Home Bibles ಎಸ್ತೇರ್ 1:5 · ಕನ್ನಡ ಬೈಬಲ್
ಎಸ್ತೇರ್ 1:5 · ಕನ್ನಡ ಬೈಬಲ್

ಆ ದಿವಸಗಳು ತೀರಿದ ತರುವಾಯ ಅರಸನು ಶೂಷನಿನ ಅರಮನೆ ಯಲ್ಲಿರುವ ಹಿರಿಕಿರಿಯರಾದ ಸಮಸ್ತ ಜನರಿಗೂ ಏಳು ದಿವಸಗಳ ವರೆಗೆ ಅರಸನ ಅರಮನೆಯ ತೋಟದ ಅಂಗಳದಲ್ಲಿ ಔತಣವನ್ನು ಮಾಡಿಸಿದನು.

Cross references

2 ದಿನವೃತ್ತಾಂತ 7:8

ಅದೇ ಕಾಲ ದಲ್ಲಿ ಸೊಲೊಮೋನನು ಅವನ ಸಂಗಡ ಹಮಾತಿನ ಪ್ರದೇಶ ಮೊದಲುಗೊಂಡು ಐಗುಪ್ತ ನದಿಯ ವರೆಗೆ ಇರುವ ಮಹಾ ಸಭೆಯಾದ ಸಮಸ್ತ ಇಸ್ರಾಯೇಲ್ಯರು ಏಳು ದಿವಸ ಹಬ್ಬವನ್ನು ಮಾಡಿದರು.

2 ದಿನವೃತ್ತಾಂತ 30:21

ಯೆರೂಸಲೇಮಿನಲ್ಲಿದ್ದ ಇಸ್ರಾಯೇಲಿನ ಮಕ್ಕಳು ಹುಳಿ ಇಲ್ಲದ ರೊಟ್ಟಿಯ ಹಬ್ಬವನ್ನು ಏಳು ದಿವಸ ಸಂತೋಷದಿಂದ ಆಚರಿಸಿದರು. ಇದಲ್ಲದೆ ಲೇವಿ ಯರೂ ಯಾಜಕರೂ ಮಹಾಶಬ್ದದ ವಾದ್ಯಗಳಿಂದ ಕರ್ತನಿಗೆ ಹಾಡಿ ಪ್ರತಿ ದಿನದಲ್ಲಿಯೂ ಕರ್ತನನ್ನು ಸ್ತುತಿಸಿದರು.

ಎಸ್ತೇರ್ 7:7

ಅರಸನು ಕೋಪವುಳ್ಳವನಾಗಿ ದ್ರಾಕ್ಷಾ ರಸದ ಔತಣದಿಂದ ಎದ್ದು ಅರಮನೆಯ ತೋಟಕ್ಕೆ ಹೋದನು. ಆದರೆ ಹಾಮಾನನು ರಾಣಿಯಾದ ಎಸ್ತೇ ರಳ ಮುಂದೆ ತನ್ನ ಪ್ರಾಣಕ್ಕೋಸ್ಕರ ಬೇಡಿಕೊಳ್ಳುತ್ತಾ ನಿಂತನು, ಯಾಕಂದರೆ ಅರಸನಿಂದ ತನಗೆ ಕೇಡು ನಿರ್ಣಯವಾಯಿತೆಂದು ತಿಳಿದನು.

Interlinear

Choose Theme