Home Bibles ಎಸ್ತೇರ್ 1:19 · ಕನ್ನಡ ಬೈಬಲ್
ಎಸ್ತೇರ್ 1:19 · ಕನ್ನಡ ಬೈಬಲ್

ಅರಸನಿಗೆ ಸಮ್ಮತಿಯಾದರೆ ವಷ್ಟಿಯು ಅರಸನಾದ ಅಹಷ್ವೇರೋಷನ ಮುಂದೆ ಇನ್ನು ಮೇಲೆ ಬರ ಬಾರದೆಂದೂ ಅರಸನು ಅವಳ ರಾಜಸ್ಥಿತಿಯನ್ನು ಅವಳಿಗಿಂತ ಉತ್ತಮಳಾದ ಮತ್ತೊಬ್ಬಳಿಗೆ ಕೊಡಲಿ ಎಂದೂ ರಾಜಾಜ್ಞೆಯು ಹೊರಟು ಅದು ರದ್ದಾಗದ ಹಾಗೆ ಪಾರಸಿಯ ಮೇದ್ಯರ ಕಾನೂನುಗಳಲ್ಲಿ ಬರೆ ಯಲ್ಪಡಲಿ.

Cross references

1 ಸಮುವೇಲ 15:28

ಆಗ ಸಮುವೇಲನು ಅವನಿಗೆನಿನ್ನ ಬಳಿಯಿಂದ ಇಸ್ರಾಯೇಲಿನ ರಾಜ್ಯವನ್ನು ಕರ್ತನು ಈ ಹೊತ್ತು ಕಿತ್ತು ನಿನಗಿಂತ ಒಳ್ಳೆಯವನಾಗಿರುವ ನಿನ್ನ ನೆರೆಯವನಿಗೆ ಅದನ್ನು ಕೊಟ್ಟನು.

1 ಅರಸುಗಳು 3:28

ಅರಸನು ತೀರಿಸಿದ ನ್ಯಾಯವನ್ನು ಕುರಿತು ಸಮಸ್ತ ಇಸ್ರಾಯೇ ಲ್ಯರು ಕೇಳಿ ಅರಸನಿಗೆ ಭಯಪಟ್ಟರು; ಯಾಕಂದರೆ ನ್ಯಾಯತೀರಿಸಲು ಅವನಲ್ಲಿ ದೇವರ ಜ್ಞಾನವಿದೆ ಎಂದು ನೋಡಿದರು.

ಎಸ್ತೇರ್ 1:21

ಈ ಮಾತು ಪ್ರತಿ ಅರಸ ನಿಗೂ ಪ್ರಧಾನರಿಗೂ ಚೆನ್ನಾಗಿ ಕಾಣಿಸಿದ್ದರಿಂದಅರಸನು ಮೆಮುಕಾನನ ಮಾತಿನ ಪ್ರಕಾರಮಾಡಿ ಪ್ರತಿ ಮನುಷ್ಯನು ತನ್ನ ಮನೆಯಲ್ಲಿ ಅಧಿಕಾರ ನಡಿಸಬೇಕೆಂದೂ ತನ್ನ ಜನರ ಭಾಷೆಯ ಪ್ರಕಾರ ಮಾತನಾಡಬೇಕೆಂದೂ ಪ್ರಾಂತ್ಯ ಪ್ರಾಂತ್ಯದಲ್ಲಿ ಅದರ ಬರಹದ ಪ್ರಕಾರವೂ ಜನ ಜನಗಳಲ್ಲಿ ಅವರ ಭಾಷೆಯ ಪ್ರಕಾರವೂ ಅರಸನ ಸಮಸ್ತ ಪ್ರಾಂತ್ಯಗಳಿಗೆ ಪತ್ರಗಳನ್ನು ಕಳುಹಿಸಿದನು.

ಎಸ್ತೇರ್ 2:1

ಈ ಕಾರ್ಯಗಳಾದ ತರುವಾಯ ಅರಸನಾದ ಅಹಷ್ವೇರೋಷನ ಕೋಪವು ಶಾಂತ ವಾದಾಗ ಅವನು ವಷ್ಟಿಯನ್ನೂ ಅವಳು ಮಾಡಿದ್ದನ್ನೂ ಅವಳಿಗೆ ವಿರೋಧವಾಗಿ ನೇಮಿಸಿದ್ದನ್ನೂ ಜ್ಞಾಪಕ ಮಾಡಿಕೊಂಡನು.

ಎಸ್ತೇರ್ 3:9

ಅದು ಅರಸನಿಗೆ ಸಮ್ಮತಿಯಾದರೆ ಅವರು ಸಂಹರಿಸಲ್ಪಡುವ ಹಾಗೆ ಬರೆಯಲ್ಪಡಲಿ. ಆಗ ನಾನು ಅರಸನ ಬೊಕ್ಕಸಕ್ಕೆ ತರುವದಕ್ಕೆ ಈ ಕೆಲಸ ಮಾಡುವವರ ಕೈಗಳಲ್ಲಿ ಹತ್ತು ಸಾವಿರ ಬೆಳ್ಳಿಯ ತಲಾಂತುಗಳನ್ನು ಕೊಡು ವೆನು ಅಂದನು.

ಎಸ್ತೇರ್ 8:5

ಅರಸನಿಗೆ ಒಳ್ಳೇದಾಗಿದ್ದರೆ, ಅವನ ಸಮ್ಮುಖದಲ್ಲಿ ನಾನು ದಯೆಹೊಂದಿದ ವಳಾದರೆ, ಕಾರ್ಯವು ಅರಸನಿಗೆ ಯುಕ್ತವಾಗಿ ಕಾಣಿಸಲ್ಪಟ್ಟರೆ, ನಾನು ಅವನ ಸಮ್ಮುಖದಲ್ಲಿ ಒಳ್ಳೆಯ ವಳೆಂದು ಕಾಣಿಸಲ್ಪಟ್ಟರೆ, ಅರಸನ ಸಮಸ್ತ ಪ್ರಾಂತ್ಯ ಗಳಲ್ಲಿರುವ ಯೆಹೂದ್ಯರನ್ನು ನಾಶಮಾಡುವದಕ್ಕೆ ಅಗಾಗನಾದ ಹಮ್ಮೆದಾತನ ಮಗನಾದ ಹಾಮಾನನು ಯೋಚಿಸಿ ಬರೆದ ಪತ್ರಗಳು ರದ್ದುಮಾಡಲ್ಪಡುವಂತೆ ಬರೆಯಲ್ಪಡಲಿ.

ಎಸ್ತೇರ್ 8:8

ನೀವು ಯೆಹೂದ್ಯರಿ ಗೋಸ್ಕರ ಅರಸನ ಹೆಸರಿನಿಂದ ನಿಮ್ಮ ದೃಷ್ಟಿಗೆ ಒಳ್ಳೇ ದಾಗಿ ತೋರುವ ಹಾಗೆ ಬರೆದು ಅರಸನ ಉಂಗುರ ದಿಂದ ಮುದ್ರೆಯನ್ನು ಹಾಕಿರಿ. ಯಾಕಂದರೆ ಅರಸನ ಹೆಸರಿನಿಂದ ಬರೆಯಲ್ಪಟ್ಟು ಅರಸನ ಉಂಗುರದಿಂದ ಮುದ್ರೆ ಹಾಕಲ್ಪಟ್ಟ ಬರಹವನ್ನು ಯಾರೂ ಈಗ ರದ್ದು ಮಾಡುವದಕ್ಕಾಗುವದಿಲ್ಲ ಅಂದನು.

ದಾನಿಯೇಲ 6:8

ಓ ರಾಜನೇ, ಈಗ ನೀನು ಈ ನಿಬಂಧನೆಯನ್ನು ವಿಧಿಸಿ ಇದು ಬದಲಾಗದಂತೆ ಮೇದ್ಯಯರ ಮತ್ತು ಪಾರಸೀಯರ ನ್ಯಾಯಪ್ರಮಾಣದ ಪ್ರಕಾರ ಇದು ಬೇರೆಯಾಗದಂತೆ ನಿರ್ಣಯವನ್ನು ರೂಪಿಸಿ ಬರಹಕ್ಕೆ ರುಜುಹಾಕು ಅಂದರು.

ದಾನಿಯೇಲ 6:9

ಆದಕಾರಣ ದಾರ್ಯಾವೆಷನು ಆ ಬರಹಕ್ಕೂ ನಿರ್ಣಯಕ್ಕೂ ರುಜು ಹಾಕಿದನು.

ದಾನಿಯೇಲ 6:17

ಬಂಡೆ ತರಿಸಲ್ಪಟ್ಟು ಗುಹೆಯ ಬಾಯಿಯು ಮುಚ್ಚಲ್ಪಟ್ಟಿತು. ಇದಲ್ಲದೆ ದಾನಿಯೇಲನ ವಿಷಯದಲ್ಲಿ ತನ್ನ ಆಲೋಚನೆಯು ಬದಲಾಗದ ಹಾಗೆ ಅರಸನು ತನ್ನ ಮುದ್ರೆಯನ್ನು ಮತ್ತು ತನ್ನ ಪ್ರಭುಗಳ ಮುದ್ರೆಯನ್ನೂ ಅದಕ್ಕೆ ಹಾಕಿದನು.

Interlinear

Choose Theme