Home Bibles ಎಸ್ತೇರ್ 7:10 · ಕನ್ನಡ ಬೈಬಲ್
ಎಸ್ತೇರ್ 7:10 · ಕನ್ನಡ ಬೈಬಲ್

ಅವರು ಮೊರ್ದೆಕೈ ಗೋಸ್ಕರ ಹಾಮಾನನು ಸಿದ್ಧ ಮಾಡಿಸಿದ್ದ ಗಲ್ಲಿನ ಮರದಲ್ಲಿ ಅವನನ್ನು ಹಾಕಿದರು. ಆಗ ಅರಸನ ಕೋಪವು ಶಾಂತವಾಯಿತು.

Cross references

ನ್ಯಾಯಾಧಿಪತಿಗಳು 15:7

ಸಂಸೋನನು ಅವರಿಗೆ--ನೀವು ಈ ಪ್ರಕಾರ ಮಾಡಿದ್ದರಿಂದ ನಾನು ನಿಮಗೆ ಮುಯ್ಯಿಗೆ ಮುಯ್ಯಿ ಮಾಡಿಯೇ ಬಿಡುವೆನು ಅಂದನು.

ಎಸ್ತೇರ್ 2:1

ಈ ಕಾರ್ಯಗಳಾದ ತರುವಾಯ ಅರಸನಾದ ಅಹಷ್ವೇರೋಷನ ಕೋಪವು ಶಾಂತ ವಾದಾಗ ಅವನು ವಷ್ಟಿಯನ್ನೂ ಅವಳು ಮಾಡಿದ್ದನ್ನೂ ಅವಳಿಗೆ ವಿರೋಧವಾಗಿ ನೇಮಿಸಿದ್ದನ್ನೂ ಜ್ಞಾಪಕ ಮಾಡಿಕೊಂಡನು.

ಎಸ್ತೇರ್ 8:7

ಆಗ ಅರಸನಾದ ಅಹಷ್ವೇ ರೋಷನು ರಾಣಿಯಾದ ಎಸ್ತೇರಳಿಗೂ ಯೆಹೂದ್ಯ ನಾದ ಮೊರ್ದೆಕೈಗೂ ಹೇಳಿದ್ದೇನಂದರೆ--ಇಗೋ, ಹಾಮಾನನು ಯೆಹೂದ್ಯರ ಮೇಲೆ ತನ್ನ ಕೈ ಹಾಕಿದ್ದ ರಿಂದ ಅವನ ಮನೆಯನ್ನು ಎಸ್ತೇರಳಿಗೆ ಕೊಟ್ಟೆನು. ಅವನನ್ನು ಗಲ್ಲಿಗೆ ಹಾಕಿದ್ದಾರೆ.

ಎಸ್ತೇರ್ 9:14

ಆಗ ಅರಸನು ಹಾಗೆಯೇ ಮಾಡಲು ಆಜ್ಞಾಪಿಸಿದನು. ಆ ಆಜ್ಞೆಯು ಶೂಷನಿನಲ್ಲಿ ಕೊಡಲ್ಪಟ್ಟಾಗ ಅವರು ಹಾಮಾನನ ಹತ್ತು ಮಂದಿ ಕುಮಾರರನ್ನೂ ಗಲ್ಲಿಗೆ ಹಾಕಿದರು.

ಎಸ್ತೇರ್ 9:25

ಎಸ್ತೇರಳು ಅರಸನ ಮುಂದೆ ಬಂದಾಗ ಹಾಮಾನನು ಯೆಹೂದ್ಯರಿಗೆ ವಿರೋಧವಾಗಿ ಯೋಚಿಸಿದ ದುರಾಲೋಚನೆಯು ಅವನ ತಲೆಯ ಮೇಲೆ ಬರುವ ಹಾಗೆಯೂ ಅವನೂ ಅವನ ಮಕ್ಕಳೂ ಗಲ್ಲಿಗೆ ಹಾಕಲ್ಪಡುವ ಹಾಗೆಯೂ ಅರಸನು ಪತ್ರ ಗಳಿಂದ ಆಜ್ಞಾಪಿಸಿದನು;

ಯೋಬ 18:8

ತನ್ನ ಕಾಲುಗಳಿಂದ ಬಲೆಯಲ್ಲಿ ಸಿಕ್ಕಿಕೊಂಡನು; ಉರ್ಲಿನ ಮೇಲೆ ನಡೆದುಕೊಳ್ಳುತ್ತಾನೆ.

ಯೋಬ 20:8

ಕನಸಿನ ಹಾಗೆ ಅವನು ಕಾಣದೆ ಹಾರಿಹೋಗುವನು; ರಾತ್ರಿಯ ದರ್ಶನದ ಹಾಗೆ ಓಡಿಸಲ್ಪಡುವನು.

ಕೀರ್ತನೆಗಳು 7:16

ಅವನ ಕೇಡು ಅವನ ಸ್ವಂತ ತಲೆಯ ಮೇಲೆ ತಿರುಗುವದು; ಅವನ ನೆತ್ತಿಯ ಮೇಲೆ ಅವನ ಬಲಾತ್ಕಾರವು ಇಳಿಯುವದು;ಕರ್ತನನ್ನು ಆತನ ನೀತಿಯ ಪ್ರಕಾರ ನಾನು ಕೊಂಡಾಡುವೆನು; ಮಹೋನ್ನತನಾದ ಕರ್ತನ ನಾಮ ವನ್ನು ಕೀರ್ತಿಸುವೆನು.

ಕೀರ್ತನೆಗಳು 37:15

ಅವರ ಕತ್ತಿಯು ಅವರ ಹೃದಯವನ್ನೇ ಇರಿಯುವದು; ಅವರ ಬಿಲ್ಲುಗಳು ಮುರಿದುಹೋಗುವವು.

ಸಾಮೇತಿಗಳು 11:8

ನೀತಿವಂತನು ಇಕ್ಕಟ್ಟಿನಿಂದ ತಪ್ಪಿಸಿಕೊಳ್ಳುತ್ತಾನೆ; ಅವನ ಸ್ಥಳದಲ್ಲಿ ದುಷ್ಟನು ಬರುತ್ತಾನೆ.

ಸಾಮೇತಿಗಳು 26:27

ಗುಂಡಿ ಯನ್ನು ತೋಡುವವನು ತಾನೇ ಅದರಲ್ಲಿ ಬೀಳುತ್ತಾನೆ; ಕಲ್ಲು ಹೊರಳಿಸುವವನ ಮೇಲೆಯೇ ಅದು ತಿರಿಗಿ ಹೊರಳುವದು.ಸುಳ್ಳು ನಾಲಿಗೆಯಿಂದ ಬಾಧಿಸಲ್ಪ ಟ್ಟವರನ್ನೇ ಅದು ಹಗೆಮಾಡುವದು; ಮುಖಸ್ತುತಿ ಮಾಡುವ ಬಾಯಿಯು ನಾಶನವನ್ನುಂಟುಮಾಡುತ್ತದೆ.

ಯೆಹೆಜ್ಕೇಲ 5:13

ಈ ಪ್ರಕಾರ ನನ್ನ ಕೋಪವನ್ನು ತೀರಿಸಿಕೊಳ್ಳುವೆನು. ನನ್ನ ಉರಿಯನ್ನು ಅವರ ಮೇಲೆ ಶಾಂತಪಡಿಸಿ, ಸಮಾಧಾನ ಹೊಂದು ವೆನು; ಹೀಗೆ ನಾನು ನನ್ನ ಉರಿಯನ್ನು ಅವರ ಮೇಲೆ ತೀರಿಸಿದ ತರುವಾಯ ಕರ್ತನಾದ ನಾನು ನನ್ನ ಉದ್ದೇಶ ಪೂರ್ವಕವಾಗಿ ಮಾಡಿದ್ದೇನೆಂದು ಅವರಿಗೆ ಗೊತ್ತಾಗು ವದು.

ದಾನಿಯೇಲ 6:24

ಆಗ ಅರಸನು ಆಜ್ಞಾಪಿಸಲಾಗಿ ದಾನಿಯೇಲನ ಮೇಲೆ ತಪ್ಪುಹೊರಿಸಿದ ಮನುಷ್ಯರನ್ನು ತಂದು ಅವ ರನ್ನೂ ಅವರ ಹೆಂಡತಿ ಮಕ್ಕಳನ್ನೂ ಸಿಂಹಗಳ ಗವಿಯಲ್ಲಿ ಹಾಕಿದರು. ಅವರು ಗವಿಯ ತಳವನ್ನು ಮುಟ್ಟುವದಕ್ಕೆ ಮೊದಲೇ ಸಿಂಹಗಳು ಹಾರಿಬಂದು ಅವರ ಎಲುಬುಗ ಳನ್ನೆಲ್ಲಾ ತುಂಡು ತುಂಡಾಗಿ ಮುರಿದು ಹಾಕಿದವು.

ದಾನಿಯೇಲ 6:25

ಆಗ ಅರಸನಾದ ದಾರ್ಯಾವೆಷನು ಭೂಲೋ ಕದ ಎಲ್ಲಾ ಕಡೆಯಲ್ಲೂ ವಾಸವಾಗಿರುವ ಸಕಲ ಪ್ರಜೆ, ಜನಾಂಗ ಭಾಷೆಗಳವರಿಗೆ ಬರೆದದ್ದೇನಂದರೆ--ನಿಮಗೆ ಸಮಾಧಾನವು ಹೆಚ್ಚಾಗಲಿ.

ಜೆಕರ್ಯ 6:8

ಆಗ ಅವನು ನನಗೆ ಕೂಗಿ ಹೇಳಿದ್ದೇನಂ ದರೆ--ನೋಡು, ಉತ್ತರ ದೇಶಕ್ಕೆ ಹೊರಟವುಗಳು ಉತ್ತರ ದೇಶದಲ್ಲಿ ನನ್ನ ಆತ್ಮವನ್ನು ಶಾಂತಿಪಡಿಸಿವೆ ಅಂದನು.

Interlinear

Choose Theme