ಆಗ ಮನೆ ವಾರ್ತೆಯರಲ್ಲಿ ಒಬ್ಬನಾದ ಹರ್ಬೋನನು ಅರಸನ ಮುಂದೆ--ಇಗೋ, ಅರಸ ನನ್ನು ಕುರಿತು ಒಳ್ಳೇದನ್ನು ಹೇಳಿದ ಮೊರ್ದೆಕೈಗೋಸ್ಕರ ಹಾಮಾನನು ಮಾಡಿಸಿದ ಐವತ್ತು ಮೊಳ ಉದ್ದವಾದ ಗಲ್ಲಿನ ಮರವು ಹಾಮಾನನ ಮನೆಯಲ್ಲಿ ಅದೆ ಅಂದನು. ಅದಕ್ಕೆ ಅರಸನು--ಅವನನ್ನು ಅದರಲ್ಲಿ ತೂಗು ಹಾಕಿರಿ ಅಂದನು.ಅವರು ಮೊರ್ದೆಕೈ ಗೋಸ್ಕರ ಹಾಮಾನನು ಸಿದ್ಧ ಮಾಡಿಸಿದ್ದ ಗಲ್ಲಿನ ಮರದಲ್ಲಿ ಅವನನ್ನು ಹಾಕಿದರು. ಆಗ ಅರಸನ ಕೋಪವು ಶಾಂತವಾಯಿತು.
Cross references
ದಾವೀದನ ಕೈಯಲ್ಲಿ ಕತ್ತಿಯು ಇರಲಿಲ್ಲ. ದಾವೀದನು ಓಡಿಹೋಗಿ ಆ ಫಿಲಿಷ್ಟಿಯನ ಮೇಲೆ ನಿಂತು ಅವನ ಕತ್ತಿಯನ್ನೇ ಒರೆಯಿಂದ ಕಿತ್ತು ಅವನ ತಲೆಯನ್ನು ಕಡಿದು ಅವನನ್ನು ಕೊಂದು ಹಾಕಿದನು. ಫಿಲಿಷ್ಟಿಯರು ತಮ್ಮ ಪರಾಕ್ರಮಶಾಲಿ ಸತ್ತುಹೋದದ್ದನ್ನು ಕಂಡಾಗ ಓಡಿಹೋದರು.
ಅವನು ತನ್ನ ಮುಖವನ್ನು ಆ ಕಿಟಕಿಯ ಕಡೆಗೆ ಎತ್ತಿ--ನನ್ನ ಕಡೆ ಇರುವವರು ಯಾರು ಅಂದನು. ಆಗ ಇಬ್ಬರು ಮೂವರು ಕಂಚುಕಿಗಳು ಆ ಕಿಟಕಿ ಯಲ್ಲಿಂದ ಅವನನ್ನು ನೋಡಿದರು.
ಏಳನೇ ದಿವಸದಲ್ಲಿ ಅರಸನು ದ್ರಾಕ್ಷಾರಸದಿಂದ ಮನಸ್ಸಂತೋಷವಾಗಿರುವಾಗ ರಾಣಿಯಾದ ವಷ್ಟಿಯು ಬಹು ರೂಪವತಿಯಾದ್ದದರಿಂದ ಜನರಿಗೂ ಪ್ರಧಾ ನರಿಗೂ ಅವಳ ಸೌಂದರ್ಯವನ್ನು ತೋರಿಸುವದಕ್ಕೆ ರಾಣಿಗೆ ರಾಜ ಕಿರೀಟವನ್ನು ಧರಿಸಿ ಅರಸನ ಮುಂದೆ ಕರಕೊಂಡು ಬರುವದಕ್ಕೆ
ಆ ದಿವಸಗಳಲ್ಲಿ ಮೊರ್ದೆಕೈಯು ಅರಮನೆಯ ಬಾಗಲಲ್ಲಿ ಕುಳಿತಿರು ವಾಗ ದ್ವಾರಪಾಲಕರಾದಂಥ ಅರಸನ ಮನೆವಾರ್ತೆ ಯವರಾದ ಬಿಗೆತಾನನೂ ತೆರೆಷನೂ ರೌದ್ರವುಳ್ಳ ವರಾಗಿ ಅರಸನಾದ ಅಹಷ್ವೇರೋಷನ ಮೇಲೆ ಕೈ ಹಾಕಲು ಹುಡುಕಿದರು.
ಆಗ ಅವನ ಹೆಂಡತಿಯಾದ ಜೆರೆಷಳೂ ಅವನ ಸಮಸ್ತ ಸ್ನೇಹಿತರೂ ಅವನಿಗೆಐವತ್ತು ಮೊಳ ಉದ್ದವಾದ ಒಂದು ಗಲ್ಲಿನ ಮರವು ಮಾಡಲ್ಪಡಲಿ; ಮೊರ್ದೆಕೈ ಅದರಲ್ಲಿ ಹಾಕಲ್ಪಡುವ ಹಾಗೆ ನಾಳೆ ಅರಸನ ಸಂಗಡ ಮಾತನಾಡು; ತರುವಾಯ ಅರಸನ ಸಂಗಡ ಔತಣಕ್ಕೆ ಸಂತೋಷ ವಾಗಿ ಹೋಗು ಅಂದರು. ಈ ಮಾತು ಹಾಮಾನನಿಗೆ ಚೆನ್ನಾಗಿ ಕಾಣಿಸಿದ್ದರಿಂದ ಗಲ್ಲಿನ ಮರವನ್ನು ಸಿದ್ಧ ಮಾಡಿಸಿದನು.
ಅವು ಅರಸನ ಮುಂದೆ ಓದಲ್ಪಟ್ಟಾಗ ದ್ವಾರಪಾಲಕರಾಗಿದ್ದ ಅರಸನ ಮನೆವಾರ್ತೆಯವರಲ್ಲಿ ಇಬ್ಬರು ಬಿಗೆತಾನನೂ ತೆರೆಷನೂ ಅರಸನಾದ ಅಹಷ್ವೇರೋಷನ ಮೇಲೆ ಕೈಹಾಕಲು ಹುಡುಕುತ್ತಾ ಇದ್ದರೆಂಬುವ ವರ್ತಮಾನ ವನ್ನು ಮೊರ್ದೆಕೈಯು ತಿಳಿಸಿದನೆಂದು ಬರೆಯಲ್ಪಟ್ಟಿದ್ದು ಸಿಕ್ತಿತು.
ಅವರು ಇನ್ನೂ ಅವನ ಸಂಗಡ ಮಾತನಾಡುತ್ತಿರುವಾಗ ಅರಸನ ಮನೆ ವಾರ್ತೆಯವರು ಬಂದು ಎಸ್ತೇರಳು ಸಿದ್ಧಮಾಡಿಸಿದ ಔತಣಕ್ಕೆ ಹಾಮಾನನನ್ನು ಕರಕ್ಕೊಂಡು ಹೋಗಲು ತ್ವರೆಮಾಡಿದರು.
ಆಗ ಅರಸನಾದ ಅಹಷ್ವೇ ರೋಷನು ರಾಣಿಯಾದ ಎಸ್ತೇರಳಿಗೂ ಯೆಹೂದ್ಯ ನಾದ ಮೊರ್ದೆಕೈಗೂ ಹೇಳಿದ್ದೇನಂದರೆ--ಇಗೋ, ಹಾಮಾನನು ಯೆಹೂದ್ಯರ ಮೇಲೆ ತನ್ನ ಕೈ ಹಾಕಿದ್ದ ರಿಂದ ಅವನ ಮನೆಯನ್ನು ಎಸ್ತೇರಳಿಗೆ ಕೊಟ್ಟೆನು. ಅವನನ್ನು ಗಲ್ಲಿಗೆ ಹಾಕಿದ್ದಾರೆ.
ಆಗ ಅರಸನು ಹಾಗೆಯೇ ಮಾಡಲು ಆಜ್ಞಾಪಿಸಿದನು. ಆ ಆಜ್ಞೆಯು ಶೂಷನಿನಲ್ಲಿ ಕೊಡಲ್ಪಟ್ಟಾಗ ಅವರು ಹಾಮಾನನ ಹತ್ತು ಮಂದಿ ಕುಮಾರರನ್ನೂ ಗಲ್ಲಿಗೆ ಹಾಕಿದರು.
ಎಸ್ತೇರಳು ಅರಸನ ಮುಂದೆ ಬಂದಾಗ ಹಾಮಾನನು ಯೆಹೂದ್ಯರಿಗೆ ವಿರೋಧವಾಗಿ ಯೋಚಿಸಿದ ದುರಾಲೋಚನೆಯು ಅವನ ತಲೆಯ ಮೇಲೆ ಬರುವ ಹಾಗೆಯೂ ಅವನೂ ಅವನ ಮಕ್ಕಳೂ ಗಲ್ಲಿಗೆ ಹಾಕಲ್ಪಡುವ ಹಾಗೆಯೂ ಅರಸನು ಪತ್ರ ಗಳಿಂದ ಆಜ್ಞಾಪಿಸಿದನು;
ದಿಗಿಲು ಗಳು ನೀರಿನಂತೆ ಅವನನ್ನು ಹಿಡಿಯುತ್ತವೆ. ರಾತ್ರಿ ಯಲ್ಲಿ ಬಿರುಗಾಳಿ ಅವನನ್ನು ಸುಲುಕೊಳ್ಳುತ್ತದೆ.
ಅವನು ಕುಣಿಯನ್ನು ಅಗೆದಿದ್ದಾನೆ. ಆದರೆ ತಾನು ಅಗೆದ ಕುಣಿಯೊಳಗೆ ತಾನೇ ಬಿದ್ದಿದ್ದಾನೆ.
ಜನಾಂಗಗಳು ತಾವು ಅಗೆದ ಕುಣಿಯಲ್ಲಿ ತಾವೇ ಬಿದ್ದಿದ್ದಾರೆ; ಅವರು ಅಡಗಿಸಿಟ್ಟ ಬಲೆಯಲ್ಲಿ ಅವರ ಕಾಲು ಸಿಕ್ಕಿಕೊಂಡಿತು.
ನಾಶನವು ಅವನಿಗೆ ತಿಳಿಯದೆ ಬರಲಿ; ಅವನು ಅಡಗಿಸಿಟ್ಟ ಬಲೆಯು ಅವನನ್ನೇ ಹಿಡಿಯಲಿ; ಅಂಥಾ ನಾಶನಕ್ಕಾಗಿ ಅವನು ಅದರಲ್ಲಿಯೇ ಬೀಳಲಿ,
ದುಷ್ಟನು ದೊಡ್ಡ ಅಧಿಕಾರದಲ್ಲಿರು ವದನ್ನು ನಾನು ನೋಡಿದೆನು; ಅವನು ಹಸುರಾಗಿ ವಿಸ್ತರಿಸಿಕೊಂಡ ಮರದ ಹಾಗೆ ಇದ್ದನು.
ಕ್ಷಣಮಾತ್ರದಲ್ಲಿ ಹೀಗೆ ನಾಶನಕ್ಕೆ ಅವರನ್ನು ಬರಮಾಡಿದಿ. ಅವರು ದಿಗಿಲುಗಳಿಂದ ಸಂಪೂರ್ಣವಾಗಿ ನಾಶವಾಗಿದ್ದಾರೆ.
ನಾನು ತಪ್ಪಿಸಿಕೊಂಡು ಹೋಗುವಷ್ಟರಲ್ಲಿ ದುಷ್ಟರು ತಮ್ಮ ಬಲೆಗಳಲ್ಲಿ ಬೀಳಲಿ.
ಸಂಪೂರ್ಣನ ನೀತಿಯು ಅವನ ಮಾರ್ಗವನ್ನು ಸರಾಗಮಾಡುವದು; ದುಷ್ಟನು ತನ್ನ ದುಷ್ಟತ್ವದಿಂದಲೇ ಬೀಳುವನು.
ರಾಜ್ಯದ ಎಲ್ಲಾ ದೇಶಾಧಿಪತಿಗಳೂ ರಾಜ್ಯಪಾಲರೂ ನಾಯ ಕರೂ ಪ್ರಧಾನರೂ ಆಲೋಚನೆಗಾರರೂ ಒಟ್ಟುಗೂಡಿ ಆಲೋಚಿಸಿದ್ದೇನಂದರೆ--ಓ ಅರಸನೇ, ಯಾರಾದರೂ ಮೂವತ್ತು ದಿವಸಗಳವರೆಗೂ ನಿನ್ನನ್ನು ಬಿಟ್ಟು ಬೇರೆ ಯಾವ ದೇವರಿಗಾಗಲಿ ಮನುಷ್ಯರಿಗಾಗಲಿ ವಿಜ್ಞಾ ಪನೆ ಮಾಡಿದ್ದಾದರೆ ಅಂತವರು ಸಿಂಹದ ಗವಿಯಲ್ಲಿ ಹಾಕಲ್ಪಡುವರೆಂಬ ರಾಜಾಜ್ಞೆಯನ್ನು ವಿಧಿಸಿ, ಸ್ಥಿರ ಕಟ್ಟಳೆ ಯನ್ನು ಕೊಡತಕ್ಕದ್ದು.
ಆಗ ಅರಸನು ಆಜ್ಞಾಪಿಸಲಾಗಿ ದಾನಿಯೇಲನ ಮೇಲೆ ತಪ್ಪುಹೊರಿಸಿದ ಮನುಷ್ಯರನ್ನು ತಂದು ಅವ ರನ್ನೂ ಅವರ ಹೆಂಡತಿ ಮಕ್ಕಳನ್ನೂ ಸಿಂಹಗಳ ಗವಿಯಲ್ಲಿ ಹಾಕಿದರು. ಅವರು ಗವಿಯ ತಳವನ್ನು ಮುಟ್ಟುವದಕ್ಕೆ ಮೊದಲೇ ಸಿಂಹಗಳು ಹಾರಿಬಂದು ಅವರ ಎಲುಬುಗ ಳನ್ನೆಲ್ಲಾ ತುಂಡು ತುಂಡಾಗಿ ಮುರಿದು ಹಾಕಿದವು.