ಅವರು ಇನ್ನೂ ಅವನ ಸಂಗಡ ಮಾತನಾಡುತ್ತಿರುವಾಗ ಅರಸನ ಮನೆ ವಾರ್ತೆಯವರು ಬಂದು ಎಸ್ತೇರಳು ಸಿದ್ಧಮಾಡಿಸಿದ ಔತಣಕ್ಕೆ ಹಾಮಾನನನ್ನು ಕರಕ್ಕೊಂಡು ಹೋಗಲು ತ್ವರೆಮಾಡಿದರು.
Cross references
ಮುಯ್ಯಿಗೆ ಮುಯ್ಯಿ ಕೊಡುವದೂ ಪ್ರತಿಫಲ ಕೊಡುವದೂ ನನ್ನದೇ; ತಕ್ಕ ಕಾಲದಲ್ಲಿ ಅವರ ಕಾಲು ಜಾರುವದು; ಅವರ ಕಳವಳದ ದಿವಸವು ಸವಿಾಪ ವಾಗಿದೆ. ಅವರ ಮೇಲೆ ಬರುವವುಗಳು ಬೇಗ ಬರುತ್ತವೆ.
ಆಗ ಅರಸನು--ಎಸ್ತೇರಳು ಹೇಳಿದ ಪ್ರಕಾರ ಮಾಡಲು ಹಾಮಾನನನ್ನು ತ್ವರೆಪಡಿಸಿರಿ ಅಂದನು. ಎಸ್ತೇರಳು ಮಾಡಿಸಿದ ಔತಣಕ್ಕೆ ಅರಸನೂ ಹಾಮಾನನೂ ಬಂದರು.
ನನ್ನ ಬೇಡುವಿಕೆಯ ಪ್ರಕಾರ ಕೊಡಲೂ ನನ್ನ ವಿಜ್ಞಾಪನೆಯ ಪ್ರಕಾರ ಮಾಡಲೂ ಅರಸನಿಗೆ ಸಮ್ಮತಿ ಯಾದರೆ ಅರಸನಿಗೂ ಹಾಮಾನನಿಗೂ ನಾನು ಇನ್ನೂ ಮಾಡುವ ಔತಣಕ್ಕೆ ಬರಬೇಕು. ನಾಳೆ ಅರಸನು ಹೇಳಿದ ಪ್ರಕಾರ ಮಾಡುವೆನು ಅಂದಳು.
ಆಗ ಅವನ ಹೆಂಡತಿಯಾದ ಜೆರೆಷಳೂ ಅವನ ಸಮಸ್ತ ಸ್ನೇಹಿತರೂ ಅವನಿಗೆಐವತ್ತು ಮೊಳ ಉದ್ದವಾದ ಒಂದು ಗಲ್ಲಿನ ಮರವು ಮಾಡಲ್ಪಡಲಿ; ಮೊರ್ದೆಕೈ ಅದರಲ್ಲಿ ಹಾಕಲ್ಪಡುವ ಹಾಗೆ ನಾಳೆ ಅರಸನ ಸಂಗಡ ಮಾತನಾಡು; ತರುವಾಯ ಅರಸನ ಸಂಗಡ ಔತಣಕ್ಕೆ ಸಂತೋಷ ವಾಗಿ ಹೋಗು ಅಂದರು. ಈ ಮಾತು ಹಾಮಾನನಿಗೆ ಚೆನ್ನಾಗಿ ಕಾಣಿಸಿದ್ದರಿಂದ ಗಲ್ಲಿನ ಮರವನ್ನು ಸಿದ್ಧ ಮಾಡಿಸಿದನು.