ಅರಸನ ಸ್ಥಿತಿಗೆ ತಕ್ಕಂತೆ ರಾಜರ ದ್ರಾಕ್ಷಾರಸ ವನ್ನು ನಾನಾವಿಧವಾದ ಬಂಗಾರದ ಪಾತ್ರೆಗಳಲ್ಲಿ ಸಮೃದ್ಧಿಯಾಗಿ ಕುಡಿಯಲು ಕೊಟ್ಟರು.
Cross references
ಇದಲ್ಲದೆ ಅರಸನಾದ ಸೊಲೊಮೋನನು ಕುಡಿಯುವ ಪಾತ್ರೆ ಗಳೆಲ್ಲಾ ಬಂಗಾರದವುಗಳಾಗಿದ್ದವು. ಲೆಬನೋನಿನ ಅಡವಿಯ ಮನೆಯ ಪಾತ್ರೆಗಳೆಲ್ಲಾ ಹಾಗೆಯೇ ಬಂಗಾ ರದವುಗಳಾಗಿದ್ದವು. ಬೆಳ್ಳಿಯದು ಯಾವದೂ ಇರಲಿಲ್ಲ. ಯಾಕಂದರೆ ಸೊಲೊಮೋನನ ದಿವಸಗಳಲ್ಲಿ ಅದು ಏನೂ ಇಲ್ಲದ್ದಾಗಿ ಎಣಿಸಲ್ಪಟ್ಟಿತ್ತು.
ಅರಸನಾದ ಸೊಲೊಮೋನನು ಕುಡಿಯುವ ಪಾತ್ರೆಗಳೆಲ್ಲಾ ಬಂಗಾರದವುಗಳು. ಲೆಬನೋನಿನ ಅಡವಿಯ ಮನೆಯ ಪಾತ್ರೆಗಳೆಲ್ಲಾ ಹೀಗೆಯೇ ಅಪ ರಂಜಿಯವುಗಳು. ಬೆಳ್ಳಿಯದು ಒಂದೂ ಇರಲಿಲ್ಲ. ಸೊಲೊಮೋನನ ದಿವಸಗಳಲ್ಲಿ ಬೆಳ್ಳಿಗೆ ಬೆಲೆಯೇ ಇರಲಿಲ್ಲ.
ಆಗ ಅರಸನು ತನ್ನ ಸಮಸ್ತ ಪ್ರಧಾನರಿಗೂ ಸೇವಕರಿಗೂ ಎಸ್ತೇರಳ ಔತಣವೆಂದು ದೊಡ್ಡ ಔತಣವನ್ನು ಮಾಡಿಸಿ ಪ್ರಾಂತ್ಯ ಗಳಿಗೆ ಬಿಡುಗಡೆಯನ್ನು ಕೊಟ್ಟು ಅರಸನ ಸ್ಥಿತಿಗೆ ತಕ್ಕಂಥ ಬಹುಮಾನಗಳನ್ನು ಕೊಟ್ಟನು.
ಆ ದ್ರಾಕ್ಷಾರಸವನ್ನು ರುಚಿಸುತ್ತಿರುವಾಗ ಬೆಲ್ಯಚ್ಚರನು ತನ್ನ ತಂದೆಯಾದ ನೆಬೂಕದ್ನೆಚ್ಚರನು ಯೆರೂಸಲೇಮಿನ ದೇವಾಲಯ ದೊಳಗಿಂದ ತಂದ ಬೆಳ್ಳಿಬಂಗಾರಗಳ ಪಾತ್ರೆಗಳಲ್ಲಿ ಅರಸನೂ ಅವನ ಪ್ರಭುಗಳೂ ಅವನ ಪತ್ನಿ ಮತ್ತು ಉಪಪತ್ನಿಯರು ಅವುಗಳಲ್ಲಿ ಕುಡಿಯುವ ಹಾಗೆ ತರಲು ಆಜ್ಞಾಪಿಸಿದನು.