ್ಕೂ ಅವಳು ತನ್ನ ಜನ ಕ್ಕೋಸ್ಕರ ಅರಸನ ಮುಂದೆ ಬಿನ್ನಹಮಾಡಿ ಬೇಡಿ ಕೊಳ್ಳುವದಕ್ಕೂ ಅವನ ಬಳಿಗೆ ಹೋಗಬೇಕೆಂದು ಅವಳಿಗೆ ಆಜ್ಞಾಪಿಸಲು ಹೇಳಿದನು.
ಇಲ್ಲವೆ ಸರ್ವಶಕ್ತನಲ್ಲಿ ಆನಂದವಾಗಿರುವನೋ? ಸರ್ವಕಾಲದಲ್ಲಿ ದೇವರನ್ನು ಕರೆಯುವನೋ?
ನನ್ನ ನೀತಿಯಾದ ಓ ದೇವರೇ, ನಾನು ಮೊರೆಯಿಡಲು ನನಗೆ ಕಿವಿಗೊಡು, ಇಕ್ಕಟ್ಟಿನಲ್ಲಿ ನನಗೆ ವಿಶಾಲಮಾಡಿದಿ. ನನ್ನ ಮೇಲೆ ಕರುಣೆಯಿಟ್ಟು ನನ್ನ ಪ್ರಾರ್ಥನೆಯನ್ನು ಕೇಳು.
ಕರ್ತನು ನನ್ನ ವಿಜ್ಞಾಪನೆಯನ್ನು ಕೇಳಿದ್ದಾನೆ; ಕರ್ತನು ನನ್ನ ಪ್ರಾರ್ಥನೆಯನ್ನು ಅಂಗೀಕರಿಸುವನು.ನನ್ನ ಶತ್ರುಗಳೆಲ್ಲರು ನಾಚಿಕೆಪಟ್ಟು ಬಹಳವಾಗಿ ಕಳವಳ ಗೊಳ್ಳಲಿ; ಅವರು ತಿರುಗಿಕೊಂಡು ಕ್ಷಣಮಾತ್ರದಲ್ಲಿ ನಾಚಿಕೆಪಡಲಿ.
ಕರ್ತನೇ, ಇಕ್ಕಟ್ಟಿನಲ್ಲಿ ಅವರು ನಿನ್ನನ್ನು ಹುಡುಕಿದರು, ನಿನ್ನ ಶಿಕ್ಷೆ ಅವರ ಮೇಲಿರುವಾಗ ಅವರು ಪ್ರಾರ್ಥನೆಯನ್ನು ಮಾಡಿ ದರು.
ಯಾವಾಗ ಬರಹಕ್ಕೆ ರುಜುಹಾಕಿದ್ದಾ ಯಿತ್ತೆಂದು ದಾನಿಯೇಲನಿಗೆ ತಿಳಿಯಿತೋ ಆಗ ಅವನು ತನ್ನ ಮನೆಗೆ ಹೋದನು; ಅವನ ಕೋಣೆಯಲ್ಲಿ ಕಿಟಕಿಗಳು ಯೆರೂಸಲೇಮಿಗೆ ಎದುರಾಗಿ ತೆರೆಯಲ್ಪಟ್ಟಿದ್ದ ರಿಂದ ಅವನು ಮೊದಲು ಮಾಡುತ್ತಿದ್ದ ಪ್ರಕಾರವೇ ದಿನಕ್ಕೆ ಮೂರು ಸಾರಿ ಮೊಣಕಾಲೂರಿ ತನ್ನ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆಯನ್ನೂ ಸ್ತೋತ್ರವನ್ನೂ ಸಲ್ಲಿಸಿ ದನು.
ನಾನು ಮಾತನಾಡುತ್ತಾ ಪ್ರಾರ್ಥನೆ ಮಾಡುತ್ತಾ ನನ್ನ ಪಾಪವನ್ನೂ ನನ್ನ ಜನರಾದ ಇಸ್ರಾಯೇಲ್ಯರ ಪಾಪವನ್ನೂ ಅರಿಕೆಮಾಡುತ್ತಾ ನನ್ನ ದೇವರ ಪರಿಶುದ್ಧ ಪರ್ವತಕ್ಕೋಸ್ಕರ ನನ್ನ ವಿಜ್ಞಾಪನೆಯನ್ನು ನನ್ನ ದೇವರಾದ ಕರ್ತನ ಮುಂದೆ ಅರ್ಪಿಸುತ್ತಾ ಇದ್ದೆನು.
ಹೌದು, ದೂತನ ಮೇಲೆ ಅವನು ಬಲಹೊಂದಿ ಜಯಿಸಿದನು; ಅವನು ಅತ್ತು ಆತನಿಗೆ ವಿಜ್ಞಾಪನೆಯನ್ನು ಸಲ್ಲಿಸಿದನು; ಅವನು ಆತನನ್ನು ಬೇತೇಲಿನಲ್ಲಿ ಕಂಡುಕೊಂಡನು; ಅಲ್ಲಿ ಆತನು ನಮ್ಮೊಂದಿಗೆ ಮಾತನಾಡಿದನು.
ದಾವೀದನ ಮನೆತನದವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಕೃಪೆಯ ಆತ್ಮವನ್ನೂ ಬಿನ್ನಹಗಳ ಆತ್ಮವನ್ನೂ ಒಯ್ಯುವೆನು; ಇರಿದವರು ಆತನನ್ನು ದೃಷ್ಟಿಸಿ ನೋಡುವರು; ಒಬ್ಬನೇ ಮಗನ ನಿಮಿತ್ತ ಗೋಳಾಡುವವನ ಹಾಗೆ ಆತನ ನಿಮಿತ್ತ ಗೋಳಾಡುವರು; ಚೊಚ್ಚಲ ಮಗನ ನಿಮಿತ್ತ ವ್ಯಥೆಪಡುವವನ ಹಾಗೆ ಆತನ ನಿಮಿತ್ತ ವ್ಯಥೆಪಡು ವರು.
ಆಗ ಆಕೆಯು ಬಂದು ಆತನನ್ನು ಆರಾಧಿಸಿ--ಕರ್ತನೇ, ನನಗೆ ಸಹಾಯ ಮಾಡು ಎಂದು ಕೇಳಿಕೊಂಡಳು.
ಪ್ರಾರ್ಥನೆ ಉಪವಾಸಗಳಿಂದಲ್ಲದೆ ಈ ತರವಾದದ್ದು ಹೊರಟು ಹೋಗುವದಿಲ್ಲ ಅಂದನು.
ನೀವು ಶೋಧನೆಗೆ ಒಳಗಾ ಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಆತ್ಮವು ಸಿದ್ಧವಾಗಿದೆ ನಿಜವೇ; ಆದರೆ ಶರೀರವು ಬಲಹೀನ ವಾಗಿದೆ ಅಂದನು.
ನೀವು ಎಚ್ಚರವಾಗಿರ್ರಿ, ಜಾಗರೂಕರಾಗಿರ್ರಿ, ಪ್ರಾರ್ಥಿಸಿರಿ. ಯಾಕಂದರೆ ಸಮಯವು ಯಾವಾಗ ಎಂದು ನಿಮಗೆ ತಿಳಿಯದು.
ನೀವು ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಆತ್ಮವು ನಿಜವಾಗಿಯೂ ಸಿದ್ಧವಾಗಿದೆ; ಆದರೆ ಶರೀರವು ಬಲಹೀನವಾಗಿದೆ ಎಂದು ಹೇಳಿದನು.
ಇವನು ನಗ್ಗಾಯನ ಮಗನು; ಇವನು ಮಹಾಥನ ಮಗನು; ಇವನು ಮತ್ತಥೀಯನ ಮಗನು; ಇವನು ಶಿಮೀಯ ಮಗನು; ಇವನು ಯೋಸೇಫನ ಮಗನು; ಇವನು ಯೂದನ ಮಗನು;
ಇವನು ಮೆತೂಷಲನ ಮಗನು; ಇವನು ಹನೋಕನ ಮಗನು; ಇವನು ಯೆರೆದನ ಮಗನು; ಇವನು ಮಹಲಲೇಲನ ಮಗನು; ಇವನು ಕಾಯಿನನ ಮಗನು;ಇವನು ಎನೋಷನ ಮಗನು; ಇವನು ಸೇಥನ ಮಗನು; ಇವನು ಆದಾಮನ ಮಗನು; ಇವನು ದೇವರ ಮಗನು.
ಆತನು ಅವರಿಗೆ--ನಿಮ್ಮಲ್ಲಿ ಯಾವನಿಗಾದರೂ ಒಬ್ಬ ಸ್ನೇಹಿತನಿರಲಾಗಿ ಮಧ್ಯರಾತ್ರಿಯಲ್ಲಿ ಅವನ ಬಳಿಗೆ ಹೋಗಿ ಅವನಿಗೆ--ಸ್ನೇಹಿತನೇ, ಮೂರು ರೊಟ್ಟಿಗಳನ್ನು ನನಗೆ ಕಡವಾಗಿ ಕೊಡು;
ಜನರು ಬೇಸರಗೊಳ್ಳದೆ ಯಾವಾಗಲೂ ಪ್ರಾರ್ಥಿಸತಕ್ಕದ್ದೆಂದು ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು--
ಆದಕಾರಣ ಸಂಭವಿಸುವದಕ್ಕಿರುವ ಇವೆಲ್ಲವುಗಳಿಂದ ನೀವು ತಪ್ಪಿಸಿಕೊಳ್ಳುವದಕ್ಕೆ ಯೋಗ್ಯರೆಂದು ಎಣಿಸಲ್ಪಡು ವಂತೆಯೂ ಮನುಷ್ಯಕುಮಾರನ ಮುಂದೆ ನಿಂತು ಕೊಳ್ಳುವಂತೆಯೂ ಎಚ್ಚರವಾಗಿದ್ದು ಯಾವಾಗಲೂ ಪ್ರಾರ್ಥಿಸುತ್ತಾ ಇರ್ರಿ ಅಂದನು.
ನೀವು ನಿದ್ರೆ ಮಾಡುವದು ಯಾಕೆ? ಶೋಧನೆಗೆ ಒಳಗಾಗ ದಂತೆ ಎದ್ದು ಪ್ರಾರ್ಥಿಸಿರಿ ಅಂದನು.
ಇವರೆಲ್ಲರೂ ಏಕಮನಸ್ಸಿನಿಂದ ಪ್ರಾರ್ಥನೆ ವಿಜ್ಞಾ ಪನೆಗಳಲ್ಲಿ ನಿರತರಾಗಿದ್ದರು. ಅವರೊಂದಿಗೆ ಸ್ತ್ರೀಯರೂ ಯೇಸುವಿನ ತಾಯಿಯಾದ ಮರಿಯಳೂ ಆತನ ಸಹೋದರರೂ ಇದ್ದರು.
ಆದರೆ ನಾವು ಪ್ರಾರ್ಥನೆಯಲ್ಲಿಯೂ ವಾಕ್ಯೋಪದೇಶದಲ್ಲಿಯೂ ನಿರತರಾಗಿರುವಂತೆ ನಮ್ಮನ್ನು ಒಪ್ಪಿಸಿಕೊಡುವೆವು ಎಂದು ಹೇಳಿದನು.
ಅವನು ಭಕ್ತನೂ ತನ್ನ ಮನೆಯವರೆಲ್ಲರ ಸಹಿತವಾಗಿ ದೇವರಿಗೆ ಭಯಪಡುವವನೂ ಆಗಿದ್ದು ಜನರಿಗೆ ಬಹಳವಾಗಿ ದಾನವನ್ನು ಮಾಡುತ್ತಾ ದೇವರಿಗೆ ನಿತ್ಯವೂ ಪ್ರಾರ್ಥನೆ ಮಾಡುತ್ತಾ ಇದ್ದನು.
ಪೇತ್ರನು ಸೆರೆಯಲ್ಲಿದ್ದಾಗ ಸಭೆಯವರು ಅವನಿಗಾಗಿ ದೇವರಿಗೆ ಎಡೆಬಿಡದೆ ಪ್ರಾರ್ಥಿಸುತ್ತಿದ್ದರು.
ನೀವು ತಿರಿಗಿ ಭಯವುಳ್ಳವರಾಗಿರುವಂತೆ ದಾಸನ ಭಾವವನ್ನು ಹೊಂದಿದವರಲ್ಲ; ಆದರೆ ದತ್ತುಪುತ್ರ ಸ್ವೀಕಾರದ ಆತ್ಮನನ್ನು ಹೊಂದಿರುವದರಿಂದ ದೇವರನ್ನು ನಾವು ಅಪ್ಪಾ, ತಂದೆಯೇ ಎಂದು ಕೂಗುತ್ತೇವೆ.
ಹಾಗೆಯೇ ಆತ್ಮನು ಸಹ ನಮ್ಮ ಬಲಹೀನತೆ ಗಳಿಗೆ ಸಹಾಯಮಾಡುತ್ತಾನೆ; ಹೇಗಂದರೆ ನಾವು ತಕ್ಕ ಪ್ರಕಾರ ಏನು ಬೇಡಿಕೊಳ್ಳಬೇಕೋ ನಮಗೆ ಗೊತ್ತಿಲ್ಲವಾದ್ದರಿಂದ ಆತ್ಮನು ತಾನೇ ಉಚ್ಚರಿಸಲಾಗ ದಂಥ ನರಳಾಟದಿಂದ ನಮಗೋಸ್ಕರ ವಿಜ್ಞಾಪನೆ ಮಾಡುತ್ತಾನೆ.
ನಿರೀಕ್ಷೆಯಲ್ಲಿ ಸಂತೋಷಿಸುತ್ತಾ ಸಂಕಟದಲ್ಲಿ ತಾಳ್ಮೆಯುಳ್ಳವರಾಗಿದ್ದು ಆಸಕ್ತಿಯುಳ್ಳವರಾಗಿ ಪ್ರಾರ್ಥನೆ ಯಲ್ಲಿ ನಿರತರಾಗಿರ್ರಿ.
ನೀವು ಪುತ್ರ ರಾಗಿರುವದರಿಂದ--ಅಪ್ಪಾ, ತಂದೆಯೇ ಎಂದು ಕೂಗುವ ತನ್ನ ಮಗನ ಆತ್ಮನನ್ನು ದೇವರು ನಿಮ ಹೃದಯಗಳಲ್ಲಿ ಕಳುಹಿಸಿಕೊಟ್ಟನು.
ನನ್ನ ಪ್ರಾರ್ಥನೆಗಳಲ್ಲಿ ನಿಮಗೋಸ್ಕರ ವಿಜ್ಞಾಪನೆ ಮಾಡಿ ನಾನು ನಿಮ್ಮ ನಿಮಿತ್ತ ವಾಗಿ ಎಡೆಬಿಡದೆ ದೇವರಿಗೆ ಸ್ತೋತ್ರ ಮಾಡುತ್ತೇನೆ.
ಆತನಲ್ಲಿ ನೀವು ಸಹ ಆತ್ಮನ ಮೂಲಕವಾಗಿ ದೇವರಿಗೆ ನಿವಾಸಸ್ಥಾನವಾಗುವಂತೆ ಒಟ್ಟಾಗಿ ಕಟ್ಟಲ್ಪಡುತ್ತಾ ಇದ್ದೀರಿ.
ಕ್ರಿಸ್ತನ ಶೋಧಿಸಲ ಶಕ್ಯವಾದ ಐಶ್ವರ್ಯದ ವಿಷಯವಾಗಿ ಅನ್ಯಜನರಿಗೆ ನಾನು ಸಾರುವ ಹಾಗೆ ಪರಿಶುದ್ಧರೊಳಗೆ ಅತ್ಯಲ್ಪ ನಾದ ನನಗೆ ಅನುಗ್ರಹಿಸೋಣವಾಯಿತು.
ಪರಿಶುದ್ಧರೆಲ್ಲ ರೊಂದಿಗೆ ಅದರ ಅಗಲ ಉದ್ದ ಆಳ ಮತ್ತು ಎತ್ತರವನ್ನು ಗ್ರಹಿಸುವಂತೆಯೂ
ನಾನು ಬಾಯಿ ತೆರೆಯುವಾಗ ಗುಪ್ತವಾಗಿದ್ದ ಸುವಾರ್ತೆಯ ಮರ್ಮವನ್ನು ಧೈರ್ಯವಾಗಿ ತಿಳಿಸುವದಕ್ಕೆ ಬೇಕಾದ ಮಾತನ್ನು ನನಗೆ ಅನುಗ್ರಹಿಸಬೇಕೆಂದು ಪ್ರಾರ್ಥಿಸಿರಿ.
ನಾನು ನಿಮ್ಮೆಲ್ಲರಿಗೋಸ್ಕರ ಯಾವಾಗಲೂ ಮಾಡುವ ನನ್ನ ಪ್ರತಿಯೊಂದು ಪ್ರಾರ್ಥನೆಯಲ್ಲಿ ಸಂತೋಷದಿಂದಲೇ ಬೇಡಿಕೊಳ್ಳುವವನಾಗಿದ್ದೇನೆ.