Home Bibles ಎಸ್ತೇರ್ 10:2 · ಕನ್ನಡ ಬೈಬಲ್
ಎಸ್ತೇರ್ 10:2 · ಕನ್ನಡ ಬೈಬಲ್

ಅವನ ಅಧಿಕಾರದ ಕ್ರಿಯೆಗಳೂ ಅವನ ಪರಾಕ್ರಮವೂ ಅರ ಸನು ಮೊರ್ದೆಕೈಯನ್ನು ಹೆಚ್ಚಿಸಿದ ಮಹತ್ತಿನ ಪ್ರಸಿ ದ್ದಿಯೂ ಇವು ಮೇದ್ಯಪಾರಸಿಯ ಅರಸರುಗಳ ರಾಜ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟವಲ್ಲವೋ?ಯಾಕಂದರೆ ಯೆಹೂದ್ಯನಾದ ಮೊರ್ದೆಕೈ ಅರಸನಾದ ಅಹಷ್ವೇರೋಷನಿಗೆ ಎರಡನೆಯವನೂ ಯೆಹೂದ್ಯ ರಲ್ಲಿ ದೊಡ್ಡವನೂ ತನ್ನ ಸಹೋದರರ ಸಮೂಹದಲ್ಲಿ ಸಮರ್ಪಕನೂ ತನ್ನ ಜನರ ಮೇಲನ್ನು ಹುಡುಕುವ ವನೂ ತನ್ನ ಸಮಸ್ತ ಸಂತಾನದವರಿಗೆ ಸಮಾಧಾನವನ್ನು ಮಾತನಾಡುವವನೂ ಆಗಿದ್ದನು.

Cross references

1 ಅರಸುಗಳು 11:41

ಸೊಲೊಮೋನನ ಉಳಿದ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ ಅವನ ಜ್ಞಾನವೂ ಸೊಲೊಮೋನನ ಕ್ರಿಯೆಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?

1 ಅರಸುಗಳು 14:19

ಯಾರೊಬ್ಬಾಮನ ಮಿಕ್ಕಾದ ಕ್ರಿಯೆಗಳೂ ಅವನು ಯುದ್ಧ ಮಾಡಿದ್ದೂ ಆಳಿದ್ದೂ--ಇಗೋ, ಇವು ಇಸ್ರಾಯೇಲ್ಯರ ಅರಸುಗಳ ವೃತಾಂತಗಳ ಪುಸ್ತಕ ದಲ್ಲಿ ಬರೆಯಲ್ಪಟ್ಟಿವೆ.

1 ಅರಸುಗಳು 22:39

ಆದರೆ ಅಹಾಬನ ಇತರ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ ಅವನು ಕಟ್ಟಿಸಿದ ದಂತದ ಮನೆಯೂ ಎಲ್ಲಾ ಪಟ್ಟಣಗಳೂ ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?

ಎಸ್ತೇರ್ 2:23

ಈ ವಿಷಯವನ್ನು ವಿಚಾರಿಸಿದಾಗ ನಿಜವಾಯಿತು; ಆಗ ಅವರಿಬ್ಬರೂ ಮರದಲ್ಲಿ ತೂಗುಹಾಕಲ್ಪಟ್ಟರು. ಇದು ಅರಸನ ಮುಂದೆ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿತು.

ಎಸ್ತೇರ್ 6:1

ಆ ರಾತ್ರಿ ಅರಸನಿಗೆ ನಿದ್ರೆ ಬಾರದ್ದದರಿಂದ ವೃತಾಂತಗಳನ್ನು ಬರೆದಿರುವ ಪುಸ್ತಕವನ್ನು ತಕ್ಕೊಂಡು ಬರಲು ಹೇಳಿದನು.

ಎಸ್ತೇರ್ 8:2

ಆಗ ಅರಸನು ತಾನು ಹಾಮಾ ನನಿಂದ ತಕ್ಕೊಂಡ ತನ್ನ ಉಂಗುರವನ್ನು ತೆಗೆದು ಮೊರ್ದೆಕೈಗೆ ಕೊಟ್ಟನು. ಇದಲ್ಲದೆ ಎಸ್ತೇರಳು ಮೊರ್ದೆ ಕೈಯನ್ನು ಹಾಮಾನನ ಮನೆಯ ಅಧಿಕಾರಿಯಾಗಿ ಇರಿಸಿದಳು.

ಎಸ್ತೇರ್ 8:15

ಮೊರ್ದೆಕೈ ನೀಲ ಶುಭ್ರವಾದ ರಾಜವಸ್ತ್ರವನ್ನು ಧರಿಸಿಕೊಂಡು ಬಂಗಾರದ ದೊಡ್ಡ ಕಿರೀಟವನ್ನು ಇಟ್ಟು ಕೊಂಡು ರಕ್ತವರ್ಣವುಳ್ಳ ನಯವಾದ ವಸ್ತ್ರ ಧರಿಸಿ ಕೊಂಡು ಅರಸನ ಸಮ್ಮುಖದಿಂದ ಹೊರಟು ಹೋದನು. ಆಗ ಶೂಷನ್‌ ಪಟ್ಟಣವು ಸಂಭ್ರಮವೂ ಸಂತೋಷವೂ ಉಳ್ಳದ್ದಾಗಿತ್ತು.

ಎಸ್ತೇರ್ 9:4

ಮೊರ್ದೆಕೈ ಅರಮನೆಯಲ್ಲಿ ದೊಡ್ಡವನಾಗಿದ್ದನು. ಅವನ ಕೀರ್ತಿಯು ಸಮಸ್ತ ಪ್ರಾಂತ್ಯಗಳ ಮೇಲೆ ವ್ಯಾಪಿಸಿತು. ಈ ಮೊರ್ದೆಕೈ ಅಧಿಕಾಧಿಕವಾಗಿ ದೊಡ್ಡವನಾದನು.

ಕೀರ್ತನೆಗಳು 18:35

ನಿನ್ನ ರಕ್ಷಣೆಯ ಗುರಾಣಿಯನ್ನು ಸಹ ನನಗೆ ನೀನು ಕೊಟ್ಟಿದ್ದೀ; ನಿನ್ನ ಬಲಗೈ ನನ್ನನ್ನು ಹಿಡಿದಿದೆ. ನಿನ್ನ ಸಾತ್ವಿಕತ್ವವು ನನ್ನನ್ನು ಹೆಚ್ಚಿಸಿಯದೆ.

ದಾನಿಯೇಲ 2:48

ಆಗ ಅರಸನು ದಾನಿಯೇಲನನ್ನು ಒಬ್ಬ ಮಹಾ ವ್ಯಕ್ತಿಯನ್ನಾಗಿ ಮಾಡಿ ಅವನಿಗೆ ಅನೇಕ ದೊಡ್ಡ ಬಹುಮಾನಗಳನ್ನು ಕೊಟ್ಟು ಸಮಸ್ತ ಬಾಬೆಲಿನ ಪ್ರಾಂತ್ಯಗಳಿಗೆ ಅಧಿಕಾರಿಯನ್ನಾ ಗಿಯೂ ಬಾಬೆಲಿನ ಸಮಸ್ತ ಜ್ಞಾನಿಗಳಿಗೆ ಮುಖ್ಯಾಧಿ ಪತಿಯನ್ನಾಗಿಯೂ ನೇಮಿಸಿದನು.ಆ ಮೇಲೆ ದಾನಿ ಯೇಲನು ಅರಸನನ್ನು ಬೇಡಿಕೊಂಡದ್ದರಿಂದ ಅರಸನು ಶದ್ರಕ್‌ ಮೇಷಕ್‌ ಮತ್ತು ಅಬೇದ್‌ನೆಗೋ ಎಂಬವರಿಗೆ ಬಾಬೆಲ್‌ ಸಂಸ್ಥಾನದ ಕಾರ್ಯಭಾರವನ್ನು ವಹಿಸಿದನು. ದಾನಿಯೇಲನಾದರೋ ಅರಸನ ಅರಮನೆಯಲ್ಲೇ ಇದ್ದನು.

Interlinear

Choose Theme