ಆ ಕನ್ನಿಕೆಯು ಅವನ ದೃಷ್ಟಿಗೆ ಉತ್ತಮಳೆಂದು ಕಾಣಿಸಿದ್ದರಿಂದ ಅವನ ಸಮ್ಮುಖದಲ್ಲಿ ಅವಳಿಗೆ ದಯೆದೊರಕಿತು. ಆದಕಾರಣ ಅವನು ತ್ವರೆ ಯಾಗಿ ಶುಚಿಮಾಡುವದಕ್ಕೋಸ್ಕರ ಬೇಕಾದವುಗ ಳನ್ನೂ ಅವಳಿಗೆ ಕೊಡತಕ್ಕವುಗಳನ್ನೂ ಅರಸನ ಮನೆ ಯಿಂದ ಕೊಡತಕ್ಕ ಏಳು ಮಂದಿ ದಾಸಿಯರನ್ನೂ ಅವಳಿಗೆ ಕೊಟ್ಟನು. ಇದಲ್ಲದೆ ಸ್ತ್ರೀಯರ ಮನೆಯಲ್ಲಿ ಉತ್ತಮವಾದ ಸ್ಥಳವನ್ನು ಅವಳಿಗೂ ಅವಳ ದಾಸಿ ಯರಿಗೂ ಕೊಟ್ಟನು.
Cross references
ಆದದರಿಂದ ಯೋಸೇಫನು ಅವನ ದೃಷ್ಟಿಯಲ್ಲಿ ಕೃಪೆಹೊಂದಿ ಅವನ ಸೇವೆಮಾಡಿದನು. ಪೋಟೀಫರನು ಅವನನ್ನು ತನ್ನ ಮನೆಯ ಮೇಲೆ ಮೇಲ್ವಿಚಾರಕನನ್ನಾಗಿ ಮಾಡಿ ತನಗಿದ್ದದ್ದನ್ನೆಲ್ಲಾ ಅವನ ಕೈಗೆ ಒಪ್ಪಿಸಿದನು.
ಆದರೆ ಕರ್ತನು ಯೋಸೇಫನ ಸಂಗಡ ಇದ್ದು ಅವನ ಮೇಲೆ ಕರುಣೆಯಿಟ್ಟು ಸೆರೆಮನೆಯ ಯಜಮಾನನು ಅವನ ಮೇಲೆ ದಯೆತೋರಿಸುವಂತೆ ಮಾಡಿದನು.
ನಿನಗೆ ವಿರೋಧವಾಗಿ ಮಾಡಿದ ನಿನ್ನ ಜನರ ಪಾಪಗಳನ್ನೂ ಅವರು ನಿನಗೆ ವಿರೋಧವಾಗಿ ಮಾಡಿದ ಅವರ ಸಮಸ್ತ ದ್ರೋಹ ಗಳನ್ನೂ ಮನ್ನಿಸಿ ಅವರನ್ನು ಕರುಣಿಸುವ ಹಾಗೆ ಅವರ ಮುಂದೆ ನೀನು ಅವರನ್ನು ಕರುಣಿಸು.
ಈ ಎಜ್ರನು ಇಸ್ರಾ ಯೇಲ್ ದೇವರಾಗಿರುವ ಕರ್ತನು ಕೊಟ್ಟ ಮೋಶೆಯ ನ್ಯಾಯಪ್ರಮಾಣದಲ್ಲಿ ನುರಿತ ಶಾಸ್ತ್ರಿಯಾಗಿದ್ದನು. ಇವನ ಮೇಲೆ ಅವನ ದೇವರಾಗಿರುವ ಕರ್ತನ ಕೈ ಇದ್ದ ಪ್ರಕಾರವೇ ಅರಸನು ಇವನಿಗೆ ಕೇಳಿದ್ದನ್ನೆಲ್ಲಾ ಕೊಟ್ಟನು.
ಇದಲ್ಲದೆ ಆಲಯದ ಸಂಬಂಧವಾದ ಅರಮನೆಯ ಬಾಗಲಿಗೋಸ್ಕರವೂ ಪಟ್ಟಣದ ಗೋಡೆಗೋಸ್ಕರವೂ ನಾನು ಪ್ರವೇಶಿಸುವ ಮನೆಗೋಸ್ಕರವೂ ತೊಲೆಗಳನ್ನು ಮಾಡಲು ಮರ ಗಳನ್ನು ಕೊಡುವ ಹಾಗೆ ಅರಸನವನಾಧಿಪತಿಯಾದ ಆಸಾಫನಿಗೋಸ್ಕರ ನನಗೆ ಪತ್ರ ಕೊಡಲ್ಪಡಲಿ ಅಂದೆನು. ಆಗ ದೇವರ ಒಳ್ಳೇ ಕೈ ನನ್ನ ಮೇಲೆ ಇರುವ ಪ್ರಕಾರ ಅರಸನು ನನಗೆ ಕೊಟ್ಟನು.
ರೂಪವತಿಯಾದ ಸಮಸ್ತ ಕನ್ಯಾಸ್ತ್ರೀಯರು ರಾಜ ಧಾನಿಯಾದ ಶೂಷನಿಗೆ ಸ್ತ್ರೀಯರು ಇರುವ ಅರಮ ನೆಗೆ, ಸ್ತ್ರೀಯರ ಮೇಲೆ ಕಾವಲಾಗಿ ಇರುವ ಅರಸನ ಅಧಿ ಕಾರಿಗಳಾದ ಹೇಗ್ಯನೆಂಬವನ ಕೈಗೆ ಒಪ್ಪಿಸಲ್ಪಡುವ ಹಾಗೆ ಅರಸನು ತನ್ನ ರಾಜ್ಯದ ಸಮಸ್ತ ಪ್ರಾಂತಗಳಲ್ಲಿ ಅಧಿಕಾರವನ್ನು ನೇಮಿಸಲಿ; ಅವರಿಗೆ ಶುಚಿ ಮಾಡಿ ಕೊಳ್ಳುವ ವಸ್ತುಗಳು ಕೊಡಲ್ಪಡಲಿ.
ಆದರೆ ಒಬ್ಬೊಬ್ಬ ಕನ್ನಿಕೆಯು ಆರು ತಿಂಗಳು ಬೋಳ ತೈಲದಿಂದಲೂ ಆರು ತಿಂಗಳು ಸುಗಂಧಗ ಳಿಂದಲೂ ಸ್ತ್ರೀಯರು ಶುಚಿಮಾಡಿಕೊಳ್ಳತಕ್ಕವುಗ ಳಿಂದಲೂ ಶುಚಿಯಾಗುವ ದಿವಸಗಳನ್ನು ತೀರಿಸಿದರು. ಹೀಗೆಯೇ ಸ್ತ್ರೀಯರ ಮರ್ಯಾದೆಯ ಪ್ರಕಾರ ಹನ್ನೆ ರಡು ತಿಂಗಳಾದ ತರುವಾಯ ಅರಸನಾದ ಅಹಷ್ವೇ ರೋಷನ ಬಳಿಗೆ ಹೋಗಲು ಅವರವರ ಸರದಿ ಬಂತು.
ಅವರನ್ನು ಸೆರೆಹಿಡಿದವರ ಮುಂದೆ ಅವರು ಕರುಣೆ ಹೊಂದುವಂತೆ ಮಾಡಿದನು.
ಮನುಷ್ಯನ ಮಾರ್ಗಗಳು ಕರ್ತನನ್ನು ಮೆಚ್ಚಿಸಿದಾಗ ಅವನ ಶತ್ರುಗಳನ್ನು ಸಹ ಅವನೊಂದಿಗೆ ಸಮಾಧಾನ ದಲ್ಲಿರುವಂತೆ ಆತನು ಮಾಡುತ್ತಾನೆ.
ಆಗ ದೇವರು ದಾನಿಯೇಲನನ್ನು ಕಂಚುಕಿಯರ ಯಜಮಾನನ ದಯೆಯಲ್ಲಿಯೂ ಕರುಣೆ ಯಲ್ಲಿಯೂ ಸೇರಿಸಿದನು.
ಅವನಿಗೆ ಬಂದ ಎಲ್ಲಾ ಸಂಕಟಗಳಿಂದ ಅವನನ್ನು ಬಿಡಿಸಿ ಐಗುಪ್ತ ದೇಶದ ಅರಸನಾದ ಫರೋಹನ ಸಮ್ಮುಖದಲ್ಲಿ ದಯಾ ಪಾತ್ರನೂ ಜ್ಞಾನವುಳ್ಳವನೂ ಆಗಿರುವಂತೆ ಅನುಗ್ರಹಿ ಸಿದನು. ಫರೋಹನು ಅವನನ್ನು ಐಗುಪ್ತ ದೇಶದ ಮೇಲೆಯೂ ತನ್ನ ಎಲ್ಲಾ ಮನೆಯ ಮೇಲೆಯೂ ಅಧಿಕಾರಿಯನ್ನಾಗಿ ನೇಮಿಸಿದನು.