ಅವನು ಅರಸನಾದ ಅಹಷ್ವೇರೋಷನ ಹೆಸರಿನಲ್ಲಿ ಬರೆದು ಅರಸನ ಉಂಗುರದಿಂದ ಮುದ್ರೆ ಹಾಕಿ ಪತ್ರಗಳನ್ನು, ಕುದುರೆಗಳನ್ನು, ಸವಾರಿ ಹತ್ತಿ ಕೊಂಡಿದ್ದ ಅಂಚೆಯವರ ಮೂಲಕ ಹೇಸರ ಕತ್ತೆಗಳ ಮೇಲೆಯೂ ಒಂಟೆಗಳ ಮೇಲೆಯೂ ವೇಗವಾಗಿ ಓಡುವ ಎಳೇ ಒಂಟೆಗಳ ಮೇಲೆಯೂ ಕಳುಹಿಸಿದನು.
Cross references
ಹೀಗೆಯೇ ಪ್ರತಿ ಮನುಷ್ಯನು ತನ್ನ ವಂತಿನ ಪ್ರಕಾರ ಕುದುರೆಗಳಿಗೋಸ್ಕರವೂ ಸವಾರಿ ಒಂಟೆಗಳಿ ಗೋಸ್ಕರವೂ ಅವುಗಳ ಸ್ಥಳಕ್ಕೆ ಜವೆಗೋಧಿಯನ್ನೂ ಹುಲ್ಲನ್ನೂ ತಂದನು.
ಹೀಗೆ ಅವಳು ಅಹಾ ಬನ ಹೆಸರಿನಲ್ಲಿ ಪತ್ರಗಳನ್ನು ಬರೆದು ಅವುಗಳಿಗೆ ಅವನ ಮುದ್ರೆ ಹಾಕಿ ಆ ಪತ್ರಗಳನ್ನು ನಾಬೋತನ ಸಂಗಡ ಅವನ ಪಟ್ಟಣದಲ್ಲಿ ವಾಸವಾಗಿರುವ ಹಿರಿಯ ರಿಗೂ ಗೌರವಸ್ಥರಿಗೂ ಕಳುಹಿಸಿದಳು.
ಅದೇ ಪ್ರಕಾರ ದೂತರು ಅರಸನ ಕೈಯಿಂದಲೂ ಅವನ ಪ್ರಧಾನರ ಕೈಯಿಂದಲೂ ಪತ್ರಗಳನ್ನು ತಕ್ಕೊಂಡು ಅರಸನ ಅಪ್ಪಣೆಯ ಪ್ರಕಾರ ಸಮಸ್ತ ಇಸ್ರಾಯೇಲ್ ಯೆಹೂದ ದೇಶಗಳ ಮೇಲೆ ಹೋಗಿ--ಇಸ್ರಾಯೇಲ್ ಮಕ್ಕಳೇ, ಅಬ್ರಹಾಮ್ ಇಸಾಕ್ ಇಸ್ರಾಯೇಲ್ ಕರ್ತನಾದ ದೇವರ ಕಡೆಗೆ ತಿರುಗಿರಿ. ಆಗ ಆತನೂ ಅಶ್ಶೂರಿನ ಅರಸುಗಳ ಕೈಗೆ ತಪ್ಪಿಸಿಕೊಂಡ ನಿಮ್ಮ ಉಳಿದವರ ಬಳಿಗೆ ತಿರುಗುವನು.
ಆಗ ಮೊದಲನೇ ತಿಂಗಳ ಹದಿಮೂರನೇ ದಿವಸದಲ್ಲಿ ಅರಸನ ಲೇಖಕರು ಕರೆಯಲ್ಪಟ್ಟರು. ಹಾಮಾನನು ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಪ್ರತಿ ಪ್ರಾಂತ್ಯದ ಮೇಲಿರುವ ಅರಸನ ಕೈ ಕೆಳಗಿನ ಉಪ ರಾಜರುಗಳಿಗೂ ಅಧಿಪತಿಗಳಿಗೂ ಪ್ರತಿ ಪ್ರಾಂತ್ಯದಲ್ಲಿ ಜನರ ಮೇಲಿರುವ ಅಧಿಕಾರಿಗೂ ಅದರದರ ಬರಹದ ಪ್ರಕಾರವಾಗಿಯೂ ಜನರ ಪ್ರತಿಯೊಬ್ಬರ ಭಾಷೆಯ ಪ್ರಕಾರವಾಗಿಯೂ ಬರೆಯಲ್ಪಟ್ಟಿತು. ಅದು ಅರಸನಾದ ಅಹಷ್ವೇರೋಷನ ಹೆಸರಿನಲ್ಲಿ ಬರೆಯಲ್ಪಟ್ಟು ಅರಸನ ಉಂಗುರದಿಂದ ಮುದ್ರೆ ಹಾಕಲ್ಪಟ್ಟಿತು.
ಒಂದೇ ದಿನದಲ್ಲಿ ಅಂದರೆ ಅಡಾರ್ ತಿಂಗಳೆಂಬ ಹನ್ನೆರಡನೇ ತಿಂಗಳ ಹದಿಮೂರನೇ ದಿನದಲ್ಲಿ ಹಿರಿಯರೂ ಕಿರಿಯರೂ ಮಕ್ಕಳೂ ಸ್ತ್ರೀಯರೂ ಸಹಿತವಾಗಿ ಎಲ್ಲಾ ಯೆಹೂದ್ಯರನ್ನು ಸಂಹರಿಸುವದಕ್ಕೂ ಕೊಂದುಹಾಕು ವದಕ್ಕೂ ನಾಶಮಾಡುವದಕ್ಕೂ ಅವರ ಆಸ್ತಿಯನ್ನು ಕೊಳ್ಳೆಹೊಡೆಯುವದಕ್ಕೂ ಅರಸನ ಸಮಸ್ತ ಪ್ರಾಂತ್ಯಗಳಿಗೆ ಅಂಚೆಯವರ ಮೂಲಕ ಪತ್ರಿಕೆಗಳು ಕಳುಹಿಸ ಲ್ಪಟ್ಟವು.
ಆದರೆ ನನ್ನ ದಿವಸಗಳು ಅಂಚೆಯವನಿಗಿಂತಲೂ ತ್ವರೆಯಾಗಿ. ಮೇಲನ್ನು ನೋಡದೆ ಅವು ಓಡಿಹೋಗು ತ್ತವೆ.
ಅರಸನ ಮಾತು ಎಲ್ಲಿ ದೆಯೋ ಅಲ್ಲಿ ಶಕ್ತಿ ಇದೆ; ನೀನು ಏನು ಮಾಡು ತ್ತಿರುವೆ ಎಂದು ಅವನಿಗೆ ಹೇಳುವವನಾರು?
ಒಂಟೆಗಳ ಸಮೂಹವು ನಿನ್ನನ್ನು ಮುಚ್ಚುವದು; ಮಿದ್ಯಾನಿನ, ಏಫದ ವೇಗವುಳ್ಳ ಒಂಟೆಗಳು ಅವೆಲ್ಲಾ ಶೇಬದಿಂದಲೂ ಬರುವವು; ಅವು ಬಂಗಾರವನ್ನೂ ಧೂಪವನ್ನೂ ತರುವವು; ಅವು ಕರ್ತನ ಸ್ತೋತ್ರ ಗಳನ್ನು ಸಾರುವವು.
ಅವರು ನಿಮ್ಮ ಸಹೋದರರನ್ನು ಕುದುರೆಗಳ ಮೇಲೆಯೂ ರಥ ಗಳಲ್ಲಿಯೂ ಪಾಲ್ಕಿಗಳಲ್ಲಿಯೂ ಹೇಸರ ಕತ್ತೆಗಳ ಮೇಲೆಯೂ ವೇಗವಾಗಿ ಹೋಗುವ ಪ್ರಾಣಿಗಳ ಮೇಲೆಯೂ ಸಮಸ್ತ ಜನಾಂಗಗಳೊಳಗಿಂದ ಕರ್ತ ನಿಗೆ ಕಾಣಿಕೆಯಾಗಿ ಇಸ್ರಾಯೇಲಿನ ಮಕ್ಕಳು ಕಾಣಿಕೆ ಯನ್ನು ಶುದ್ಧ ಪಾತ್ರೆಯಲ್ಲಿ ಕರ್ತನ ಮನೆಗೆ ತರುವ ಪ್ರಕಾರ ನನ್ನ ಪರಿಶುದ್ಧ ಪರ್ವತವಾದ ಯೆರೂಸ ಲೇಮಿಗೆ ತರುವರೆಂದು ಕರ್ತನು ಹೇಳುತ್ತಾನೆ.
ನಾನು ಅಶುದ್ಧನಲ್ಲ, ಬಾಳನನ್ನು ಹಿಂಬಾಲಿಸಲಿಲ್ಲ ಎಂದು ನೀನು ಹೇಳುವದು ಹೇಗೆ? ತಗ್ಗಿನಲ್ಲಿ ನಿನ್ನ ಮಾರ್ಗವನ್ನು ನೋಡು; ನೀನು ಮಾಡಿದ್ದನ್ನು ತಿಳುಕೋ; ನೀನು ತೀವ್ರವಾಗಿ ಸಂಚಾರ ಮಾಡುವ ಹೆಣ್ಣು ಒಂಟೆಯೇ;
ಸ್ತಂಭಗಳ ವಿಷಯ, ಒಂದು ಸ್ತಂಭದ ಉದ್ದವು ಹದಿನೆಂಟು ಮೊಳವಾಗಿತ್ತು, ಹನ್ನೆರಡು ಮೊಳದ ಸರಿಗೆ ಅದನ್ನು ಸುತ್ತಿಕೊಂಡಿತು; ಅದರ ದಪ್ಪ ನಾಲ್ಕು ಬೆರಳು; ಅದು ಟೊಳ್ಳಾಗಿತ್ತು.
ಅರಸನಾದ ನೆಬೂಕದ್ನೆಚ್ಚರನು, ಭೂಲೋಕದಲ್ಲೆಲ್ಲಾ ವಾಸಮಾಡುವ ಎಲ್ಲಾ ಪ್ರಜೆಗಳಿಗೂ ಜನಾಂಗಗಳಿಗೂ ಭಾಷೆಯವರಿಗೂ--ನಿಮಗೆ ಶಾಂತಿಯು ಹೆಚ್ಚಾಗಲಿ.