ಎಸ್ತೇರ್ 2:20 · ಕನ್ನಡ ಬೈಬಲ್
ಎಸ್ತೇರಳು ಮೊರ್ದೆಕೈ ತನಗೆ ಆಜ್ಞಾ ಪಿಸಿದ ಹಾಗೆ ತನ್ನ ಬಂಧುಗಳಿಗೂ ತನ್ನ ಜನರಿಗೂ ತಿಳಿಸದೆ ಇದ್ದಳು. ಎಸ್ತೇರಳು ಮೊರ್ದೆಕೈಯ ಆರೈಕೆಯಲ್ಲಿ ಇದ್ದಾಗ ಅವನ ಆಜ್ಞೆಯನ್ನು ಕೈಕೊಂಡಿದ್ದಂತೆಯೇ ಅವಳು ಮಾಡಿದಳು.
Cross references
ಎಸ್ತೇರ್ 2:7
ಅವನು ತನ್ನ ಚಿಕ್ಕಪ್ಪನ ಮಗಳಾದ ಎಸ್ತೇರಳೆಂಬ ಹದಸ್ಸಳನ್ನು ಸಾಕಿದವನಾಗಿದ್ದನು; ಅವ ಳಿಗೆ ತಂದೆ ತಾಯಿಗಳು ಇರಲಿಲ್ಲ. ಈ ಕನ್ನಿಕೆಯು ರೂಪವತಿಯಾಗಿಯೂ ಸೌಂದರ್ಯವಂತಳಾಗಿಯೂ ಇದ್ದಳು. ಅವಳ ತಂದೆ ತಾಯಿಗಳು ಸತ್ತುಹೋದ ತರುವಾಯ ಮೊರ್ದೆಕೈ ಅವಳನ್ನು ತನ್ನ ಮಗಳ ಹಾಗೆ ತೆಗೆದುಕೊಂಡನು.
ಎಸ್ತೇರ್ 2:10
ಆದರೆ ಎಸ್ತೇರಳು ತನ್ನ ಜನರಿಗೂ ತನ್ನ ಬಂಧುಗಳಿಗೂ ತಿಳಿಸದೆ ಇದ್ದಳು. ಯಾಕಂದರೆ ತಿಳಿಸಬಾರದೆಂದು ಮೊರ್ದೆಕೈ ಅವಳಿಗೆ ಆಜ್ಞಾಪಿಸಿದ್ದನು.
ಎಫೆಸದವರಿಗೆ 6:1
ಮಕ್ಕಳೇ, ನೀವು ಕರ್ತನಲ್ಲಿ ನಿಮ್ಮ ತಂದೆ ತಾಯಿಗಳಿಗೆ ವಿಧೇಯರಾಗಿರ್ರಿ; ಇದು ನ್ಯಾಯವಾದದ್ದು.